Mallikarjun Kharge: 2024ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಹೇಳಿಕೆ; ಮಲ್ಲಿಕಾರ್ಜುನ ಖರ್ಗೆ ಯೂಟರ್ನ್

ಧ್ರುವೀಕರಣಗೊಳಿಸುವ ಶಕ್ತಿಗಳ ವಿರುದ್ಧ ಸಮಾನ ಮನಸ್ಕ ವಿರೋಧ ಪಕ್ಷಗಳೆಲ್ಲ ಒಗ್ಗೂಡಬೇಕು. ಯಾರು ನೇತೃತ್ವ ವಹಿಸುತ್ತಾರೆ ಅಥವಾ ಯಾರು ಪ್ರಧಾನಿಯಾಗುತ್ತಾರೆ ಎಂಬ ಬಗ್ಗೆ ನಾನು ಹೇಳಿಕೆ ನೀಡಿಲ್ಲ. ಅದು ಮುಖ್ಯವಲ್ಲ. ನಾವೆಲ್ಲ ಒಗ್ಗಟ್ಟಿನಿಂದ ಹೋರಾಡಬೇಕೆಂಬುಷ್ಟೇ ನಮ್ಮ ಬಯಕೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Mallikarjun Kharge: 2024ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಹೇಳಿಕೆ; ಮಲ್ಲಿಕಾರ್ಜುನ ಖರ್ಗೆ ಯೂಟರ್ನ್
ಮಲ್ಲಿಕಾರ್ಜುನ ಖರ್ಗೆ
Follow us
Ganapathi Sharma
|

Updated on: Mar 01, 2023 | 9:59 PM

ನವದೆಹಲಿ: ಪ್ರತಿಪಕ್ಷಗಳ ಮೈತ್ರಿಕೂಟ 2024ರ ಲೋಕಸಭೆ ಚುನಾವಣೆ ಜಯಿಸಿದರೆ ಕಾಂಗ್ರೆಸ್ (Congress) ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂಬುದಾಗಿ ಹೇಳಿಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ತಿಳಿಸಿದ್ದಾರೆ. ಡಿಎಂಕೆ ಅಧ್ಯಕ್ಷ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ 70ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳ ನೇತೃತ್ವ ಯಾರು ವಹಿಸಲಿದ್ದಾರೆ, ಯಾರು ಪ್ರಧಾನಿ ಆಗಲಿದ್ದಾರೆ ಎಂದು ಹೇಳಿಲ್ಲ. ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ. ಚುನಾವಣೆಗೂ ಮುನ್ನ ಪ್ರಧಾನಿ ಯಾರಾಗುತ್ತಾರೆಂಬ ಪ್ರಶ್ನೆಯೇ ಬರುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಅವರು ಹೇಳಿದ್ದಾರೆ ಈ ಕುರಿತು ಮಾಧ್ಯಮ ಪ್ರಕಟಣೆಯನ್ನೂ ಬಿಡುಗಡೆ ಮಾಡಿದ್ದಾರೆ.

ಧ್ರುವೀಕರಣಗೊಳಿಸುವ ಶಕ್ತಿಗಳ ವಿರುದ್ಧ ಸಮಾನ ಮನಸ್ಕ ವಿರೋಧ ಪಕ್ಷಗಳೆಲ್ಲ ಒಗ್ಗೂಡಬೇಕು. ಯಾರು ನೇತೃತ್ವ ವಹಿಸುತ್ತಾರೆ ಅಥವಾ ಯಾರು ಪ್ರಧಾನಿಯಾಗುತ್ತಾರೆ ಎಂಬ ಬಗ್ಗೆ ನಾನು ಹೇಳಿಕೆ ನೀಡಿಲ್ಲ. ಅದು ಮುಖ್ಯವಲ್ಲ. ನಾವೆಲ್ಲ ಒಗ್ಗಟ್ಟಿನಿಂದ ಹೋರಾಡಬೇಕೆಂಬುಷ್ಟೇ ನಮ್ಮ ಬಯಕೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: MK Stalin Birthday: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗಿ

2024ರಲ್ಲಿ ಕಾಂಗ್ರೆಸ್ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂದು ಖರ್ಗೆ ಹೇಳಿರುವುದಾಗಿ ವರದಿಯಾಗಿತ್ತು, ಇದಕ್ಕೆ ನ್ಯಾಷನಲ್ ಕಾನ್ಫರೆನ್ಸ್ ವರಿಷ್ಠ ಫಾರೂಕ್ ಅಬ್ದುಲ್ಲಾ ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಖರ್ಗೆ ಯೂಟರ್ನ್ ತೆಗೆದುಕೊಂಡಿದ್ದಾರೆ.

ಸ್ಟಾಲಿನ್ ಅವರೇ, ನೀವು ರಾಷ್ಟ್ರ ರಂಗಕ್ಕೆ ಬನ್ನಿ. ತಮಿಳುನಾಡನ್ನು ಕಟ್ಟಿದಂತೆಯೇ ರಾಷ್ಟ್ರವನ್ನು ಕಟ್ಟಲು ಮುಂದಾಗಿ. ಮಲ್ಲಿಕಾರ್ಜುನ ಖರ್ಗೆ ಅವರೇ, ಯಾರು ಮುಂದಿನ ಪ್ರಧಾನಿಯಾಗಲಿದ್ದಾರೆ ಎಂಬುದನ್ನು ಸದ್ಯಕ್ಕೆ ಬಿಟ್ಟುಬಿಡೋಣ. ಮೊದಲು ಚುನಾವಣೆ ಗೆಲ್ಲುವತ್ತ ಗಮನಹರಿಸೋಣ. ಗೆದ್ದ ನಂತರ ಆ ಬಗ್ಗೆ ಯೋಚಿಸೋಣ. ಪ್ರಧಾನಿಯಾಗುವುದು ಮುಖ್ಯವಲ್ಲ, ದೇಶ ಮುಖ್ಯ ಎಂದು ಫಾರೂಕ್ ಅಬ್ದುಲ್ಲಾ ಹೇಳಿರುವುದಾಗಿ ‘ಎಎನ್​ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು