CWC Meeting: ಪಂಚ ರಾಜ್ಯಗಳ ಚುನಾವಣೆ ನಂತರವಷ್ಟೇ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ

ಮೇ ವೇಳೆಗೆ ನಡೆಯಲಿರುವ ಐದು ರಾಜ್ಯಗಳ ಚುನಾವಣೆಯ ನಂತರ ಹೊಸ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು

CWC Meeting: ಪಂಚ ರಾಜ್ಯಗಳ ಚುನಾವಣೆ ನಂತರವಷ್ಟೇ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ
ಪ್ರಾತಿನಿಧಿಕ ಚಿತ್ರ
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Jan 22, 2021 | 3:38 PM

ದೆಹಲಿ: ಮುಂದಿನ ಮೇ ವೇಳೆಗೆ ನಡೆಯಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರವಷ್ಟೇ ಹೊಸ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡಲು ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕಾಂಗ್ರೆಸ್ ಪಕ್ಷದ ಆಂತರಿಕ ಚುನಾವಣೆಗಳು ಮೇ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ. ಮೂಲಗಳ ಮಾಹಿತಿಯ ಪ್ರಕಾರ, ಎಐಸಿಸಿಯ ಅಧಿವೇಶನ ಮೇ 29 ರಂದು ನಡೆಯಲಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಸಭೆಯಲ್ಲಿ ಹಿರಿಯ ನಾಯಕರಾದ ಗುಲಾಮ್ ನಬಿ ಆಜಾದ್, ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಪಿ ಚಿದಂಬರಂ ಅವರು ತಕ್ಷಣ ಸಾಂಸ್ಥಿಕ ಚುನಾವಣೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಹಲವು ಚುನಾವಣಾ ಸೋಲುಗಳ ನಂತರ ಪಕ್ಷದ ನಾಯಕತ್ವ ಮತ್ತು ನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ ಕಾಂಗ್ರೆಸ್ ನಾಯಕರಲ್ಲಿ ಇವರು ಪ್ರಮುಖರಾಗಿದ್ದಾರೆ. ಗಾಂಧಿ ನಿಷ್ಠಾವಂತರು ಎಂದು ಕರೆಯಲ್ಪಡುವ ಅಶೋಕ್ ಗೆಹ್ಲೋಟ್, ಅಮರಿಂದರ್ ಸಿಂಗ್, ಎಕೆ ಆಂಟನಿ, ತಾರಿಕ್ ಅನ್ವರ್ ಮತ್ತು ಉಮ್ಮನ್ ಚಾಂಡಿ, ಬಂಗಾಳ, ತಮಿಳುನಾಡು ಸೇರಿದಂತೆ ಐದು ರಾಜ್ಯಗಳಲ್ಲಿ ಚುನಾವಣೆಯ ನಂತರ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಡೆಯಬೇಕು ಎಂದು ಹೇಳಿದರು.

ಪಕ್ಷದ ನಾಯಕತ್ವದ ಬಗ್ಗೆ ಅನೇಕ ಪ್ರಶ್ನೆಗಳನ್ನು ಎತ್ತಿದರು.. ಪಕ್ಷದ 23 ಹಿರಿಯ ನಾಯಕರು ಕಳೆದ ವರ್ಷ ಆಗಸ್ಟ್‌ನಲ್ಲಿ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದು ಪಕ್ಷದ ಸಂಘಟನೆಯಲ್ಲಿ ಪ್ರಮುಖ ಬದಲಾವಣೆ ತರಬೇಕೆಂದು ಒತ್ತಾಯಿಸಿದರು. ಪಕ್ಷದ ನಾಯಕತ್ವದ ಬಗ್ಗೆ ಅನೇಕ ಪ್ರಶ್ನೆಗಳನ್ನು ಎತ್ತಿದರು. ಅಂದಿನಿಂದ, ಆಂತರಿಕ ಚುನಾವಣೆಗಳು ಮತ್ತು ಸಾಂಸ್ಥಿಕ ಬದಲಾವಣೆಗಳಿಗೆ ಸಂಬಂಧಿಸಿದಂತೆ ಪಕ್ಷದೊಳಗೆ ಒಂದು ಸುತ್ತಿನ ಚರ್ಚೆಗಳು ಪ್ರಾರಂಭವಾಗಿದ್ದವು.

ಕಾಂಗ್ರೆಸ್ ಪಕ್ಷದ ನಿರಾಶಾದಾಯಕ ಪ್ರದರ್ಶನದಿಂದಾಗಿ ರಾಹುಲ್ ಗಾಂಧಿ 2019 ರ ಲೋಕಸಭಾ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅಂದಿನಿಂದ, ಪಕ್ಷಕ್ಕೆ ಯಾವುದೇ ಪೂರ್ಣ ಸಮಯದ ಅಧ್ಯಕ್ಷರು ಸಿಕ್ಕಿಲ್ಲ. ಆದರೆ, ರಾಹುಲ್ ಗಾಂಧಿ ರಾಜೀನಾಮೆ ನಂತರ ಸೋನಿಯಾ ಗಾಂಧಿ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಆದರೆ, ಅವರ ಅನಾರೋಗ್ಯದಿಂದಾಗಿ, ಪಕ್ಷದೊಳಗಿನ ಅನೇಕ ಹಿರಿಯ ನಾಯಕರು ಪೂರ್ಣ ಸಮಯದ ಅಧ್ಯಕ್ಷರನ್ನು ನೇಮಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ