ಲೋಕಸಭಾ ಚುನಾವಣೆಯಲ್ಲಿ 400 ಅಲ್ಲ 100 ಸ್ಥಾನಗಳನ್ನೂ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 400 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತವೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ತಿರುಗೇಟು ನೀಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅವರನ್ನು ಅಧಿಕಾರದಿಂದ ಹೊರಹಾಕಲಾಗುತ್ತದೆ ಮತ್ತು 100 ಸ್ಥಾನಗಳನ್ನು ಸಹ ಪಡೆಯುವುದಿಲ್ಲ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ 400 ಅಲ್ಲ 100 ಸ್ಥಾನಗಳನ್ನೂ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆImage Credit source: Business Today
Follow us
|

Updated on: Feb 20, 2024 | 11:00 AM

ಲೋಕಸಭೆ ಚುನಾವಣೆ(Lok Sabha Election)ಯಲ್ಲಿ 400 ಅಲ್ಲ 100 ಸ್ಥಾನಗಳನ್ನೂ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಭವಿಷ್ಯ ನುಡಿದಿದ್ದಾರೆ.ಅಮೇಥಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ 400 ಸೀಟುಗಳ ಕನಸು ಸಾಕಾರಗೊಳ್ಳುವುದಿಲ್ಲ ಎಂದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನಗಳನ್ನು ಗೆಲ್ಲುವುದಿಲ್ಲ ಮತ್ತು ಅದನ್ನು ಅಧಿಕಾರದಿಂದ ಹೊರಹೋಗುತ್ತದೆ ಎಂದು ಖರ್ಗೆ ಹೇಳಿದರು.

ಅಬ್​ಕಿ ಬಾರ್ ಸತ್ತಾ ಸೆ ಬಾಹರ್ ಅಂದರೆ ಈ ಬಾರಿ ಅವರನ್ನು ಅಧಿಕಾರದಿಂದ ಗೆಳಗಿಳಿಸಲಾಗುವುದು ಎಂದರು. ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ಕಾಂಗ್ರೆಸ್‌ ಹಲವು ಬಾರಿ ಚುನಾವಣೆಯಲ್ಲಿ ಗೆದಿದ್ದದ್ದರೂ ಜನರಲ್ಲಿ ದ್ವೇಷ ಬಿತ್ತಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಾಂಗ್ರೆಸ್ ಅಧಿಕಾರಾವಧಿಯಲ್ಲಿ, ಅಮೇಥಿಯಲ್ಲಿ ಕೋಟ್ಯಂತರ ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು ಆದರೆ ಅವುಗಳಲ್ಲಿ ಹೆಚ್ಚಿನವು ಬಾಕಿ ಉಳಿದಿವೆ. ಯೋಜನೆಗಳು ಇನ್ನೂ ಏಕೆ ಅಪೂರ್ಣವಾಗಿವೆ. 2019 ರ ಲೋಕಸಭಾ ಚುನಾವಣೆಯವರೆಗೂ ಅಮೇಥಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು, ಬಿಜೆಪಿಯ ಸ್ಮಿರಿತ್ ಇರಾನಿ ಅವರು ರಾಹುಲ್ ಗಾಂಧಿಯನ್ನು ಸೋಲಿಸಿದರು. ಸೋನಿಯಾ ಗಾಂಧಿ ಅವರು ರಾಯ್ ಬರೇಲಿಯಿಂದ ಗೆದ್ದಿದ್ದರು.

ಮತ್ತಷ್ಟು ಓದಿ: ಸೋನಿಯಾ ಗಾಂಧಿ ರಾಜ್ಯಸಭೆಗೆ, ಪ್ರಿಯಾಂಕಾ ರಾಯ್ ಬರೇಲಿಯಿಂದ ಸ್ಪರ್ಧೆ ಸಾಧ್ಯತೆ: ಮೂಲಗಳು

ದೊಡ್ಡ ಕಂಪನಿಗಳಿಗೆ ಕೋಟ್ಯಂತರ ರೂಪಾಯಿ ಸಬ್ಸಿಡಿ ನೀಡುತ್ತಿದ್ದು, ಬಡವರು, ರೈತರು ಮತ್ತು ಮಹಿಳೆಯರಿಗೆ ನೀಡುತ್ತಿದ್ದ ಸಬ್ಸಿಡಿಯನ್ನು ತೆಗೆದುಹಾಕಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷರು ಆರೋಪಿಸಿದರು.

ಇದೇ ಮೊದಲ ಬಾರಿಗೆ ರೈತರ ಮೇಲೆ ವಿವಿಧ ರೀತಿಯ ತೆರಿಗೆಗಳನ್ನು ವಿಧಿಸಲಾಗಿದೆ ಎಂದು ಹೇಳಿದರು. ಟ್ರ್ಯಾಕ್ಟರ್‌ಗಳು, ರಸಗೊಬ್ಬರಗಳು ಮತ್ತು ಯಂತ್ರೋಪಕರಣಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸಲಾಗಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ಆಡಳಿತವಿರುವ ಹಲವು ರಾಜ್ಯಗಳಲ್ಲಿ ಕೃಷಿ ಸಾಲ ಮನ್ನಾ ಮಾಡಲಾಗಿದೆ ಎಂದು ಖರ್ಗೆ ಹೇಳಿದರು.

ರಾಹುಲ್ ಗಾಂಧೀಜಿಯವರು ಅಮೇಥಿಯೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿದ್ದಾರೆ, ಅವರು ಇಂದಿಗೂ ನಿಮ್ಮೊಂದಿಗಿದ್ದಾರೆ ಮತ್ತು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ