All Party Meeting: ಸರ್ವಪಕ್ಷ ಸಭೆಗೆ ಕಾಂಗ್ರೆಸ್ ನಾಯಕರು ಗೈರು

|

Updated on: Jan 30, 2023 | 3:57 PM

Budget 2023: ಸಂಸತ್ತಿನಲ್ಲಿ ಸರ್ವಪಕ್ಷ ಸಭೆಗೆ ಕಾಂಗ್ರೆಸ್ ನಾಯಕರು ಗೈರುಹಾಜರಾಗಿದ್ದರು, ಆದರೆ ಸರ್ಕಾರದ ಮೂಲಗಳ ಪ್ರಕಾರ ಮಲ್ಲಿಕಾರ್ಜುನ ಖರ್ಗೆ ಮತ್ತು ಅಧೀರ್ ರಂಜನ್ ಚೌಧರಿ ಇಬ್ಬರೂ ಶ್ರೀನಗರದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿರುವ ಕಾರಣ ಸಭೆಗೆ ಬಂದಿಲ್ಲ ಎಂದು ಹೇಳಲಾಗಿದೆ.

All Party Meeting: ಸರ್ವಪಕ್ಷ ಸಭೆಗೆ ಕಾಂಗ್ರೆಸ್ ನಾಯಕರು ಗೈರು
ಸರ್ವಪಕ್ಷ ಸಭೆ
Image Credit source: NDTV
Follow us on

ದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಸರ್ಕಾರ ಸರ್ವಪಕ್ಷ ಸಭೆ (All Party Meeting) ಸೋಮವಾರ ಬೆಳಗ್ಗೆ ಕರೆದಿತ್ತು. ಸಂಸತ್ ಭವನದ ಸಂಕೀರ್ಣದಲ್ಲಿ ನಡೆದ ಸಭೆಯಲ್ಲಿ ರಕ್ಷಣಾಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಪಿಯೂಷ್ ಗೋಯಲ್, ಅರ್ಜುನ, ರಾಮ್ ಮೇಘವಾಲ್ ಮತ್ತು ವಿ ಮುರಳೀಧರನ್ ಉಪಸ್ಥಿತರಿದ್ದರು. ಡಿಎಂಕೆ ನಾಯಕ, ಟಿಆರ್, ಬಾಲು, ಟಿಎಂಸಿ ನಾಯಕರು, ಸುದೀಪ್ ಬಂಡೋಪಾಧ್ಯಾಯ ಮತ್ತು ಸುಖೇಂದು ಶೇಖರ್ ರೇ, ಟಿಆರ್‌ಎಸ್ ನಾಯಕರಾದ ಕೆ ಕೇಶವ ರಾವ್ ಮತ್ತು ನಾಮ ನಾಗೇಶ್ವರ ರಾವ್ ಸೇರಿದಂತೆ ವಿರೋಧ ಪಕ್ಷಗಳ ಎಲ್ಲಾ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ವೈಎಸ್‌ಆರ್ ಕಾಂಗ್ರೆಸ್‌ನಿಂದ ವಿಜಯಸಾಯಿ ರೆಡ್ಡಿ, ನ್ಯಾಷನಲ್ ಕಾನ್ಫರೆನ್ಸ್‌ನಿಂದ ಫಾರೂಕ್ ಅಬ್ದುಲ್ಲಾ, ಆರ್‌ಜೆಡಿಯಿಂದ ಪ್ರೊಫೆಸರ್ ಮನೋಜ್ ಝಾ ಮತ್ತು ಜೆಡಿಯುನ ರಾಮ್ ನಾಥ್ ಠಾಕೂರ್ ಸೇರಿದಂತೆ ಇತರ ಪಕ್ಷದ ನಾಯಕರು ಉಪಸ್ಥಿತರಿದ್ದರು. ಶಿವಸೇನೆ (ಉದ್ಧವ್ ಠಾಕ್ರೆ) ಅವರ ಪರವಾಗಿ ಪ್ರಿಯಾಂಕಾ ಚತುರ್ವೇದಿ ಪ್ರತಿನಿಧಿಸಿದ್ದರು.

ಇದನ್ನು ಓದಿ:Budget 2023: ಬಜೆಟ್ ಅಧಿವೇಶನ ಹಿನ್ನೆಲೆ, ಸೋಮವಾರ ಸರ್ವಪಕ್ಷ ಸಭೆ

ಕಾಂಗ್ರೆಸ್ ನಾಯಕರು ಸಭೆಗೆ ಗೈರುಹಾಜರಾಗಿದ್ದರು, ಆದರೆ ಸರ್ಕಾರದ ಮೂಲಗಳ ಪ್ರಕಾರ ಮಲ್ಲಿಕಾರ್ಜುನ ಖರ್ಗೆ ಮತ್ತು ಅಧೀರ್ ರಂಜನ್ ಚೌಧರಿ ಇಬ್ಬರೂ ಶ್ರೀನಗರದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿರುವ ಕಾರಣ ಸಭೆಗೆ ಬಂದಿಲ್ಲ ಎಂದು ಹೇಳಲಾಗಿದೆ. ಸರ್ವಪಕ್ಷಗಳ ಸಭೆಯು ಸಂಸತ್ತಿನ ಪ್ರತಿ ಅಧಿವೇಶನದ ಪ್ರಾರಂಭದ ಮೊದಲು ನಡೆಯುವ ಸಾಂಪ್ರದಾಯಿಕ ಸಭೆಯಾಗಿದೆ. ಅಧಿವೇಶನದ ಸಮಯದಲ್ಲಿ ಸಂಸತ್ತಿನ ಉಭಯ ಸದನಗಳು ಸುಗಮವಾಗಿ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಎಲ್ಲಾ ರಾಜಕೀಯ ಪಕ್ಷಗಳಿಂದ ಸಹಕಾರವನ್ನು ಸಭೆಯಲ್ಲಿ ಕರೆಯುತ್ತಾರೆ.

ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31ರಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾರತದ ರಾಷ್ಟ್ರಪತಿಗಳ ಭಾಷಣದೊಂದಿಗೆ ಪ್ರಾರಂಭವಾಗುತ್ತದೆ. ಅಧಿವೇಶನದ ಮೊದಲ ದಿನವೇ ಉಭಯ ಸದನಗಳಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುವುದು.

ಕೇಂದ್ರ ಬಜೆಟ್ 2023-24 ಅನ್ನು ಫೆಬ್ರವರಿ 1 ರಂದು ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿದ್ದಾರೆ. ಬಳಿಕ ರಾಜ್ಯಸಭೆಯಲ್ಲಿ ಬಜೆಟ್ ಮಂಡನೆಯಾಗಲಿದೆ.

ಗುರುವಾರದಿಂದ, ಉಭಯ ಸದನಗಳಲ್ಲಿ ರಾಷ್ಟ್ರಪತಿ ಭಾಷಣಕ್ಕೆ ಧನ್ಯವಾದಗಳ ನಿರ್ಣಯ ಕುರಿತು ಚರ್ಚೆಯನ್ನು ನಡೆಸಲಿದ್ದು, ನಂತರ ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಉತ್ತರಿಸಲಿದ್ದಾರೆ. ಬಜೆಟ್ ಅಧಿವೇಶನದ ಈ ಭಾಗವು ಫೆಬ್ರವರಿ 13 ರವರೆಗೆ ಮುಂದುವರಿಯುತ್ತದೆ.

ಬಜೆಟ್ ಅಧಿವೇಶನದ ಎರಡನೇ ಭಾಗವು ವಿರಾಮದ ನಂತರ ಮಾರ್ಚ್ 13 ರಂದು ಪ್ರಾರಂಭವಾಗಿ ಏಪ್ರಿಲ್ 6 ರವರೆಗೆ ನಡೆಯಲಿದೆ. ವಿವಿಧ ಸಚಿವಾಲಯಗಳಿಗೆ ಅನುದಾನಕ್ಕಾಗಿ ಬೇಡಿಕೆಯ ಕುರಿತು ಚರ್ಚೆ ನಡೆಯುತ್ತದೆ ಮತ್ತು ಕೇಂದ್ರ ಬಜೆಟ್ ಅನ್ನು ಅಂಗೀಕರಿಸಲಾಗುತ್ತದೆ. ಈ ಅವಧಿಯಲ್ಲಿ ಇತರ ಶಾಸಕಾಂಗ ವ್ಯವಹಾರಗಳನ್ನು ಸಹ ಸರ್ಕಾರವು ತೆಗೆದುಕೊಳ್ಳುತ್ತದೆ.

ಪ್ರಮುಖ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ