Malfeasance: ಸದಾ ನೆಹರು ಹೆಸರನ್ನು ಹೇಳುವ ಬಿಜೆಪಿಯ ಗೀಳಿಗೆ ಹೊಸ ಪದ ಪರಿಚಯಿಸಿದ ಶಶಿ ತರೂರ್

ಗುರುವಾರ ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ, ಪ್ರಧಾನಿ ಮೋದಿ ಅವರು ರಾಷ್ಟ್ರ ನಿರ್ಮಾಣದಲ್ಲಿ ಜವಾಹರಲಾಲ್ ನೆಹರು ಅವರ ಪ್ರಯತ್ನಗಳನ್ನು ಬಿಜೆಪಿ ನಿರ್ಲಕ್ಷಿಸಿದೆ ಎಂದು ಟೀಕಿಸಿದ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದರು.

Malfeasance: ಸದಾ ನೆಹರು ಹೆಸರನ್ನು ಹೇಳುವ ಬಿಜೆಪಿಯ ಗೀಳಿಗೆ ಹೊಸ ಪದ ಪರಿಚಯಿಸಿದ ಶಶಿ ತರೂರ್
ಶಶಿ ತರೂರ್
Follow us
ರಶ್ಮಿ ಕಲ್ಲಕಟ್ಟ
|

Updated on: Feb 12, 2023 | 1:24 PM

ಕಾಂಗ್ರೆಸ್ ಸಂಸದ ಶಶಿ ತರೂರ್ (Shashi Tharoor) ಹೇಳುವುದು ಸಾಮಾನ್ಯರಿಗೆ ಬೇಗ ಅರ್ಥವಾಗಲ್ಲ. ಇಂಗ್ಲಿಷ್ ನಲ್ಲಿ ಪಾಂಡಿತ್ಯ ಹೊಂದಿರುವ ತರೂರ್,ಆಗಾಗ್ಗೆ ಕೆಲವೊಂದು ಪದಗಳನ್ನು ಟ್ವೀಟಿಸಿ ನೆಟ್ಟಿಗರು ಆ ಬಗ್ಗೆ ಚಿಂತಿಸುವಂತೆ ಮಾಡುತ್ತಾರೆ. ಇತ್ತೀಚೆಗೆ ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ಬಿಜೆಪಿಯ ನೆಹರು ಗೀಳು (Nehru obsession) ಬಗ್ಗೆ ಒಂದು ಪದ ಹೇಳಿ ಎಂದು ತರೂರ್ ಅವರಲ್ಲಿ ವಿನಂತಿಸಿದ್ದರು. ಇದಕ್ಕೆ ಅವರು ನೀಡಿದ ಪದ Malfeasance. ಈ ಪದದ ಅರ್ಥ ಸಾರ್ವಜನಿಕ ಅಧಿಕಾರಿಯಿಂದ ದುರ್ನಡತೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಮತ್ತು ಬೆಲೆ ಏರಿಕೆಗೆ ಬಿಜೆಪಿ ನೆಹರು ಅವರನ್ನು ದೂಷಿಸಿದ ಎರಡು ಹಳೆಯ ಸುದ್ದಿಗಳನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಉಲ್ಲೇಖಿಸಿದ್ದಾರೆ. ಆದರೆ, ಇತ್ತೀಚೆಗೆ ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿ ನೆಹರು ಅವರ ಬಗ್ಗೆ ಪ್ರಸ್ತಾಪಿಸಿದಾಗಿನಿಂದ ನೆಹರು ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ.

ಗುರುವಾರ ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ, ಪ್ರಧಾನಿ ಮೋದಿ ಅವರು ರಾಷ್ಟ್ರ ನಿರ್ಮಾಣದಲ್ಲಿ ಜವಾಹರಲಾಲ್ ನೆಹರು ಅವರ ಪ್ರಯತ್ನಗಳನ್ನು ಬಿಜೆಪಿ ನಿರ್ಲಕ್ಷಿಸಿದೆ ಎಂದು ಟೀಕಿಸಿದ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದರು. ನೆಹರು ಅವರ ಹೆಸರನ್ನು ನಾವು ಬಿಟ್ಟುಬಿಟ್ಟಿದ್ದರೆ, ಅವರು ದೇಶದ ಮೊದಲ ಪ್ರಧಾನಿಯಾಗಿರುವುದರಿಂದ ನಾವು ನಮ್ಮ ತಪ್ಪನ್ನು ಸರಿಪಡಿಸುತ್ತೇವೆ. ಆದರೆ ಅವರ ಕುಲದ ಯಾರಾದರೂ ನೆಹರೂ ಉಪನಾಮವನ್ನು ಇಡಲು ಏಕೆ ಹೆದರುತ್ತಾರೆ ಎಂದು ನನಗೆ ಅರ್ಥವಾಗುತ್ತಿಲ್ಲ? ನೆಹರು ಉಪನಾಮವನ್ನು ಹೊಂದಲು ನಾಚಿಕೆಯೇಕೆ? ಅಂಥಾ ನಾಚಿಕೆಗೇಡು ಏನಿದೆ? ಅಂತಹ ಮಹಾನ್ ವ್ಯಕ್ತಿತ್ವವನ್ನು ಸ್ವೀಕರಿಸಲು ಕುಟುಂಬ ಸಿದ್ಧವಿಲ್ಲದಿರುವಾಗ ನೀವು ನಮ್ಮನ್ನು ಏಕೆ ಪ್ರಶ್ನಿಸುತ್ತೀರಿ ಎಂದು ಮೋದಿ ಕೇಳಿದ್ದರು.

ಇದನ್ನೂ ಓದಿ:Viral Video: ಆ್ಯಂಬುಲೆನ್ಸ್​ ಸಿಗದೆ ತಂದೆಯನ್ನು ಆಸ್ಪತ್ರೆಗೆ ಗಾಡಿಯಲ್ಲಿ ತಳ್ಳಿಕೊಂಡು ಹೋದ 6 ವರ್ಷದ ಬಾಲಕ!

ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್(Congress), ಭಾರತದಲ್ಲಿ ಯಾರು ತಮ್ಮ ತಾಯಿಯ ಅಜ್ಜನ ಸರ್ನೇಮ್ ಬಳಸುತ್ತಾರೆ? ಮೋದಿಗೆ ಭಾರತೀಯ ಸಂಸ್ಕೃತಿಯ ಬಗ್ಗೆ ಸಾಮಾನ್ಯ ತಿಳುವಳಿಕೆ ಇಲ್ಲ ಎಂದು ಹೇಳಿದೆ. “ಇಂತಹ ಜವಾಬ್ದಾರಿಯುತ ಸ್ಥಾನದಲ್ಲಿ ಕುಳಿತವರಿಗೆ ಭಾರತದ ಸಂಸ್ಕೃತಿ ಗೊತ್ತಿಲ್ಲ ಅಥವಾ ಅರ್ಥವಾಗುವುದಿಲ್ಲ. ಅವರು ಹೀಗೆ ಮಾತನಾಡುತ್ತಾರೆ. ನೀವು ದೇಶದ ಯಾವುದೇ ವ್ಯಕ್ತಿಯನ್ನು ಕೇಳಿ, ಯಾರು ತಾಯಿಯ ಅಜ್ಜನ ಉಪನಾಮವನ್ನು ಬಳಸುತ್ತಾರೆ? ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಮರು ಪ್ರಶ್ನಿಸಿದ್ದಾರೆ.

ಕಾಶ್ಮೀರ ಸಮಸ್ಯೆ, ಚೀನಾ ಸಮಸ್ಯೆ, ಮಹಾರಾಷ್ಟ್ರ-ಕರ್ನಾಟಕ ಗಡಿ, ಬೆಲೆ ಏರಿಕೆ, ಅದಾನಿ ಹಗರಣದ ಉದಾಹರಣೆಗಳನ್ನು ಉಲ್ಲೇಖಿಸಿದ ಸಾಮಾಜಿಕ ಮಾಧ್ಯಮ ಬಳಕೆದಾರರು, ಈ ಎಲ್ಲಾ ಪ್ರಕರಣಗಳಲ್ಲಿ ನೆಹರು ಅವರನ್ನು ದೂಷಿಸುವುದೇ ಬಿಜೆಪಿಯ ಉತ್ತರವಾಗಿದೆ. ಈ ನೆಹರು ಗೀಳಿಗೆ ನಿಮ್ಮಲ್ಲಿ ಒಂದು ಪದವಿದೆಯೇ?” ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಶಶಿ ತರೂರ್ ಅವರಲ್ಲಿ ಕೇಳಿದ್ದರು, ಕಳೆದ ವರ್ಷಾಂತ್ಯದಲ್ಲಿ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ನಡುವೆ ಮಹಾರಾಷ್ಟ್ರದ ಸಚಿವ ಸುಧೀರ್ ಮುಂಗಂಟಿವಾರ್ ಅವರು ವಿವಾದಕ್ಕೆ ಕಾಂಗ್ರೆಸ್ ಮತ್ತು ನೆಹರು ಕಾರಣ ಎಂದಿದ್ದರು.

2021 ರಲ್ಲಿ, ಮಧ್ಯಪ್ರದೇಶದ ಸಚಿವ ವಿಶ್ವಾಸ್ ಸಾರಂಗ್, ಆರ್ಥಿಕತೆಯಲ್ಲಿ ಹಣದುಬ್ಬರಕ್ಕೆ ನೆಹರು ಮತ್ತು ಅವರ ಭಾಷಣವೇ ಕಾರಣ ಎಂದಿದ್ದರು. ಆಗಸ್ಟ್ 15, 1947 ರಂದು ಜವಾಹರಲಾಲ್ ನೆಹರು ಅವರು ಕೆಂಪು ಕೋಟೆಯ ಆವರಣದಿಂದ ಮಾಡಿದ ಭಾಷಣದ ತಪ್ಪುಗಳಿಂದಾಗಿ ದೇಶದ ಆರ್ಥಿಕತೆಯು ಹದಗೆಟ್ಟಿದೆ ಎಂದಿದ್ದರು ಸಾರಂಗ್.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್