ಸಂಸತ್​​​ನಲ್ಲಿ ವಿರೋಧ ಪಕ್ಷದ ನಾಯಕರಾಗುವಂತೆ ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕರ ಒತ್ತಾಯ

|

Updated on: Jun 06, 2024 | 5:04 PM

ಕಾಂಗ್ರೆಸ್ ರಾಜ್ಯಸಭಾ ಸಂಸದ ವಿವೇಕ್ ಟಂಖಾ ಕೂಡ ಇದೇ ಮಾತುಗಳನ್ನು ಹೇಳಿದ್ದು, "ರಾಹುಲ್ ಜಿ ಪ್ರಚಾರವನ್ನು ಮುಂದಾಳತ್ವದಲ್ಲಿ ಮುನ್ನಡೆಸಿದರು. ಅವರು ಪಕ್ಷದ ಮುಖವಾಗಿದ್ದರು. ಅವರು ಲೋಕಸಭೆಯ ಸಂಸದೀಯ ಪಕ್ಷದ ನಾಯಕತ್ವ ವಹಿಸುವ ಕರ್ತವ್ಯವನ್ನು ಹೊಂದಿದ್ದಾರೆ. ರಾಹುಲ್ ಗಾಂಧಿ ಅವರು ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಪಕ್ಷದ ನಾಯಕರು/ಸಂಸದರು ತೆಗೆದುಕೊಳ್ಳಬೇಕಾಗಿದೆ ಎಂದಿದ್ದಾರೆ.

ಸಂಸತ್​​​ನಲ್ಲಿ ವಿರೋಧ ಪಕ್ಷದ ನಾಯಕರಾಗುವಂತೆ ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕರ ಒತ್ತಾಯ
ರಾಹುಲ್ ಗಾಂಧಿ
Follow us on

ದೆಹಲಿ ಜೂನ್ 06: ಸಾರ್ವತ್ರಿಕ ಚುನಾವಣೆಯಲ್ಲಿ ಇಂಡಿಯಾ (INDIA) ಬಣದ ಪ್ರಬಲ ಪ್ರದರ್ಶನದ ನಡುವೆ ಲೋಕಸಭೆಯಲ್ಲಿ 99 ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ (Congress) ಈಗ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಅರ್ಹವಾಗಿದೆ. ಇದರ ಪರಿಣಾಮವಾಗಿ ರಾಹುಲ್ ಗಾಂಧಿ (Rahul Gandhi) ಅವರು ಪ್ರತಿಷ್ಠಿತ ಹುದ್ದೆಯನ್ನು ಅಲಂಕರಿಸಬೇಕೆಂಬ ಕೂಗು ಜೋರಾಗಿದೆ.
ಕಾಂಗ್ರೆಸ್ ಸಂಸದ-ಚುನಾಯಿತ ಮಾಣಿಕಂ ಟ್ಯಾಗೋರ್ ಅವರು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಕೆಳಮನೆಯಲ್ಲಿ ವಿರೋಧಪಕ್ಷದ ನಾಯಕರಾಗಬೇಕು ಎಂದು ಒತ್ತಾಯಿಸಿದ್ದಾರೆ.

“ನಾನು ನನ್ನ ನಾಯಕ ರಾಹುಲ್ ಗಾಂಧಿಯವರ ಹೆಸರಿನ ಮೇಲೆ ಮತ ಕೇಳಿದೆ. ಅವರು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಬೇಕು ಎಂದು ನಾನು ಭಾವಿಸುತ್ತೇನೆ. ಚುನಾಯಿತ ಕಾಂಗ್ರೆಸ್ ಸಂಸದರೂ ಇದೇ ರೀತಿ ಯೋಚಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಕಾಂಗ್ರೆಸ್ ಸಂಸದೀಯ ಪಕ್ಷ ಯಾವ ರೀತಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು. ನಮ್ಮದು ಡೆಮಾಕ್ರಟಿಕ್ ಪಕ್ಷ” ಎಂದು ತಮಿಳುನಾಡಿನ ವಿರುದುನಗರದಿಂದ ಗೆದ್ದಿರುವ ಟ್ಯಾಗೋರ್ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ರಾಜ್ಯಸಭಾ ಸಂಸದ ವಿವೇಕ್ ಟಂಖಾ ಕೂಡ ಇದೇ ಮಾತುಗಳನ್ನು ಹೇಳಿದ್ದು, “ರಾಹುಲ್ ಜಿ ಪ್ರಚಾರವನ್ನು ಮುಂದಾಳತ್ವದಲ್ಲಿ ಮುನ್ನಡೆಸಿದರು. ಅವರು ಪಕ್ಷದ ಮುಖವಾಗಿದ್ದರು. ಅವರು ಲೋಕಸಭೆಯ ಸಂಸದೀಯ ಪಕ್ಷದ ನಾಯಕತ್ವ ವಹಿಸುವ ಕರ್ತವ್ಯವನ್ನು ಹೊಂದಿದ್ದಾರೆ.ರಾಹುಲ್ ಗಾಂಧಿ ಅವರು ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಪಕ್ಷದ ನಾಯಕರು/ಸಂಸದರು ತೆಗೆದುಕೊಳ್ಳಬೇಕಾಗಿದೆ. ಅದು ಅವಿರೋಧ ಆಯ್ಕೆಯಾಗಿರುತ್ತದೆ ಎಂದಿದ್ದಾರೆ

ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ, “ಆ ಸ್ಥಾನ ಕಾಂಗ್ರೆಸ್‌ಗೆ ಬರಲಿದೆ ಎಂದು ನಾನು ಭಾವಿಸುತ್ತೇನೆ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ, ಕಾಂಗ್ರೆಸ್ ಪರವಾಗಿ ರಾಹುಲ್ ಗಾಂಧಿ ಅವರೇ ವಿರೋಧ ಪಕ್ಷದ ನಾಯಕರಾಗಬೇಕು” ಎಂದು ಹೇಳಿದರು.

ಇದನ್ನೂ ಓದಿ: ಮೂವರು ಬಿಜೆಪಿ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಟಿಎಂಸಿ

2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದ ರಾಹುಲ್ ಗಾಂಧಿ, 2024ರ ಚುನಾವಣೆಯಲ್ಲಿ ಹೀರೋ ಆಗಿ ಹೊರಹೊಮ್ಮಿದ್ದಾರೆ.

ಕಾಂಗ್ರೆಸ್ ನಾಯಕರಷ್ಟೇ ಅಲ್ಲ, ಶಿವಸೇನಾದ (ಯುಬಿಟಿ) ಸಂಸದ ಸಂಜಯ್ ರಾವತ್ ಕೂಡ ರಾಹುಲ್ ಗಾಂಧಿಯನ್ನು ಕೊಂಡಾಡಿದ್ದಾರೆ. “ರಾಹುಲ್ ಗಾಂಧಿ ನಾಯಕತ್ವವನ್ನು ಒಪ್ಪಿಕೊಳ್ಳಲು ಸಿದ್ಧರಿದ್ದರೆ, ನಾವು ಏಕೆ ವಿರೋಧಿಸುತ್ತೇವೆ? ಅವರು ಹಲವಾರು ಬಾರಿ ರಾಷ್ಟ್ರೀಯ ನಾಯಕ ಎಂದು ಸಾಬೀತುಪಡಿಸಿದ್ದಾರೆ. ಅವರು ಜನಪ್ರಿಯ ನಾಯಕರಲ್ಲಿ ಒಬ್ಬರು. ನಾವೆಲ್ಲರೂ ಅವರನ್ನು ಪ್ರೀತಿಸುತ್ತೇವೆ. ಮೈತ್ರಿಯಲ್ಲಿ ಯಾವುದೇ ಆಕ್ಷೇಪ ಮತ್ತು ಭಿನ್ನಾಭಿಪ್ರಾಯವಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾವತ್ ಹೇಳಿದ್ದಾರೆ.  2004 ರಲ್ಲಿ ಅವರು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ನಂತರ, 53 ವರ್ಷದ ನಾಯಕ ಅವರು ತಮ್ಮ ಪಕ್ಷ ಅಧಿಕಾರದಲ್ಲಿದ್ದಾಗಲೂ ಯಾವುದೇ ಸಾಂವಿಧಾನಿಕ ಹುದ್ದೆಯನ್ನು ಹೊಂದಿರಲಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ