Assembly Election Results 2022 ಗುಜರಾತ್​ನಲ್ಲಿ ಕಾಂಗ್ರೆಸ್ ಸೋಲು, ಹಿಮಾಚಲ ಪ್ರದೇಶದಲ್ಲಿ ಗೆಲುವು: ಇಲ್ಲಿದೆ ಖರ್ಗೆ ಮಾತು

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಒಂದು ಕಡೆ ಕಾಂಗ್ರೆಸ್ ಗೆದ್ದರೆ ಮತ್ತೊಂದೆಡೆ ಬಿಜೆಪಿ ಬಿಜೆಪಿ ಅಧಿಕಾರಕ್ಕೇರಿದೆ. ಇನ್ನೂ ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ಸೋಲು-ಗೆಲುವಿಗೆ ಕಾರಣಗಳನ್ನು ಕೊಟ್ಟಿದ್ದಾರೆ.

Assembly Election Results 2022 ಗುಜರಾತ್​ನಲ್ಲಿ ಕಾಂಗ್ರೆಸ್ ಸೋಲು, ಹಿಮಾಚಲ ಪ್ರದೇಶದಲ್ಲಿ ಗೆಲುವು: ಇಲ್ಲಿದೆ ಖರ್ಗೆ ಮಾತು
ಗಾಡ್ ಫಾದರ್ ಇಲ್ಲದೇ ರಾಜಕೀಯದಲ್ಲಿ ಬೆಳೆದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್​ ಅಧ್ಯಕ್ಷರಾದರು! ಖರ್ಗೆ ಜೀವನಗಾಥೆ ಇಲ್ಲಿದೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 08, 2022 | 6:50 PM

ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ(Himachal Pradesh Election Results 2022) ಕಾಂಗ್ರೆಸ್ ಭರ್ಜರಿಯಾಗಿ ಗೆಲುವು ಸಾಧಿಸಿದರೆ, ಗುಜರಾತ್​ನಲ್ಲಿ (Gujarat) ಮಕಾಡೆ ಮಲಗಿದೆ. ಇನ್ನು ಈ ಫಲಿತಾಂಶದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರತಿಕ್ರಿಯಿಸಿದ್ದು, ​ಕಳೆದ ಒಂದು ವರ್ಷದಿಂದಲೂ ಮೋದಿ ಪ್ರಚಾರ ಮಾಡಿದ್ದಾರೆ. ನರೇಂದ್ರ ಮೋದಿ(Narendra Modi) ನಾನು ಈ ಮಣ್ಣಿನ ಮಗ ಎಂದು ಹೇಳಿದ್ದರು. ರೋಡ್​ ಶೋ, ನಡೆದುಕೊಂಡು ಬಂದು ಮತದಾನ ಮಾಡಿ ಗಿಮಿಕ್​ ಮಾಡಿದ್ದಾರೆ. ಬಿಜೆಪಿ(BJP), ನರೇಂದ್ರ ಮೋದಿ ಗಿಮಿಕ್​ಗಳೇ ನಮ್ಮ ಸೋಲಿಗೆ ಕಾರಣ. ಅಸ್ತಿತ್ವದಲ್ಲಿ ಇಲ್ಲದ ಪಕ್ಷ ಬಂದು ಮತಗಳ ವಿಭಜನೆ ಮಾಡಿದೆ ಎಂದು ಎಎಪಿ ಪ್ರವೇಶದಿಂದ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: Assembly Election Results 2022 LIVE: ಗುಜರಾತ್​ನಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್​ ಜಯಭೇರಿ

ಗುಜರಾತ್​ನಲ್ಲಿ ಕಾಂಗ್ರೆಸ್ ಸೋಲಿಗೆ ಸಾಕಷ್ಟು ಕಾರಣಗಳಿವೆ. ಪ್ರಚಾರ ಮಾಡದಿದ್ದರಿಂದ ಪಕ್ಷ ಇಷ್ಟು ಕೆಳಮಟ್ಟಕ್ಕೆ ಇಳಿದಿದೆ. ಕಳೆದ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರಗಳಿಗೆ ಭೇಟಿ ನೀಡಿದ್ದೆವು. ಆದರೂ ಹಲವೆಡೆ ಬಹಳ ಕಡಿಮೆ ಅಂತರದಿಂದ ಸೋತಿದ್ದೆವು. ಈ ಬಾರಿ ಹೊಸ ಪಕ್ಷ ನಮ್ಮ ಮತಗಳನ್ನು ಕೆಡಿಸಿವೆ ಎಂದು ಸ್ಪಷ್ಟಪಡಿಸಿದರು.

ಗುಜರಾತ್ ಸೋಲಿಗೆ ಸಾಕಷ್ಟು ಕಾರಣಗಳಿವೆ. ಪಕ್ಷ ಇಷ್ಟು ಕೆಳ ಮಟ್ಟಕ್ಕೆ ಬರಲು ಕ್ಯಾಂಪೇನ್ ಮಾಡಿಲ್ಲ. ಕಳೆದ ಬಾರಿ ಅತೀ ಹೆಚ್ಚು ಕ್ಷೇತ್ರ ಭೇಟಿ ಕೊಟ್ಟಿದ್ದೇವು. ಆದ್ರೆ ಹಲವು ಕಡೆ ಕಡಿಮೆ ಅಂತರದಲ್ಲಿ ಸೋತಿದ್ದೇವು. ಈ ಸಲ ಕೆಲವು ಪಕ್ಷ ಹೊಸದಾಗಿ ಬಂದು ನಮ್ಮ ಮತ ಕೆಡಿಸಿವೆ. ವೈಚಾರಿಕವಾಗಿ, ಸೈಂದಾಂತಿಕವಾಗಿ ಕಾರಣವಾಗಿದೆ. ಒಂದು ವರ್ಷದಿಂದ ಮೋದಿ ಪ್ರಚಾರ ಮಾಡಿದ್ದಾರೆ. ಮಣ್ಣಿನ ಮಗ ಅಂತಾ ಹೇಳಿದ್ದು, ದಾಖಲೆಯ ರೋಡ್ ಶೋ, ಮತದಾನದ ದಿನ ನಡೆದುಕೊಂಡು ಬಂದು ಮತದಾನ ಮಾಡಿದ ಗಿಮಿಕ್ ಗಳು ನಮ್ಮ ಸೋಲಿಗೆ ಕಾರಣ. ಅವರ ಪ್ರಚಾರದ ಹಕ್ಕು ಅವರು ಮಾಡಿದ್ದಾರೆ. ಅಸ್ತಿತ್ವದಲ್ಲಿ ಇಲ್ಲದ ಪಕ್ಷ ಬಂದು ಮತಗಳ ವಿಭಜನೆ ಮಾಡಿದೆ ಎಂದು ಪರೋಕ್ಷವಾಗಿ ಆಮ್ ಆದ್ಮಿ ಪಕ್ಷವೇ ನಮ್ಮ ಸೋಲಿಗೆ ಕಾರಣ ಎಂದರು.

ಇದನ್ನೂ ಓದಿ: Himachal Pradesh Poll Results 2022 ಹಿಮಾಚಲದಲ್ಲಿ ಗದ್ದುಗೆ ಹಿಡಿದ್ರೂ ಸಿಎಂ ಆಯ್ಕೆ ಕಗ್ಗಂಟು: ಅವರ ಬಿಟ್ಟು, ಇವರ ಬಿಟ್ಟು, ಮತ್ಯಾರು..?

ಹಿಮಾಚಲ ಪ್ರದೇಶ ಫಲಿತಾಂಶದ ಖರ್ಗೆ ಮಾತು

ಇನ್ನು ಇದೇ ವೇಳೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್​ ಗೆಲುವಿನ ಬಗ್ಗೆ ಮಾತನಾಡಿರುವ ಖರ್ಗೆ, ಆ ರಾಜ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮದ ಪಟ್ಟಿ ನೀಡಿದ್ದೆವು. ಆದ್ದರಿಂದ ಹಿಮಾಚಲ ಪ್ರದೇಶದ ಜನ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಹಿಮಾಚಲ ಪ್ರದೇಶದ ಗೆಲುವಿನಲ್ಲಿ ಪ್ರಿಯಾಂಕಾ ಪಾತ್ರವೂ ಇದೆ. ರ್ಯಾಲಿ, ಸಮಾವೇಶ ನಡೆಸಿ ಪಕ್ಷದ ಗೆಲುವಿಗೆ ಕಾರಣರಾಗಿದ್ದಾರೆ ಎಂದು ತಿಳಿಸಿದರು.

ಭಾರತ್ ಜೋಡೋ ಯಾತ್ರೆ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹಿಮಾಚಲ ಪ್ರದೇಶ ರಾಜ್ಯದ ಜನ ಬಹಳ ಮೆಚ್ಚುಗೆ ವ್ಯಕ್ತಪಡಿಸಿದ್ದರು. ನಾನು ಹಿಮಾಚಲ ಪ್ರದೇಶಕ್ಕೆ ಹೋದಾಗ ಉತ್ತಮ ಸ್ಪಂದನೆ ಸಿಕ್ಕಿತ್ತು.ಹೀಗಾಗಿ ಉತ್ತಮ ಬಹುಮತದಿಂದ ಪಕ್ಷಕ್ಕೆ ಗೆಲುವು ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ