ಕಾಂಗ್ರೆಸ್ ಪಕ್ಷಕ್ಕೆ 1,700 ಕೋಟಿ ರೂ ಮೊತ್ತಕ್ಕೆ ನೋಟೀಸ್ ನೀಡಿದ ಆದಾಯ ತೆರಿಗೆ ಇಲಾಖೆ

IT Notice to Congress: 2017-18ರಿಂದ 2020-21ರ ಅಸೆಸ್ಮೆಂಟ್ ವರ್ಷದಲ್ಲಿ ಕಾಂಗ್ರೆಸ್ ಪಕ್ಷ 1,700 ಕೋಟಿ ರೂ ತೆರಿಗೆ ಬಾಕಿ ಉಳಿಸಿಕೊಂಡಿದೆ ಎಂದು ಆದಾಯ ತೆರಿಗೆ ಇಲಾಖೆ ನೋಟೀಸ್ ನೀಡಿದೆ. ಐಟಿ ನೋಟೀಸ್ ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ ಒಂದು ದಿನದ ನಂತರ ಇಲಾಖೆ ಹೊಸದಾಗಿ ನೋಟೀಸ್ ಜಾರಿ ಮಾಡಿದೆ. ದೆಹಲಿ ಹೈಕೋರ್ಟ್ ಅಭಿಪ್ರಾಯವನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.

ಕಾಂಗ್ರೆಸ್ ಪಕ್ಷಕ್ಕೆ 1,700 ಕೋಟಿ ರೂ ಮೊತ್ತಕ್ಕೆ ನೋಟೀಸ್ ನೀಡಿದ ಆದಾಯ ತೆರಿಗೆ ಇಲಾಖೆ
ಕಾಂಗ್ರೆಸ್ ಪಕ್ಷ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 29, 2024 | 1:00 PM

ನವದೆಹಲಿ, ಮಾರ್ಚ್ 29: ಕಾಂಗ್ರೆಸ್ ಪಕ್ಷ 1,700 ಕೋಟಿ ರೂ ಆದಾಯ ತೆರಿಗೆ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿ ಆದಾಯ ತೆರಿಗೆ ಇಲಾಖೆ ನೋಟೀಸ್ ಜಾರಿ (IT notice to congress party) ಮಾಡಿದೆ. 2017-18ರಿಂದ 2020-21ರ ಅಸೆಸ್ಮೆಂಟ್ ವರ್ಷಕ್ಕೆ ಬಾಕಿ ಉಳಿದಿರುವ ಆದಾಯ ತೆರಿಗೆ ಹಣ, ಅದಕ್ಕೆ ಬಡ್ಡಿ, ಹಾಗು ದಂಡ ಸೇರಿ ಒಟ್ಟು 1,700 ಕೋಟಿ ರೂ ಬರಬೇಕಿದೆ ಎಂದು ಈ ನೋಟೀಸ್​ನಲ್ಲಿ ಐಟಿ ಇಲಾಖೆ ಹೇಳಿದೆ. ಟ್ಯಾಕ್ಸ್ ನೋಟೀಸ್​ಗಳನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿನ್ನೆ ಗುರುವಾರ ತಿರಸ್ಕರಿಸಿತ್ತು. ಅದರ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ಹೊಸ ನೋಟೀಸ್ ನೀಡಿದೆ.

ಕಾಂಗ್ರೆಸ್ ಪಕ್ಷಕ್ಕೆ ಫಂಡ್​ಗಳು ಸಿಗದೇ ಕೈಕಟ್ಟಿದಂಥ ಸ್ಥಿತಿ…

ಆದಾಯ ತೆರಿಗೆ ಇಲಾಖೆಯ ನೋಟೀಸ್ ಪ್ರಶ್ನಿಸಿ ತಾನು ಸಲ್ಲಿಸಿದ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ್ದು ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಆದಂತಾಗಿದೆ. ಉಚ್ಚ ನ್ಯಾಯಾಲಯದ ಅಭಿಪ್ರಾಯಕ್ಕೆ ಎದುರಾಗಿ ಸುಪ್ರೀಂಕೋರ್ಟ್​ನ ಮೊರೆ ಬೀಳುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆ ಆರಂಭಕ್ಕೆ ದಿನಗಣನೆ ನಡೆದಿರುವಂತೆಯೇ ಕಾಂಗ್ರೆಸ್​ಗೆ ಫಂಡಿಂಗ್ ಸಮಸ್ಯೆ ಎದುರಾಗಿದೆ. 200 ಕೋಟಿ ರೂ ಪೆನಾಲ್ಟಿ ಹಾಕಿರುವ ಐಟಿ ಇಲಾಖೆ ಕಾಂಗ್ರೆಸ್​ನ ಕೆಲ ಬ್ಯಾಂಕ್ ಖಾತೆಗಳನ್ನು ಅಟ್ಯಾಚ್ ಮಾಡಿದೆ.

ಇದನ್ನೂ ಓದಿ: ಭಾರತದಲ್ಲಿ ಚುನಾವಣೆ ಸ್ಪರ್ಧಿಸಲು ಎಷ್ಟು ಹಣ ಬೇಕು? ನಿರ್ಮಲಾ ಹೇಳಿಕೆಯಿಂದ ಮೂಡಿದ ಪ್ರಶ್ನೆಗೆ ಇಲ್ಲಿದೆ ಉತ್ತರ

ದೆಹಲಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕೆಲ ಬ್ಯಾಂಕ್ ಖಾತೆಗಳಿಂದ ಐಟಿ ಇಲಾಖೆ 135 ಕೋಟಿ ರೂ ಹಣವನ್ನು ವಿತ್​ಡ್ರಾ ಮಾಡಿತ್ತು. 2018-19ರ ಅಸೆಸ್ಮೆಂಟ್ ವರ್ಷದ ತೆರಿಗೆ ಬಾಕಿ ಮತ್ತು ಬಡ್ಡಿ ಹಣ ಅದಾಗಿತ್ತು. ಈ ಬೆಳವಣಿಗೆಯು ಕಾಂಗ್ರೆಸ್ ಪಕ್ಷದ ನಾಯಕರನ್ನು ಆಕ್ರೋಶಕ್ಕೆ ಕೆಡವಿದೆ.

ತನ್ನ ಬ್ಯಾಂಕ್ ಖಾತೆಗಳನ್ನು ಐಟಿ ಇಲಾಖೆ ಮುಟ್ಟುಗೋಲು ಹಾಕಿದೆ. ಹಣ ತೆಗೆಯಲು ಅಗುತ್ತಿಲ್ಲ ಎಂದು ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಆರೋಪ ಮಾಡಿ ಅದಕ್ಕೆ ಆಡಳಿತಾರೂಢ ಬಿಜೆಪಿಯನ್ನು ದೂಷಿಸಿತ್ತು. ಅಕೌಂಟ್ ಮುಟ್ಟುಗೋಲು ಹಾಕಿಕೊಂಡಿರುವ ಕ್ರಮವು ಪ್ರಜಾತಂತ್ರ ವ್ಯವಸ್ಥೆ ಮೆಲೆ ನಡೆದ ಆಕ್ರಮಣ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

ಇದನ್ನೂ ಓದಿ: ಕಾರು ಇಲ್ಲ; ₹ 700 ಕೋಟಿ ಮೌಲ್ಯದ ಆಸ್ತಿ ಘೋಷಿಸಿದ ಕಮಲ್ ನಾಥ್ ಪುತ್ರ ನಕುಲ್ ನಾಥ್

ಆದರೆ, ಪೆನಾಲ್ಟಿ ಹಣ ಬಿಟ್ಟು ಕಾಂಗ್ರೆಸ್ ಪಕ್ಷ ತನ್ನ ಬ್ಯಾಂಕ್ ಖಾತೆಗಳಿಂದ ಎಷ್ಟು ಬೇಕಾದರೂ ಹಣ ಪಡೆಯಲು ಅಡ್ಡಿ ಇಲ್ಲ. ಕಾಂಗ್ರೆಸ್ ಬೇಕಂತಲೇ ವಿಷಯ ತಿರುಚುತ್ತಿದೆ ಎಂಬುದು ಬಿಜೆಪಿಯ ಸ್ಪಷ್ಟನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್