AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದಲ್ಲಿ ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆ: ಅಭಿಷೇಕ್ ಮನು ಸಿಂಘ್ವಿ ಕಾಂಗ್ರೆಸ್ ಅಭ್ಯರ್ಥಿ

ತೆಲಂಗಾಣದಿಂದ ರಾಜ್ಯಸಭಾ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಭಿಷೇಕ್ ಮನು ಸಿಂಘ್ವಿ ಅವರ ಉಮೇದುವಾರಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೆಲಂಗಾಣದಲ್ಲಿ ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆ: ಅಭಿಷೇಕ್ ಮನು ಸಿಂಘ್ವಿ ಕಾಂಗ್ರೆಸ್ ಅಭ್ಯರ್ಥಿ
ಅಭಿಷೇಕ್ ಮನು ಸಿಂಘ್ವಿ
ರಶ್ಮಿ ಕಲ್ಲಕಟ್ಟ
|

Updated on: Aug 14, 2024 | 7:04 PM

Share

ದೆಹಲಿ ಆಗಸ್ಟ್ 14: ತೆಲಂಗಾಣದಲ್ಲಿ ಮುಂಬರುವ ರಾಜ್ಯಸಭಾ ಉಪಚುನಾವಣೆಗೆ (Rajya Sabha bypoll) ಕಾಂಗ್ರೆಸ್ ಪಕ್ಷವು ಅಭಿಷೇಕ್ ಮನು ಸಿಂಘ್ವಿ (Abhishek Manu Singhvi) ಅವರನ್ನು ಅಭ್ಯರ್ಥಿಯನ್ನಾಗಿ ನಾಮನಿರ್ದೇಶನ ಮಾಡಿದೆ. ತೆಲಂಗಾಣದಿಂದ ರಾಜ್ಯಗಳ ಪರಿಷತ್ತಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಭಿಷೇಕ್ ಮನು ಸಿಂಘ್ವಿ ಅವರ ಉಮೇದುವಾರಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅನುಮೋದಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ, ಪಕ್ಷವು ಹಿಮಾಚಲ ಪ್ರದೇಶದಿಂದ ಸಿಂಘ್ವಿ ಅವರನ್ನು ಕಣಕ್ಕಿಳಿಸಿತು. ಆದರೆ ಕೆಲವು ಅತೃಪ್ತ ಕಾಂಗ್ರೆಸ್ ಶಾಸಕರ ಅಡ್ಡ ಮತದಾನದಿಂದ ಹಿರಿಯ ವಕೀಲರು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷ್ ಮಹಾಜನ್ ವಿರುದ್ಧ ಸೋತಿದ್ದರು. 68 ಸದಸ್ಯ ಬಲದ ಹಿಮಾಚಲ ವಿಧಾನಸಭೆಯಲ್ಲಿ ಕಾಂಗ್ರೆಸ್ 40 ಸದಸ್ಯರ ಬಲ ಮತ್ತು ಮೂವರು ಸ್ವತಂತ್ರರ ಬೆಂಬಲವನ್ನು ಹೊಂದಿತ್ತು. ಆದರೆ, ಆರು ಕಾಂಗ್ರೆಸ್ ಬಂಡಾಯ ಹಾಗೂ ಮೂವರು ಪಕ್ಷೇತರರು ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಿದ್ದರಿಂದ ಇಬ್ಬರೂ ಅಭ್ಯರ್ಥಿಗಳು ತಲಾ 34 ಮತಗಳನ್ನು ಪಡೆದರು. ಕೊನೆಗೆ ವಿಜೇತರನ್ನು ಡ್ರಾ ಮೂಲಕ ಘೋಷಿಸಲಾಯಿತು.

ಕೆ ಕೇಶವ ರಾವ್ ಅವರು ಮೇಲ್ಮನೆಗೆ ರಾಜೀನಾಮೆ ನೀಡಿದ್ದರಿಂದ ತೆಲಂಗಾಣದಲ್ಲಿ ರಾಜ್ಯಸಭಾ ಉಪಚುನಾವಣೆ ಅನಿವಾರ್ಯವಾಗಿದೆ. ರಾವ್ 2013 ರಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದು ತೆಲಂಗಾಣ ರಾಷ್ಟ್ರ ಸಮಿತಿ (ಈಗ ಭಾರತ್ ರಾಷ್ಟ್ರ ಸಮಿತಿ) ಸೇರಿದರು. ಆದಾಗ್ಯೂ, ಹಿರಿಯ ನಾಯಕ ಜುಲೈನಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ ಭರ್ಜರಿ ವಿಜಯದ ನಂತರ ಪಕ್ಷಕ್ಕೆ ಮರಳಿದರು ಮತ್ತು ರಾಜ್ಯಸಭೆಗೆ ರಾಜೀನಾಮೆ ನೀಡಿದರು.

ಭಾರತೀಯ ಚುನಾವಣಾ ಆಯೋಗ (ಇಸಿಐ) ಕಳೆದ ವಾರ ಒಂಬತ್ತು ರಾಜ್ಯಗಳ 12 ರಾಜ್ಯಸಭಾ ಸ್ಥಾನಗಳಿಗೆ ಉಪಚುನಾವಣೆ ಘೋಷಿಸಿತು. 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಸದಸ್ಯರು ಲೋಕಸಭೆಗೆ ಚುನಾಯಿತರಾದ ನಂತರ 12 ಸ್ಥಾನಗಳಲ್ಲಿ 10 ತೆರವಾದವು. ಇವರಲ್ಲಿ ಪಿಯೂಷ್ ಗೋಯಲ್, ಸರ್ಬಾನಂದ ಸೋನೋವಾಲ್, ಜ್ಯೋತಿರಾದಿತ್ಯ ಸಿಂಧಿಯಾ, ದೀಪೇಂದರ್ ಹೂಡಾ, ಬಿಪ್ಲಬ್ ದೇಬ್, ಕೆಸಿ ವೇಣುಗೋಪಾಲ್ ಮತ್ತು ಮಿಸಾ ಭಾರತಿ ಸೇರಿದ್ದಾರೆ.

ಇದನ್ನೂ ಓದಿ: ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ ಪ್ರಕರಣ ಬಗ್ಗೆ ಟಿಎಂಸಿ ಸಂಸದೆಯರು ಯಾಕೆ ಮಾತನಾಡುತ್ತಿಲ್ಲ?: ಬಿಜೆಪಿ

ಆಗಸ್ಟ್ 21 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ. ಸಿಂಘ್ವಿ ಈ ಬಾರಿಯ ಉಪಚುನಾವಣೆಯಲ್ಲಿ ಗೆದ್ದು ತೆಲಂಗಾಣದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಮೇಲ್ಮನೆ ಪ್ರವೇಶಿಸುವ ಸಾಧ್ಯತೆಯಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್