ಬಲಿಪಾಡ್ಯಮಿ ದಿನದಂದೇ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ
ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಮುಹೂರ್ತ ಫಿಕ್ಸ್ ಆಗಿದೆ.
ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ (Mallikarjun kharge) ಅವರು ಬಲಿಪಾಡ್ಯಮಿ ದಿನದಂದು ಅಂದರೆ ಅಕ್ಟೋಬರ್ 26ರಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಇಂದು(ಅ.19) ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಅ.26ರಂದು ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದೇನೆ ಎಂದು ಮಾಹಿತಿ ನೀಡಿದರು.
Delhi | Congress President-elect Mallikarjun Kharge will take charge on October 26: Congress MP Randeep Surjewala pic.twitter.com/kxTXh9M7QO
— ANI (@ANI) October 19, 2022
ಕೇರಳದ ಸಂಸದ ಶಶಿ ತರೂರ್ (Shashi Tharoor) ಮತ್ತು ಕರ್ನಾಟಕದ ಮಲ್ಲಿಕಾರ್ಜುನ್ ಖರ್ಗೆ ನಡುವೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. 24 ವರ್ಷಗಳ ನಂತರ ಅಕ್ಟೋಬರ್ 17ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು.
ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ 7,897 ಮತಗಳನ್ನು ಪಡೆದರೆ, ಶಶಿ ತರೂರ್ 1,072 ಮತ ಪಡೆಯುವಲ್ಲಿ ಮಾತ್ರ ಶಕ್ತರಾದರು. ಈ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಯಾಗಿದ್ದವು ಈ ಪೈಕಿ 416 ಮತಗಳು ಅಮಾನ್ಯಗೊಂಡಿವೆ.
Published On - 5:23 pm, Wed, 19 October 22