AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲಿಗೆ ಕತ್ತರಿಸುವೆ ಎಂಬ ಕಾಂಗ್ರೆಸ್ಸಿಗರ ಹೇಳಿಕೆಗೆ ಮೊದಲ ಬಾರಿ ಏನೂ ಅಲ್ಲ: ಬಿಜೆಪಿ ತಿರುಗೇಟು

ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿದ್ದಕ್ಕಾಗಿ ಸೂರತ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ನಾಲಿಗೆಯನ್ನು ಕತ್ತರಿಸುವುದಾಗಿ ದಿಂಡುಗಲ್‌ನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಣಿಕಂದನ್ ಬೆದರಿಕೆ ಹಾಕಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ನಾಲಿಗೆ ಕತ್ತರಿಸುವೆ ಎಂಬ ಕಾಂಗ್ರೆಸ್ಸಿಗರ ಹೇಳಿಕೆಗೆ ಮೊದಲ ಬಾರಿ ಏನೂ ಅಲ್ಲ: ಬಿಜೆಪಿ ತಿರುಗೇಟು
ಕಿರಣ್ ರಿಜಿಜು
ರಶ್ಮಿ ಕಲ್ಲಕಟ್ಟ
|

Updated on:Apr 08, 2023 | 5:22 PM

Share

2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು (Rahul Gandhi) ದೋಷಿ ಎಂದು ತೀರ್ಪು ನೀಡಿದ ನ್ಯಾಯಾಧೀಶರ ನಾಲಿಗೆಯನ್ನು ಕತ್ತರಿಸುವುದಾಗಿ ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷದ (Congress) ನಾಯಕರೊಬ್ಬರು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಕಾಂಗ್ರೆಸ್ ಪಕ್ಷದವರು ಹತಾಶರಾಗಿದ್ದಾರೆ. ಭಾರತದ ತುರ್ತು ಪರಿಸ್ಥಿತಿಯ ಅವಧಿಗೂ ಮುನ್ನವೇ ಕಾಂಗ್ರೆಸ್ ಪಕ್ಷವು ನ್ಯಾಯಾಂಗದ ಮೇಲೆ ದಾಳಿ ನಡೆಸಿದೆ. ಈಗ ಹತಾಶೆಯಿಂದ ದಾಳಿಯನ್ನು ತೀವ್ರಗೊಳಿಸಿದೆ ಎಂದಿದ್ದಾರೆ. ಕಾಂಗ್ರೆಸ್ ನ್ಯಾಯಾಂಗಕ್ಕೆ ಬೆದರಿಕೆ ಹಾಕುತ್ತಿರುವುದು ಇದೇ ಮೊದಲ ಬಾರಿ ಏನೂ ಅಲ್ಲ. ತುರ್ತು ಪರಿಸ್ಥಿತಿಗೂ ಮುನ್ನವೇ ಕಾಂಗ್ರೆಸ್​​ನವರು ನ್ಯಾಯಾಂಗದ ಮೇಲೆ ದಾಳಿ ನಡೆಸಿದ್ದರು. ಅವರು ಹತಾಶೆಯಿಂದ ಈಗ ಅದನ್ನು ಮಾಡುತ್ತಿದ್ದಾರೆ. ನಮಗೆ ಸಂವಿಧಾನದಲ್ಲಿ ನಂಬಿಕೆ ಇದೆ ಎಂದು ಸುದ್ದಿಗಾರ ಜತೆ ಮಾತನಾಡಿದ ರಿಜಿಜು ತಿಳಿಸಿದ್ದಾರೆ.

ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿದ್ದಕ್ಕಾಗಿ ಸೂರತ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ನಾಲಿಗೆಯನ್ನು ಕತ್ತರಿಸುವುದಾಗಿ ದಿಂಡುಗಲ್‌ನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಣಿಕಂದನ್ ಬೆದರಿಕೆ ಹಾಕಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ನಾವು ಅಧಿಕಾರಕ್ಕೆ ಬಂದರೆ ನಮ್ಮ ನಾಯಕ ರಾಹುಲ್ ಗಾಂಧಿಯನ್ನು ಜೈಲಿಗೆ ಕಳುಹಿಸುವ ತೀರ್ಪು ನೀಡಿದ ನ್ಯಾಯಾಧೀಶರ ನಾಲಿಗೆಯನ್ನು ಕತ್ತರಿಸುತ್ತೇವೆ ಎಂದು ಗುರುವಾರ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಮಣಿಕಂದನ್ ಹೇಳಿರುವುದು ಕೇಳಿಬಂದಿದೆ. ಮಣಿಕಂದನ್ ವಿರುದ್ಧ ಭಾರತ ದಂಡ ಸಂಹಿತೆಯ ಸೆಕ್ಷನ್ 153 ಬಿ ಸೇರಿದಂತೆ ಮೂರು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದಿಂಡುಗಲ್ ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಸ್ಥಳೀಯ ನಾಯಕನ ಹೇಳಿಕೆಗೆ ಕಾಂಗ್ರೆಸ್ ಟೀಕೆಗೆ ಗುರಿಯಾಗಿದೆ, ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಈ ವಿಷಯದಲ್ಲಿ ನ್ಯಾಯಾಲಯಗಳು ಸ್ವಯಂಪ್ರೇರಿತವಾಗಿ ಗುರುತಿಸಿ ರಾಹುಲ್ ಗಾಂಧಿಯನ್ನು ಹೊಣೆಗಾರರನ್ನಾಗಿ ಮಾಡುತ್ತವೆಯೇ ಎಂದು ಕೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಆ ನ್ಯಾಯಾಧೀಶರ ನಾಲಿಗೆ ಕಟ್​ ಮಾಡಿಬಿಡುತ್ತೇನೆ ಎಂದು ಬೆದರಿಕೆ ಹಾಕಿದ ಕಾಂಗ್ರೆಸ್ ಮುಖಂಡ!

ಸೂರತ್ ನ್ಯಾಯಾಲಯವು ಮೋದಿ ಉಪನಾಮ ವಿಚಾರದಲ್ಲಿ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥರೆಂದು ಪರಿಗಣಿಸಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ತದನಂತರ ನ್ಯಾಯಾಲಯವು ಗಾಂಧಿಗೆ ಜಾಮೀನು ನೀಡಿ ಅವರ ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:16 pm, Sat, 8 April 23