ಬಿಜೆಪಿಗೆ ಜನರಿಂದ ಸೋಲಿನ ದೀಪಾವಳಿ ಉಡುಗೊರೆ: ಕಾಂಗ್ರೆಸ್ ವ್ಯಂಗ್ಯ

ಬಿಜೆಪಿಯವರು ದೇಶಕ್ಕೆ ಬೆಲೆ ಏರಿಕೆ ಉಡುಗೊರೆ ಕೊಟ್ಟರು. ಈಗ ಬಿಜೆಪಿಗೆ ದೇಶಾದ್ಯಂತ ದೀಪಾವಳಿಗೆ ಸೋಲಿನ ಉಡುಗೊರೆಯನ್ನು ಮತದಾರರು ಕೊಡುತ್ತಿದ್ದಾರೆ ಎಂದು ಕಾಂಗ್ರೆಸ್​ ವ್ಯಂಗ್ಯವಾಡಿದೆ.

ಬಿಜೆಪಿಗೆ ಜನರಿಂದ ಸೋಲಿನ ದೀಪಾವಳಿ ಉಡುಗೊರೆ: ಕಾಂಗ್ರೆಸ್ ವ್ಯಂಗ್ಯ
ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 02, 2021 | 5:23 PM

ದೆಹಲಿ: ಬಿಜೆಪಿಯವರು ದೇಶಕ್ಕೆ ಬೆಲೆ ಏರಿಕೆ ಉಡುಗೊರೆ ಕೊಟ್ಟರು. ಈಗ ಬಿಜೆಪಿಗೆ ದೇಶಾದ್ಯಂತ ದೀಪಾವಳಿಗೆ ಸೋಲಿನ ಉಡುಗೊರೆಯನ್ನು ಮತದಾರರು ಕೊಡುತ್ತಿದ್ದಾರೆ ಎಂದು ಕಾಂಗ್ರೆಸ್​ ವ್ಯಂಗ್ಯವಾಡಿದೆ. ದೇಶದ ವಿವಿಧೆಡೆ ಘೋಷಣೆಯಾದ ಉಪಚುನಾವಣೆ ಫಲಿತಾಂಶ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಯುವ​ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ತವರಿನಲ್ಲಿಯೇ ಬಿಜೆಪಿ ಶೂನ್ಯ ಸಾಧನೆ ಮಾಡಿದೆ ಎಂದಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ಚುನಾವಣೆ ನಡೆದ ಎರಡೂ ಕ್ಷೇತ್ರದಲ್ಲಿ ಜಯಗಳಿಸಿದ್ದರೆ, ಕರ್ನಾಟಕದಲ್ಲಿ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್​ಗೆ ಮನ್ನಣೆ ಸಿಕ್ಕಿದೆ. ಕೋಮುವಾದದಿಂದಾಗಿ ಬಿಜೆಪಿ ಜನರ ವಿಶ್ವಾಸ ಕಳೆದುಕೊಳ್ಳುತ್ತಿದೆ. ಕರ್ನಾಟಕದಲ್ಲಿ ಬಿಜೆಪಿಯವರ ಕೋಮುವಾದ ನಡೆದಿಲ್ಲ ಎಂದು ತಿಳಿಸಿದ್ದಾರೆ.

2023ರ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತಗಳಿಸಿ, ಅಧಿಕಾರಕ್ಕೆ ಬರಲಿದೆ. ಬಿಜೆಪಿಯವರು ಸಿಂದಗಿಯಲ್ಲಿ ಹಣ ಬಲದಿಂದ ಗೆದ್ದಿದ್ದಾರೆ. ಮುಖ್ಯಮಂತ್ರಿ ತವರು ಜಿಲ್ಲೆ ಹಾನಗಲ್​ನಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ಕಳೆದ 2 ತಿಂಗಳಲ್ಲಿ 36 ಬಾರಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಾಗಿದೆ. ಕರ್ನಾಟಕ ಮತ್ತು ದೇಶದಲ್ಲಿ ಜನರು ಪರ್ಯಾಯ ಹುಡುಕುತ್ತಿದ್ದಾರೆ ಎಂದು ಅವರು ತಿಳಿಸಿದರು.

ಹಾನಗಲ್ ಉಪಚುನಾವಣೆ ಸೋಲನ್ನು ಸಿಎಂ ಒಬ್ಬರ ಮೇಲೆ ಹಾಕಲು ಆಗಲ್ಲ ಬೆಂಗಳೂರು: ಸಿಂದಗಿ ಕ್ಷೇತ್ರದಲ್ಲಿ ನಿರೀಕ್ಷೆ ಮೀರಿ ಗೆಲುವು ಸಾಧಿಸಿದ್ದೇವೆ. 30 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ. ಸಿಂದಗಿ ಕ್ಷೇತ್ರದ ಜನರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಹಾನಗಲ್​ ಕ್ಷೇತ್ರದಲ್ಲಿ ಕೂಡ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಹಿನ್ನಡೆ ಆಗಿದೆ. ಅದಕ್ಕಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬೀಗುವ ಅವಶ್ಯಕತೆ ಇಲ್ಲ. ಈ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿಯಲ್ಲ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಇಲ್ಲಿ ಬೊಮ್ಮಾಯಿ ನಾಯಕತ್ವದ ಪ್ರಶ್ನೆ ಉದ್ಭವಿಸಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿದ್ದೇವೆ. ಸೋಲು, ಗೆಲುವನ್ನು ಸಮಾನವಾಗಿ ಹಂಚಿಕೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಒಟ್ಟಾಗಿ ಪಕ್ಷ ಬಲಪಡಿಸುತ್ತೇವೆ. ಎಲ್ಲಿ ಎಡವಿದ್ದೇವೆ ಎಂದು ನಾವು ಚರ್ಚೆ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗೆ ಭೇಟಿ ನೀಡುತ್ತೇನೆ. ಈ ಸೋಲನ್ನು ಸಿಎಂ ಒಬ್ಬರ ಮೇಲೆ ಹಾಕಲು ಆಗಲ್ಲ. ಎಲ್ಲರೂ ಕುಳಿತು ಸೋಲಿನ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಾನಗಲ್, ಸಿಂದಗಿ ಉಪಚುನಾವಣೆ ಅಂತಿಮ ಫಲಿತಾಂಶ: ಯಾರಿಗೆ ಎಷ್ಟು ಅಂತರದ ಗೆಲುವು? ಇಲ್ಲಿದೆ ವಿವರ ಇದನ್ನೂ ಓದಿ: ಉಪಚುನಾವಣೆಯಲ್ಲಿ ಗೆಲುವು ಯಾರಿಗೆ? ವಕ್ತಾರರ ಅಭಿಪ್ರಾಯಗಳೇನು?

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್