ಕಾಂಗ್ರೆಸ್ ಭ್ರಷ್ಟಾಚಾರ, ಜಾತೀಯತೆ, ಸ್ವಜನಪಕ್ಷಪಾತವನ್ನು ಪ್ರತಿನಿಧಿಸುತ್ತದೆ; ಪ್ರಧಾನಿ ಮೋದಿ ಟೀಕೆ
ಭ್ರಷ್ಟಾಚಾರ, ಜಾತಿವಾದ, ಕೋಮುವಾದ ಮತ್ತು ಸ್ವಜನಪಕ್ಷಪಾತದ ಪ್ರತಿನಿಧಿಯಾಗಿ ಕಾಂಗ್ರೆಸ್ ನಿಂತಿದೆ ಎಂದು ಇಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ಮತ ನೀಡಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ತರಲು ಜನರಿಗೆ ಮೋದಿ ಮನವಿ ಮಾಡಿದರು.
ನವದೆಹಲಿ: ಅಕ್ಟೋಬರ್ 5ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮೊದಲು ಹರಿಯಾಣದಲ್ಲಿ ಪ್ರಚಾರದ ಕೊನೆಯ ದಿನವಾದ ಇಂದು ಎಕ್ಸ್‌ನಲ್ಲಿ ಪಿಎಂ ನರೇಂದ್ರ ಮೋದಿ ಪೋಸ್ಟ್ವೊಂದನ್ನು ಮಾಡಿದ್ದಾರೆ. ಕಾಂಗ್ರೆಸ್ ವಿಭಜಕ ಮತ್ತು ಋಣಾತ್ಮಕ ರಾಜಕೀಯವನ್ನು ಮಾಡುತ್ತಿದೆ. ಇದನ್ನು ಹರಿಯಾಣದ ದೇಶಭಕ್ತರಾದ ಜನರು ಎಂದಿಗೂ ಸ್ವೀಕರಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
2004-14ರಲ್ಲಿ ಭೂಪಿಂದರ್ ಸಿಂಗ್ ಹೂಡಾ ಅವರೊಂದಿಗೆ ಪಕ್ಷ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರನ್ನು ಒಳಗೊಂಡ ವಿವಾದಾತ್ಮಕ ಭೂ ವ್ಯವಹಾರಗಳ ಬಗ್ಗೆ ಮಾತನಾಡಿರುವ ಮೋದಿ “ಕಾಂಗ್ರೆಸ್ ಎಂದರೆ ಫಿಕ್ಸರ್ ಮತ್ತು ಅಳಿಯನ ಸಿಂಡಿಕೇಟ್” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಹರ್ಯಾಣದಲ್ಲಿ ಕಾಂಗ್ರೆಸ್ ರೈತರ ಭೂಮಿಯನ್ನು ಕಿತ್ತುಕೊಂಡಿದೆ: ರಾಜನಾಥ್ ಸಿಂಗ್
ತಂದೆ-ಮಗ ರಾಜಕೀಯದ ಮುಖ್ಯ ಗುರಿ ಸ್ವಹಿತಾಸಕ್ತಿ ಮಾತ್ರ ಎಂದು ಅವರು ಭೂಪಿಂದರ್ ಹೂಡಾ ಮತ್ತು ಸಂಸದರಾದ ಅವರ ಪುತ್ರ ದೀಪೇಂದರ್ ಸಿಂಗ್ ಹೂಡಾ ಅವರನ್ನು ಸ್ಪಷ್ಟವಾಗಿ ಗುರಿಯಾಗಿಸಿದ್ದಾರೆ ಎಂದು ಮೋದಿ ಟೀಕಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಎಂದಿಗೂ ಸ್ಥಿರ ಸರ್ಕಾರವನ್ನು ನೀಡಲು ಸಾಧ್ಯವಿಲ್ಲ ಎಂಬುದು ಜನರಿಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ.
कांग्रेस के नेताओं ने आरक्षण खत्म करने का बयान देकर अपने इरादे जता दिए हैं। हरियाणा का पिछड़ा और दलित समुदाय जातिगत हिंसा रोकने में विफल रहने पर पहले से ही कांग्रेस से नाराज चल रहा है। इसलिए लोगों ने कांग्रेस को फिर कड़ी सजा देने का मन बना लिया है। हरियाणा के गली-गली से एक ही…
— Narendra Modi (@narendramodi) October 3, 2024
“ದೆಹಲಿ ಮತ್ತು ಹರಿಯಾಣದಲ್ಲಿ ಕುಳಿತಿರುವ ಎರಡು ಕುಟುಂಬಗಳ ಆಜ್ಞೆಯ ಮೇರೆಗೆ ಇಡೀ ರಾಜ್ಯವನ್ನು ಅವಮಾನಿಸುತ್ತಿರುವುದರಿಂದ ಹರಿಯಾಣದ ಜನರು ಕೂಡ ನೋವು ಅನುಭವಿಸುತ್ತಿದ್ದಾರೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಂತಹ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಜನರು ನೋಡುತ್ತಿದ್ದಾರೆ. ಕಾಂಗ್ರೆಸ್‌ನ ನೀತಿಗಳು ಜನರನ್ನು ನಾಶ ಮಾಡುತ್ತವೆ. ಅದಕ್ಕಾಗಿಯೇ ಅವರು ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಬಯಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಹರಿಯಾಣದಲ್ಲಿ ಬಿಜೆಪಿಗೆ ದೊಡ್ಡ ಶಾಕ್; ಅಶೋಕ್ ತನ್ವಾರ್ ಕಾಂಗ್ರೆಸ್‌ಗೆ ಮರು ಸೇರ್ಪಡೆ
ಹರಿಯಾಣದಲ್ಲಿ ಬಿಜೆಪಿ ತನ್ನ 10 ವರ್ಷಗಳ ಸರ್ಕಾರದಲ್ಲಿ ಜನರ ಜೀವನವನ್ನು ಸುಧಾರಿಸಲು ಅವಿರತವಾಗಿ ಕೆಲಸ ಮಾಡಿದೆ. ಸಮಾಜದ ಪ್ರತಿಯೊಂದು ವರ್ಗದ ಕಲ್ಯಾಣಕ್ಕೆ ಆದ್ಯತೆ ನೀಡಿದೆ. ಅದು ರೈತರು, ಯುವಕರು, ಮಹಿಳೆಯರು, ಹಳ್ಳಿಗಳು ಅಥವಾ ನಗರಗಳಿಗೆ ಆದ್ಯತೆ ನೀಡಿದೆ ಎಂದು ಅವರು ಹೇಳಿದ್ದಾರೆ.
अब से कुछ देर में हरियाणा विधानसभा चुनाव का प्रचार अभियान समाप्त हो जाएगा। बीते कुछ दिनों में मैंने पूरे राज्य की यात्रा की है। मैंने लोगों का जो उत्साह देखा है, उसे देखकर मुझे ये पक्का विश्वास है कि हरियाणा के लोग भाजपा को फिर अपना आशीर्वाद देने वाले हैं। हरियाणा के देशभक्त लोग,…
— Narendra Modi (@narendramodi) October 3, 2024
ಇಡೀ ವಿಶ್ವವೇ ದೇಶವನ್ನು ಭರವಸೆ ಮತ್ತು ನಿರೀಕ್ಷೆಯಿಂದ ನೋಡುತ್ತಿರುವ ಈ ಸಮಯದಲ್ಲಿ ಭಾರತವನ್ನು ಬಲಪಡಿಸುವ ಸರ್ಕಾರವನ್ನು ಆಯ್ಕೆ ಮಾಡುವುದು ಬಹಳ ಮುಖ್ಯ ಎಂದು ಪ್ರಧಾನಿ ಬಿಜೆಪಿಗೆ ಮತ ಹಾಕುವಂತೆ ಜನರನ್ನು ಉತ್ತೇಜಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ