
ನವದೆಹಲಿ, ಡಿಸೆಂಬರ್ 26: ಪ್ರಧಾನಿ ನರೇಂದ್ರ ಮೋದಿ ಅವರ ‘ಮೇಕ್ ಇನ್ ಇಂಡಿಯಾ’ ಬಗ್ಗೆ ರಾಹುಲ್ ಗಾಂಧಿ ಟೀಕಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಹ ಅದೇ ಧಾಟಿಯಲ್ಲಿ ಮಾತನಾಡುತ್ತಿದ್ದಾರೆ. ಇಬ್ಬರೂ ವಾಸ್ತವವನ್ನು ಒಪ್ಪಿಕೊಳ್ಳುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕಿಡಿ ಕಾರಿದ್ದಾರೆ. ದೇಶದಲ್ಲಿ ಫಾಕ್ಸ್‌ಕಾನ್‌ನಂತಹ ಜಾಗತಿಕ ಪ್ರಮುಖ ಕಂಪನಿಗಳ ವಿಸ್ತರಣೆಗೆ ಕೇಂದ್ರ ಪ್ರೋತ್ಸಾಹಿಸುತ್ತಿದೆ. ಕರ್ನಾಟಕದಲ್ಲಿ ಸಹ ಈ ಕಾರ್ಖಾನೆಯನ್ನು ಸ್ಥಾಪಿಸಲು ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ ಭೂಮಿ ಹಂಚಿಕೆ ಮಾಡಲಾಗಿತ್ತು ಎಂಬುದನ್ನು ಕಾಂಗ್ರೆಸ್ ಮರೆತುಬಿಟ್ಟಿದೆ ಎಂದು ಸಿಎಂಗೆ ಪ್ರಲ್ಹಾದ್ ಜೋಶಿ ತಿರುಗೇಟು ಕೊಟ್ಟಿದ್ದಾರೆ.
ಕಾಂಗ್ರೆಸ್ ನಟಿಸುವುದನ್ನು ನಿಲ್ಲಿಸಿ, ವಾಸ್ತವವನ್ನು ಒಪ್ಪಿಕೊಳ್ಳಬೇಕು. ಭಾರತದ ಉತ್ಪಾದನಾ ಬೆಳವಣಿಗೆ ಪ್ರಧಾನಿ ಮೋದಿಯವರ ಕಲ್ಪನೆಯಂತೆ ಮೇಕ್ ಇನ್ ಇಂಡಿಯಾ’ ದ ಫಲಿತಾಂಶವೇ ಆಗಿದೆ ಎಂದು ಪ್ರಲ್ಹಾದ್ ಜೋಶಿ ಪ್ರತಿಪಾದಿಸಿದ್ದಾರೆ.
ಪ್ರಧಾನಿ ಮೋದಿ ಅವರು ಪರಿಚಯಿಸಿದ ಪಿಎಲ್‌ಐ ಯೋಜನೆಯ ನೇರ ಫಲಾನುಭವಿ ಆಗಿದೆ ಫಾಕ್ಸ್‌ಕಾನ್ ಕಂಪನಿ. ಈ PLI ಯೋಜನೆಯಡಿಯೇ 14,065 ಕೋಟಿ ಹೂಡಿಕೆಗಳನ್ನು ಆಕರ್ಷಿಸಲಾಗಿದೆ. ಅಕ್ಟೋಬರ್ 2025ರ ವೇಳೆಗೆ ಸುಮಾರು 1.32 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಸಿಎಂಗೆ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ: Video: ವೋಟ್ ಚೋರಿಯಾಗಿಲ್ಲ, ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಭಾರತ ಇದೀಗ ದೇಶೀಯವಾಗಿ ಚಿಪ್‌ಗಳು, ಎಲೆಕ್ಟ್ರಾನಿಕ್ ಘಟಕಗಳು ಮತ್ತು ಉಪ-ಮಾಡ್ಯೂಲ್‌ಗಳನ್ನು ಅಭಿವೃದ್ಧಿಪಡಿಸುತ್ತಿದೆ. 2014-15ರಲ್ಲಿ 0.18 ಲಕ್ಷ ಕೋಟಿ ರೂ. ಇದ್ದ ಮೊಬೈಲ್ ಫೋನ್ ಉತ್ಪಾದನೆ ಇಂದು 5.5 ಲಕ್ಷ ಕೋಟಿ ರೂ.ಗೆ ಏರಿದೆ. ಇದು 28 ಪಟ್ಟು ಹೆಚ್ಚಾಗಿದೆ. ರಫ್ತು 0.01 ಲಕ್ಷ ಕೋಟಿ ರೂ.ನಿಂದ 2 ಲಕ್ಷ ಕೋಟಿಗೆ ಬೆಳೆದಿದೆ. ಇದು 127 ಪಟ್ಟು ಹೆಚ್ಚಾಗಿದೆ. ಇದು ಮೇಕ್ ಇನ್ ಇಂಡಿಯಾದ ಫಲವಲ್ಲವೇ? ಎಂದು ಸಿಎಂಗೆ ಚಾಟಿ ಬೀಸಿದ್ದಾರೆ.
Congress should stop pretending and start acknowledging reality.
India’s manufacturing surge is the outcome of Make in India, envisioned and driven by Hon’ble PM @narendramodi ji.Foxconn is a direct beneficiary of the PLI Scheme which was introduced by PM @narendramodi ji.… https://t.co/P775c4fNq1
— Pralhad Joshi (@JoshiPralhad) December 26, 2025
ರಫ್ತು 0.01 ಲಕ್ಷ ಕೋಟಿಯಿಂದ 2 ಲಕ್ಷ ಕೋಟಿ ರೂ.ಗೆ ಬೆಳೆದಿದೆ. ಇದು 127 ಪಟ್ಟು ಹೆಚ್ಚಾಗಿದೆ. ವಿಪರ್ಯಾಸವೆಂದರೆ, ಈ ಹಿಂದೆ ರಾಹುಲ್ ಗಾಂಧಿ, ಭಾರತದಲ್ಲಿ ಫೋನ್‌ಗಳನ್ನು “ತಯಾರಿಸಲಾಗುವುದಿಲ್ಲ, ಜೋಡಿಸಲಾಗುತ್ತದೆ” ಎಂದಿದ್ದರು. ಆದರೆ NDA ಸರ್ಕಾರದ ಪ್ರೋತ್ಸಾಹದಲ್ಲಿ ಸ್ಮಾರ್ಟ್ ಫೋನ್ ಉತ್ಪಾದನಾ ಘಟಕಗಳು ಇದಕ್ಕೆ ತಕ್ಕುತ್ತರ ಕೊಟ್ಟಿವೆ ಎಂದಿದ್ದಾರೆ ಪ್ರಲ್ಹಾದ್ ಜೋಶಿ.
ಇದನ್ನೂ ಓದಿ: ಅಧಿವೇಶನ ನಡೆಯುವಾಗಲೇ ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡ್ತಾರೆ; ಪ್ರಲ್ಹಾದ್ ಜೋಶಿ ಟೀಕೆ
ಬಿಜೆಪಿ ನೇತೃತ್ವದ ಸುಧಾರಣೆಗಳ ಫಲಿತಾಂಶಗಳನ್ನು ಪ್ರಶ್ನಿಸುವುದು ಕಾಂಗ್ರೆಸ್‌ನ ಹತಾಶೆಯನ್ನು ತೋರಿಸುತ್ತದೆ. ಆದರೆ, ವಾಸ್ತವದಲ್ಲಿ ಭಾರತದ ಉತ್ಪಾದಕ, ಆರ್ಥಿಕತೆ ನಿರ್ಣಾಯಕ ನಾಯಕತ್ವದ ಪ್ರತಿಫಲವೇ ಹೊರತು ಎರವಲು ಪಡೆದ ನಿರೂಪಣೆಗಳಲ್ಲ ಎಂದು ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ನಕಲಿ ಸುದ್ದಿ ಮಸೂದೆಯಡಿ “ಹೆಸರು ಮತ್ತು ಅವಮಾನ”ದ ಸ್ವಯಂ ಘೋಷಿತ ಪ್ರತಿಪಾದಕ ಪ್ರಿಯಾಂಕ ಖರ್ಗೆ ಈಗ ಸ್ವತಃ ನಕಲಿ ಸುದ್ದಿಗಳನ್ನು ಸೃಷ್ಟಿಸಿ ಸಿಕ್ಕಿಬಿದ್ದಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಜನರನ್ನು ದಾರಿ ತಪ್ಪಿಸಲು, ಅವ್ಯವಸ್ಥೆ ಸೃಷ್ಟಿಸಲು ಮತ್ತು ವಿಕೃತ ನಿರೂಪಣೆಯನ್ನು ಮುಂದಿಡಲು ಕರ್ನಾಟಕ ಐಟಿ ಸಚಿವರು AI- ರಚಿತ ಚಿತ್ರವನ್ನು ಹಂಚಿಕೊಳ್ಳುತ್ತಿರುವುದು ಸ್ಪಷ್ಟ ದುರುದ್ದೇಶವನ್ನು ಬಹಿರಂಗಪಡಿಸುತ್ತದೆ ಎಂದು ಅವರು ಟೀಕಿಸಿದ್ದಾರೆ.
ಜನರನ್ನು ದಾರಿ ತಪ್ಪಿಸಿ, ಶಾಂತಿ ಸುವ್ಯವಸ್ಥೆಯನ್ನು ಹದಗೆಡಿಸಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಲು ಕರ್ನಾಟಕದ ಐಟಿ ಸಚಿವರು AI ರಚಿತ ಫೋಟೊವನ್ನು ಹಂಚಿಕೊಂಡಿರುವುದು, ಸಮಾಜದಲ್ಲಿ ಸೌಹಾರ್ದತೆಗೆ ಭಂಗ ತರುವ ದುರುದ್ದೇಶ ಬಹಿರಂಗವಾಗಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ