
ನವದೆಹಲಿ: ವಯನಾಡ್ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಇಂದು ಲೋಕಸಭಾ ಅಧಿವೇಶನದಲ್ಲಿ ಮಂಡನೆಯಾದ ಒಂದು ರಾಷ್ಟ್ರ, ಒಂದು ಚುನಾವಣಾ ಮಸೂದೆಯನ್ನು ಟೀಕಿಸಿದ್ದು, ಇದು ಭಾರತದ ಒಕ್ಕೂಟದ ವಿರೋಧಿಯಾಗಿದೆ, ಸಂವಿಧಾನ ವಿರೋಧಿ ಮಸೂದೆಯಾಗಿದೆ ಎಂದಿದ್ದಾರೆ. ಈ ಮಸೂದೆಯನ್ನು ವಿರೋಧಿಸುವ ಕಾಂಗ್ರೆಸ್ಸಿನ ಪ್ರಸ್ತುತ ನಿಲುವನ್ನು ಪುನರುಚ್ಚರಿಸಿದ ಪ್ರಿಯಾಂಕಾ ಗಾಂಧಿ, “ಇದು ಸಂವಿಧಾನ ವಿರೋಧಿ ಮಸೂದೆ. ಇದು ನಮ್ಮ ರಾಷ್ಟ್ರದ ಫೆಡರಲಿಸಂಗೆ ವಿರುದ್ಧವಾಗಿದೆ. ನಾವು ಈ ಮಸೂದೆಯನ್ನು ವಿರೋಧಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.
ಆರ್‌ಎಸ್‌ಪಿ ಸಂಸದ ಎನ್‌ಕೆ ಪ್ರೇಮಚಂದ್ರನ್ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಸರ್ಕಾರವು ಮಸೂದೆಯನ್ನು ಜೆಪಿಸಿಗೆ ಕಳುಹಿಸಲು ಬಯಸುತ್ತದೆ. ನಾವು ಮಸೂದೆಯನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ. ಮಸೂದೆಯನ್ನು ಹಿಂಪಡೆಯುವುದು ನಮ್ಮ ಬೇಡಿಕೆಯಾಗಿತ್ತು. ಈಗ, ಮಸೂದೆಯನ್ನು ಮಂಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ಇಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಸದನದಲ್ಲಿ ಮಂಡಿಸಿದರು. ಲೋಕಸಭೆಯ ಸ್ಪೀಕರ್ ಸದನದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಪರಿಚಯಿಸುವ ಮತದ ಫಲಿತಾಂಶವನ್ನು ಪ್ರಕಟಿಸಿದರು. ಮತವು 269 ಸದಸ್ಯರು ಪರವಾಗಿ ಮತ್ತು 196 ವಿರುದ್ಧವಾಗಿ ಬಂದಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ