Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ​ ಸಾಧನೆಯಿಂದ ಬೇಸರವಾಗಿದೆ: ಸೋನಿಯಾ ಗಾಂಧಿ

ಅಸ್ಸಾಂನಲ್ಲಿ ಬಿಜೆಪಿ ಮತ್ತು ಕೇರಳದಲ್ಲಿ ಎಡರಂಗವನ್ನು ಅಧಿಕಾರದಿಂದ ಕೆಳಗಿಳಿಸಿ, ತನ್ನದೇ ಸರ್ಕಾರ ಅವಕಾಶ ಕಾಂಗ್ರೆಸ್ ಪಕ್ಷಕ್ಕೆ ಇತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಇದು ಈಗ ಪಕ್ಷದ ಆಂತರಿಕ ವಲಯದಲ್ಲಿ ಅಪಸ್ವರ ಕೇಳಿಬರಲು ಕಾರಣವಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ​ ಸಾಧನೆಯಿಂದ ಬೇಸರವಾಗಿದೆ: ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: May 07, 2021 | 10:27 PM

ದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಈಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆ ತೃಪ್ತಿ ನೀಡಿಲ್ಲ. ಶೀಘ್ರದಲ್ಲಿಯೇ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ನಡೆಸಿ, ಪಕ್ಷದ ಕಳಪೆ ಸಾಧನೆಯ ಬಗ್ಗೆ ಪರಾಮರ್ಶಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಸಂಸದೀಯ ಸಮಿತಿಯ ಸಭೆ ನಡೆಸಿದ ಸೋನಿಯಾ ಗಾಂಧಿ ಪಕ್ಷವು ಈ ಕಳಪೆ ಸಾಧನೆಯಿಂದ ಪ್ರಾಮಾಣಿಕವಾದ ಮತ್ತು ಸರಿಯಾದ ಪಾಠಗಳನ್ನು ಕಲಿಯಬೇಕು ಎಂದು ಹೇಳಿದರು.

ಅಸ್ಸಾಂನಲ್ಲಿ ಬಿಜೆಪಿ ಮತ್ತು ಕೇರಳದಲ್ಲಿ ಎಡರಂಗವನ್ನು ಅಧಿಕಾರದಿಂದ ಕೆಳಗಿಳಿಸುವ ಅವಕಾಶ ಕಾಂಗ್ರೆಸ್ ಪಕ್ಷಕ್ಕೆ ಇತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷವು ಎಡರಂಗದೊಂದಿಗೆ ಮೈತ್ರಿಮಾಡಿಕೊಂಡಿತ್ತು. ಆದರೆ ಒಂದೂ ಸ್ಥಾನ ಗೆಲ್ಲಲು ಪಕ್ಷಕ್ಕೆ ಸಾಧ್ಯವಾಗಿರಲಿಲ್ಲ. ವಿಧಾನಸಭಾ ಚುನಾವಣೆಗಳಲ್ಲಿ ನಮ್ಮ ಪಕ್ಷದ ಸಾಧನೆ ಏನೇನೂ ಚೆನ್ನಾಗಿರಲಿಲ್ಲ ಎಂದು ಸಂಸದೀಯ ಪಕ್ಷದ ಸಭೆಯಲ್ಲಿ ಹೇಳಿದರು. ದೇಶಾದ್ಯಂತ ಕೊರೊನಾ 2ನೇ ಅಲೆ ವ್ಯಾಪಿಸಿರುವುದರಿಂದ ವರ್ಚುವಲ್ ಸಭೆ ನಡೆಯಿತು.

ಕಾಂಗ್ರೆಸ್​ನ ಕೇಂದ್ರ ಕಾರ್ಯಕಾರಿ ಸಮಿತಿ ಸಭೆಯು ಫಲಿತಾಂಶವನ್ನು ಪರಾಮರ್ಶಿಸಲಿದೆ. ಈ ಹಿಂದೆ ದೆಹಲಿ ಮತ್ತು ಆಂಧ್ರ ಪ್ರದೇಶಗಳಲ್ಲಿ ಕಾಂಗ್ರೆಸ್​ನಿಂದ ಒಬ್ಬನೇ ಒಬ್ಬ ಶಾಸಕ ಆಯ್ಕೆಯಾಗಿಲ್ಲ. ಇದೀಗ ಈ ಸಾಲಿಗೆ ಪಶ್ಚಿಮ ಬಂಗಾಳವೂ ಸೇರಿದಂತೆ ಆಗಿದೆ. ಮುಖ್ಯವಾಗಿ ಕೇರಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆಯ ಬಗ್ಗೆ ಪಕ್ಷದ ನಾಯಕರ ಒಂದು ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಬಲ ಎದುರಾಳಿ ಎನಿಸಿಕೊಂಡಿತ್ತು.

ಅಸ್ಸಾಂನಲ್ಲಿ ಎಐಯುಡಿಎಫ್ ಮತ್ತು ಪಶ್ಚಿಮ ಬಂಗಾಳದಲ್ಲಿ ಇಂಡಿಯನ್ ಸೆಕ್ಯುಲರ್ ಫ್ರಂಟ್ ಜೊತೆಗಿನ ಮೈತ್ರಿಗೂ ಕಾಂಗ್ರೆಸ್​ ಪಕ್ಷದ ಕೆಲ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಫಲಿತಾಂಶವನ್ನು ಕೂಲಂಕಶವಾಗಿ ಪರಿಶೀಲಸಿ, ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಇದೀಗ ಹೇಳಿದೆ. ವಿಧಾನಸಭೆ ಚುನಾವಣೆಗಳ ಬಗ್ಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದ ಕಾಂಗ್ರೆಸ್ ಪಕ್ಷವು ಕೋವಿಡ್-19 ಪರಿಸ್ಥಿತಿ ನಿರ್ವಹಣೆ ಕಡೆಗೆ ಹೆಚ್ಚು ಗಮನ ಕೊಡಲು ನಿರ್ಧರಿಸಿರುವುದಾಗಿ ಹೇಳಿತ್ತು.

(Congress President Sonia Gandhi Says She is Very disappointed with Congress performance in state polls)

ಇದನ್ನೂ ಓದಿ: ಬೆಡ್ ಬ್ಲಾಕಿಂಗ್ ಪ್ರಕರಣ; ಬಿಜೆಪಿ ಶಾಸಕ ಸತೀಶ್ ರೆಡ್ಡಿ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ

ಇದನ್ನೂ ಓದಿ: ಸರ್ಬಾನಂದ ಸೋನೊವಾಲ್ ಅಥವಾ ಹಿಮಾಂತ ಬಿಸ್ವ ಶರ್ಮಾ: ಅಸ್ಸಾಂ ಮುಖ್ಯಮಂತ್ರಿ ಸ್ಥಾನ ಯಾರಿಗೆ?

ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ