ರಾಮನನ್ನೇ ಕಾಲ್ಪನಿಕ ಎಂದವರು ರಾಮ ಮಂದಿರವನ್ನು ಹೇಗೆ ಒಪ್ಪಿಕೊಂಡಾರು: ಧರ್ಮೇಂದ್ರ ಪ್ರಧಾನ್
ರಾಮನನ್ನೇ ಕಾಲ್ಪನಿಕ ಎಂದವರು, ರಾಮ ಮಂದಿರ(Ram Mandir)ವನ್ನು ಹೇಗೆ ಒಪ್ಪಿಕೊಂಡಾರು ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ರಾಷ್ಟ್ರದ ಮುಕುಟಮಣಿಯಂತೆ ನಿರ್ಮಾಣವಾಗಿರುವ ಅಯೋಧ್ಯೆ ರಾಮ ಮಂದಿರದ ಕುರಿತು ತೀವ್ರ ರಾಜಕೀಯ ಚರ್ಚೆ ನಡೆಯುತ್ತಿದೆ.
ರಾಮನನ್ನೇ ಕಾಲ್ಪನಿಕ ಎಂದವರು, ರಾಮ ಮಂದಿರ(Ram Mandir)ವನ್ನು ಹೇಗೆ ಒಪ್ಪಿಕೊಂಡಾರು ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್(Dharmendra Pradhan) ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ರಾಷ್ಟ್ರದ ಮುಕುಟಮಣಿಯಂತೆ ನಿರ್ಮಾಣವಾಗಿರುವ ಅಯೋಧ್ಯೆ ರಾಮ ಮಂದಿರದ ಕುರಿತು ತೀವ್ರ ರಾಜಕೀಯ ಚರ್ಚೆ ನಡೆಯುತ್ತಿದೆ.
ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಕಮಿಟಿ ಇಡೀ ದೇಶವೇ ಹೆಮ್ಮೆ ಪಡುವಂತಹ ನಿರ್ಮಾಣಕ್ಕೆ ಕೈ ಹಾಕಿದೆ. ರಾಮನನ್ನು ಕಾಲ್ಪನಿಕ ಎಂದು ಪರಿಗಣಿಸಿರುವ ಕಾಂಗ್ರೆಸ್, ರಾಮನ ಮಂದಿರ ನಿರ್ಮಾಣವನ್ನು ಪಕ್ಷದ ನಾಯಕರು ಹೇಗೆ ಒಪ್ಪಿಕೊಳ್ಳುತ್ತಾರೆ ಎಂದು ಪ್ರಧಾನ್ ಪ್ರಶ್ನಿಸಿದ್ದಾರೆ.
ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರಕ್ಕೆ ಜನವರಿ 22ರಂದು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ದೇಶ ವಿದೇಶಗಳಿಂದ ಸಾವಿರಾರು ಗಣ್ಯರು ಆಗಮಿಸಲಿದ್ದಾರೆ. ಈಗಾಗಲೇ ಹಲವು ಮಂದಿಗೆ ವಿಶೇಷ ಆಹ್ವಾನ ಬಂದಿದೆ.
ಮತ್ತಷ್ಟು ಓದಿ: ಶ್ರೀರಾಮ ಆರಾಧ್ಯ ದೈವ, ಕಾಂಗ್ರೆಸ್ ಇಂತಹ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು: ಕಾಂಗ್ರೆಸ್ ನಾಯಕ ಅರ್ಜುನ್ ಮೊಧ್ವಾಡಿಯಾ
ದೇಶದ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರಿಗೆ ಆಹ್ವಾನ ಪತ್ರಿಕೆ ಬಂದಿದೆ. ಆದರೆ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಬುಧವಾರ ಸಂಜೆ ಸ್ಪಷ್ಟಪಡಿಸಿದೆ.
ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಬರುವಂತೆ ನೀಡಿದ ಆಹ್ವಾನವನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ಮತ್ತೊಮ್ಮೆ ಶ್ರೀರಾಮ ಮತ್ತು ಶ್ರೀರಾಮ ಮಂದಿರದ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ ಎಂದಿದ್ದಾರೆ.
ಶ್ರೀ ರಾಮ ಮಂದಿರ ನಿರ್ಮಾಣ ಮಾಡದಿರುವಂತೆ ಮಾಡಲು ಬೇಕಾದ ಎಲ್ಲಾ ಅಡೆತಡೆಗಳನ್ನು ಕಾಂಗ್ರೆಸ್ ಸೃಷ್ಟಿ ಮಾಡಿತ್ತು. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವುದು ಪ್ರತಿಯೊಬ್ಬ ಭಾರತೀಯನ ಭಾಗ್ಯ, ರಾಜಕಾರಣಕ್ಕಾಗಿ ಕಾಂಗ್ರೆಸ್ ನಾಯಕರು ಜನರ ಭಾವನೆಗಳನ್ನು ಬದಿಗಿಟ್ಟಿರುವುದು ವಿಷಾದನೀಯ. ಮೋದಿ-ಬಿಜೆಪಿಯನ್ನು ವಿರೋಧಿಸುತ್ತಲೇ ಕಾಂಗ್ರೆಸ್ ಕೂಡ ದೇಶವನ್ನು ವಿರೋಧಿಸಲು ಪ್ರಾರಂಭಿಸಿದೆ ಎಂದಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:59 am, Thu, 11 January 24