AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಿಶಕ್ತಿಗೆ ಉತ್ತಮ ಉದಾಹರಣೆ, ಭಾರತದ ಉಕ್ಕಿನ ಮಹಿಳೆ: ಇಂದಿರಾ ಗಾಂಧಿಗೆ ಗೌರವ ನಮನ ಸಲ್ಲಿಸಿದ ಕಾಂಗ್ರೆಸ್

Indira Gandhi Death Anniversary ನನ್ನ ಅಜ್ಜಿ ಕೊನೆಯ ಕ್ಷಣದವರೆಗೂ ನಿರ್ಭೀತಿಯಿಂದ ದೇಶಕ್ಕೆ ಸೇವೆ ಸಲ್ಲಿಸಿದರು ಅವರ ಜೀವನ ನಮಗೆ ಸ್ಫೂರ್ತಿಯ ಮೂಲವಾಗಿದೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ನಾರಿಶಕ್ತಿಗೆ ಉತ್ತಮ ಉದಾಹರಣೆ, ಭಾರತದ ಉಕ್ಕಿನ ಮಹಿಳೆ: ಇಂದಿರಾ ಗಾಂಧಿಗೆ ಗೌರವ ನಮನ ಸಲ್ಲಿಸಿದ ಕಾಂಗ್ರೆಸ್
ಇಂದಿರಾ ಗಾಂಧಿ ಸಮಾಧಿಗೆ ರಾಹುಲ್ ಗಾಂಧಿ ಪುಷ್ಪಾರ್ಚನೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 31, 2021 | 1:45 PM

Share

ದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯತಿಥಿಯಂದು (Indira Gandhi  death anniversary) ಕಾಂಗ್ರೆಸ್ ಪಕ್ಷ ಮತ್ತು ಹಲವಾರು ನಾಯಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಅವರು ನವದೆಹಲಿಯಲ್ಲಿ ಇಂದಿರಾ ಗಾಂಧಿ ಅವರ ಸ್ಮಾರಕ “ಶಕ್ತಿ ಸ್ಥಳ” (Shakti Sthal)ದಲ್ಲಿ ಪುಷ್ಪ ನಮನ ಸಲ್ಲಿಸುವ ಸಂದರ್ಭದಲ್ಲಿ ಇಂದಿರಾಗಾಂಧಿ ನಾರಿಶಕ್ತಿಗೆ ಉತ್ತಮ ಉದಾಹರಣೆ ಎಂದು ಶ್ಲಾಘಿಸಿದರು. 1984ರಲ್ಲಿ ಇದೇ ದಿನ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರ ಇಬ್ಬರು ಭದ್ರತಾ ಸಿಬ್ಬಂದಿಯಿಂದ ಹತ್ಯೆಗೀಡಾಗಿದ್ದರು.

ನನ್ನ ಅಜ್ಜಿ ಕೊನೆಯ ಕ್ಷಣದವರೆಗೂ ನಿರ್ಭೀತಿಯಿಂದ ದೇಶಕ್ಕೆ ಸೇವೆ ಸಲ್ಲಿಸಿದರು ಅವರ ಜೀವನ ನಮಗೆ ಸ್ಫೂರ್ತಿಯ ಮೂಲವಾಗಿದೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. “ಮಹಿಳಾ ಶಕ್ತಿಯ ಅತ್ಯುತ್ತಮ ಉದಾಹರಣೆ, ಇಂದಿರಾ ಗಾಂಧಿಯವರ ಹುತಾತ್ಮ ದಿನದಂದು ಅವರಿಗೆ ನಮ್ರ ಗೌರವಗಳು” ಎಂದು ರಾಹುಲ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವೂ ಮಾಜಿ ಪ್ರಧಾನಿ ದೇಶಕ್ಕೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದೆ. “ಅವರು ಶಕ್ತಿಯನ್ನು ಪ್ರತಿನಿಧಿಸಿದಳರು. ತ್ಯಾಗವನ್ನು ಸಾಕಾರಗೊಳಿಸಿದರು, ಸೇವೆಯನ್ನು ವ್ಯಕ್ತಿಗತಗೊಳಿಸಿದಳು. ಭಾರತದ ಉಕ್ಕಿನ ಮಹಿಳೆ, ನಮ್ಮ ಮೊದಲ ಮಹಿಳಾ ಪ್ರಧಾನ ಮಂತ್ರಿ, ನಿಜವಾದ ಭಾರತ ರತ್ನ, ಶ್ರೀಮತಿ ಇಂದಿರಾ ಗಾಂಧಿ ಅವರಿಗೆ ಶತಕೋಟಿ ನಮಸ್ಕಾರಗಳು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಹಿರಿಯ ನಾಯಕ ಮತ್ತು ಸಂಸದ ಶಶಿ ತರೂರ್ ಕೂಡ ಇಂದಿರಾ ಗಾಂದಿ ಚಿತ್ರವನ್ನು ಹಂಚಿಕೊಂಡಿದ್ದು ಹುತಾತ್ಮರ ನೆನಪು ಎಂದು ಬರೆದಿದ್ದಾರೆ.

ಇದನ್ನೂ ಓದಿ: Puneeth Rajkumar: ಪುನೀತ್​ ಬಗ್ಗೆ ಅಲ್ಲು ಅರ್ಜುನ್​ ಭಾವುಕ ಮಾತು; ತೆಲುಗು ಸಿನಿಮಾ ವೇದಿಕೆಯಲ್ಲಿ ಮೌನಾಚರಣೆ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ