ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್​, ರಾಜಸ್ಥಾನದಿಂದ ಸೋನಿಯಾ ಸ್ಪರ್ಧೆ

ನಾಲ್ಕು ರಾಜ್ಯಗಳ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್​ ಬಿಡುಗಡೆ ಮಾಡಿದೆ. ರಾಜಸ್ಥಾನದಿಂದ ಸೋನಿಯಾ ಗಾಂಧಿಯನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನುಸಿಂಘ್ವಿಗೆ ಟಿಕೆಟ್ ನೀಡಲಾಗಿದೆ, ಬಿಹಾರದಿಂದ ಡಾ. ಅಖಿಲೇಶ್​ ಪ್ರಸಾದ್ ಸಿಂಗ್ ಸ್ಪರ್ಧಿಸಿದರೆ ಮಹಾರಾಷ್ಟ್ರದಿಂದ ಚಂದ್ರಕಾಂತ್​ಗೆ ಹಂಡೋರೆಗೆ ಟಿಕೆಟ್​ ನೀಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಟ್ಟಿಯನ್ನು ಪ್ರಕಟ ಮಾಡಿದ್ದಾರೆ.

ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್​, ರಾಜಸ್ಥಾನದಿಂದ ಸೋನಿಯಾ ಸ್ಪರ್ಧೆ
ಸೋನಿಯಾ ಗಾಂಧಿ
Follow us
ನಯನಾ ರಾಜೀವ್
|

Updated on:Feb 14, 2024 | 12:30 PM

ಬಿಜೆಪಿಯು ರಾಜ್ಯಸಭಾ ಅಭ್ಯರ್ಥಿ(Rajya Sabha Candidate)ಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್​(Congress) ಕೂಡ ನಾಲ್ಕು ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜಸ್ಥಾನದಿಂದ ಸೋನಿಯಾ ಗಾಂಧಿ(Sonia Gandhi)ಯನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನುಸಿಂಘ್ವಿಗೆ ಟಿಕೆಟ್ ನೀಡಲಾಗಿದೆ, ಬಿಹಾರದಿಂದ ಡಾ. ಅಖಿಲೇಶ್​ ಪ್ರಸಾದ್ ಸಿಂಗ್ ಸ್ಪರ್ಧಿಸಿದರೆ ಮಹಾರಾಷ್ಟ್ರದಿಂದ ಚಂದ್ರಕಾಂತ್​ಗೆ ಹಂಡೋರೆಗೆ ಟಿಕೆಟ್​ ನೀಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಟ್ಟಿಯನ್ನು ಪ್ರಕಟ ಮಾಡಿದ್ದಾರೆ.

ರಾಜಸ್ಥಾನದಿಂದ ಸೋನಿಯಾ ಗಾಂಧಿ ಮತ್ತು ಹಿಮಾಚಲದಿಂದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಟಿಕೆಟ್ ನೀಡಲಾಗಿದೆ. ಇದರೊಂದಿಗೆ ಬಿಹಾರದಿಂದ ಅಖಿಲೇಶ್ ಪ್ರಸಾದ್ ಸಿಂಗ್ ಮತ್ತು ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರೆ ಹೆಸರನ್ನು ಪ್ರಕಟಿಸಲಾಗಿದೆ. ಚಂದ್ರಕಾಂತ ಹಂದೋರೆ ಮಹಾರಾಷ್ಟ್ರದ ದಲಿತ ನಾಯಕ. ಮಧ್ಯಪ್ರದೇಶದಲ್ಲಿ ಒಂದು, ತೆಲಂಗಾಣದಲ್ಲಿ ಎರಡು ಮತ್ತು ಕರ್ನಾಟಕದಲ್ಲಿ ಮೂರು ರಾಜ್ಯಸಭಾ ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಇನ್ನೂ ಘೋಷಿಸಿಲ್ಲ.

ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಬುಧವಾರ ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಮತ್ತು ಇತರ ಕೆಲವು ನಾಯಕರು ಸೋನಿಯಾ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ಮತ್ತಷ್ಟು ಓದಿ: Rajya Sabha Election: ರಾಜ್ಯಸಭಾ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ, ಒಡಿಶಾದಿಂದ ಅಶ್ವಿನಿ ವೈಷ್ಣವ್

ಸೋನಿಯಾ ಗಾಂಧಿ 1999 ರಿಂದ ಲೋಕಸಭಾ ಸದಸ್ಯರಾಗಿದ್ದಾರೆ ಮತ್ತು ಪ್ರಸ್ತುತ ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಸಂಸದೀಯ ಸ್ಥಾನವನ್ನು ಪ್ರತಿನಿಧಿಸುತ್ತಿದ್ದಾರೆ. ಅಮೇಥಿಯ ಲೋಕಸಭಾ ಸದಸ್ಯರೂ ಆಗಿದ್ದಾರೆ. ಅವರು ಸಂಸತ್ತಿನ ಮೇಲ್ಮನೆಗೆ ಹೋಗುತ್ತಿರುವುದು ಇದೇ ಮೊದಲು. ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ನಂತರ ರಾಜ್ಯಸಭೆಗೆ ಪ್ರವೇಶಿಸಿದ ಗಾಂಧಿ ಕುಟುಂಬದ ಎರಡನೇ ಸದಸ್ಯರಾಗಿದ್ದಾರೆ.

ಇಂದಿರಾ ಗಾಂಧಿ ಅವರು ಆಗಸ್ಟ್ 1964 ರಿಂದ ಫೆಬ್ರವರಿ 1967 ರವರೆಗೆ ಮೇಲ್ಮನೆಯ ಸದಸ್ಯರಾಗಿದ್ದರು. ಒಂದು ವೇಳೆ ರಾಜ್ಯಸಭೆಗೆ ಹೋದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಸ್ಪರ್ಧಿಸದಿರುವ ಸಾಧ್ಯತೆ ದಟ್ಟವಾಗಿದೆ. ಸೋನಿಯಾ ಗಾಂಧಿ 2019 ರಲ್ಲಿ ಇದು ಅವರ ಕೊನೆಯ ಲೋಕಸಭೆ ಚುನಾವಣೆ ಎಂದು ಘೋಷಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:18 pm, Wed, 14 February 24

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು