AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರ ಚುನಾವಣೆ: ರಾಹುಲ್, ಖರ್ಗೆ​ ಒಳಗೊಂಡ 40 ಮಂದಿಯ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್​

ಮುಂಬರಲಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕಾಂಗ್ರೆಸ್​ನ ಯಾವ್ಯಾವ ನಾಯಕರ ಹೆಸರಿದೆ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

ಜಮ್ಮು ಕಾಶ್ಮೀರ ಚುನಾವಣೆ: ರಾಹುಲ್, ಖರ್ಗೆ​ ಒಳಗೊಂಡ 40 ಮಂದಿಯ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್​
ಕಾಂಗ್ರೆಸ್​ ಸ್ಟಾರ್ ಪ್ರಚಾರಕರು
ನಯನಾ ರಾಜೀವ್
|

Updated on:Sep 01, 2024 | 8:48 AM

Share

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ಶನಿವಾರ ಬಿಡುಗಡೆಯಾದ ಈ ಪಟ್ಟಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 40 ದೊಡ್ಡ ಹೆಸರುಗಳಿವೆ.

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಮತ್ತು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರ ಹೆಸರುಗಳೂ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರಿವೆ. ಇದಲ್ಲದೆ ಕೆಸಿ ವೇಣುಗೋಪಾಲ್, ಅಜಯ್ ಮಾಕನ್, ಅಂಬಿಕಾ ಸೋನಿ, ಭರತ್ ಸಿಂಗ್ ಸೋಲಂಕಿ, ತಾರಿಕ್ ಹಮೀದ್ ಕರ್ರಾ, ಜೈರಾಮ್ ರಮೇಶ್, ಗುಲಾಮ್ ಅಹಮ್ ಮಿರ್, ಮುಖೇಶ್ ಅಗ್ನಿಹೋತ್ರಿ, ಚರಂಜಿತ್ ಸಿಂಗ್ ಚನ್ನಿ, ಸಲ್ಮಾನ್ ಖುರ್ಷಿದ್, ಸುಖಿಂದರ್ ಸಿಂಗ್ ರಾಂಧವಾ, ಅಮರಿಂದರ್ ಸಿಂಗ್ ರಾಜಾದ್ ವಾಡಿಂಗ್ ನಾಸೀರ್ ಹುಸೇನ್ ವಿಕಾರ್ ರಸೂಲ್ ವಾನಿ ಹೆಸರನ್ನೂ ಘೋಷಿಸಲಾಗಿದೆ.

ರಜನಿ ಪಾಟೀಲ್, ರಾಜೀವ್ ಶುಕ್ಲಾ, ಮನೀಶ್ ತಿವಾರಿ, ಇಮ್ರಾನ್ ಪ್ರತಾಪ್‌ಗರ್ಹಿ, ಕಿಶೋರಿ ಲಾಲ್ ಶರ್ಮಾ, ರಂಜಿತ್ ರಂಜನ್, ರಮಣ್ ಭಲ್ಲಾ, ತಾರಾಚಂದ್, ಚೌಧರಿ ಲಾಲ್ ಸಿಂಗ್, ಪೀರ್ಜಾದಾ ಮೊಹಮ್ಮದ್ ಸಯೀದ್, ಪವನ್ ಮಾಸ್ , ಸುಪ್ರಿಯಾ ಶ್ರೀನೆಟ್, ಕನ್ಹಯ್ಯಾ ಕುಮಾರ್, ಮನೋಜ್ ಯಾದವ್, ಶಾನವಾಜ್ ಚೌಧರಿ, ರಾಜೇಶ್ ಲಿಲೋಥಿಯಾ, ಅಲ್ಕಾ ಲಂಬಾ, ಶ್ರೀನಿವಾಸ್ ಬೀವಿ ಮತ್ತು ನೀರಜ್ ಕುಂದನ್ ಕೂಡ ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳಲ್ಲಿ ಚುನಾವಣಾ ಆಯೋಗವು ಕೆಲವು ಬದಲಾವಣೆಗಳನ್ನು ಮಾಡಿದೆ. ಈಗ ಚುನಾವಣಾ ಫಲಿತಾಂಶವನ್ನು ಅಕ್ಟೋಬರ್ 4 ರ ಬದಲು ಅಕ್ಟೋಬರ್ 8 ರಂದು ಪ್ರಕಟಿಸಲಾಗುವುದು.

ಮತ್ತಷ್ಟು ಓದಿ: ಹರ್ಯಾಣದಲ್ಲಿ ಮತದಾನ ಅಕ್ಟೋಬರ್ 5ಕ್ಕೆ ಮುಂದೂಡಿಕೆ, 8 ರಂದು ಫಲಿತಾಂಶ: ಚುನಾವಣಾ ಆಯೋಗ

ಜಮ್ಮು ಮತ್ತು ಕಾಶ್ಮೀರದ 90 ವಿಧಾನಸಭಾ ಸ್ಥಾನಗಳಿಗೆ ಮೂರು ಹಂತಗಳಲ್ಲಿ ಚುನಾವಣೆಗಳು ನಡೆಯಲಿವೆ. ಮೊದಲ ಹಂತದಲ್ಲಿ ಸೆಪ್ಟೆಂಬರ್ 18 ರಂದು ರಾಜ್ಯದ 24 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ, ಸೆಪ್ಟೆಂಬರ್ 25 ರಂದು ಜಮ್ಮು ಮತ್ತು ಕಾಶ್ಮೀರದ 26 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಮೂರನೇ ಮತ್ತು ಕೊನೆಯ ಹಂತದಲ್ಲಿ, ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರದ 40 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ.

ನಾವು ರಾಜಸ್ಥಾನದ ಬಗ್ಗೆ ಮಾತನಾಡುವುದಾದರೆ, ರಾಜಸ್ಥಾನದ ಒಬ್ಬ ನಾಯಕನ ಹೆಸರನ್ನು ಮಾತ್ರ ಈ ಪಟ್ಟಿಯಲ್ಲಿ ಸೇರಿಸಲಾಗಿದೆ ಮತ್ತು ಆ ನಾಯಕ ಸಚಿನ್ ಪೈಲಟ್. ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ.

ಬಿಜೆಪಿ, ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಸ್ಥಳೀಯ ರಾಜಕೀಯ ಪಕ್ಷಗಳು ತಮ್ಮ ತಯಾರಿಯಲ್ಲಿ ನಿರತವಾಗಿವೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ನ್ಯಾಷನಲ್ ಕಾನ್ಫರೆನ್ಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣಾ ಕಣಕ್ಕೆ ಇಳಿದಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ರಾಜಸ್ಥಾನದ ಏಕೈಕ ನಾಯಕ ಸಚಿನ್ ಪೈಲಟ್ ಹೆಸರು ಈ ಪಟ್ಟಿಯಲ್ಲಿ ಸೇರಿದೆ. ಈ ಪಟ್ಟಿಯಲ್ಲಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೆಸರು ಇಲ್ಲ. ಅಶೋಕ್ ಗೆಹ್ಲೋಟ್ ಕಳೆದ ಕೆಲವು ದಿನಗಳಿಂದ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದಾಗಿ ದೂರ ಇದ್ದರು. ಬಹುಶಃ ಈ ಕಾರಣಕ್ಕಾಗಿ ಅವರ ಹೆಸರನ್ನು ಈ ಪಟ್ಟಿಯಲ್ಲಿ ನೀಡಲಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:47 am, Sun, 1 September 24

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ