ಗಲ್ಫ್ ದೇಶಗಳೊಂದಿಗಿನ ಭಾರತದ ಸಂಬಂಧ ಹಾಳು ಮಾಡುವುದೇ ಕಾಂಗ್ರೆಸ್ ಉದ್ದೇಶ; ಪ್ರಧಾನಿ ಮೋದಿ ವಾಗ್ದಾಳಿ

ಕೇರಳದ ಪತನಾಂತಿಟ್ಟದ ತಿರುವಲ್ಲಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ವಿಧಾನಸಭಾ ಚುನಾವಣೆಗೆ ಮುನ್ನ ಮೋದಿ ಕೇರಳದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ಹಾಗೂ ಎಡಪಕ್ಷಗಳ ವಿರುದ್ಧ ಅವರು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನೀಡುತ್ತಿರುವ ಹೇಳಿಕೆಗಳು ಭಾರತೀಯರ ಜೀವಗಳನ್ನು ಅದರಲ್ಲೂ ವಿಶೇಷವಾಗಿ ಈ ಪ್ರದೇಶದಲ್ಲಿ ಕೆಲಸ ಮಾಡುತ್ತಿರುವ ಕೇರಳದವರ ಜೀವಗಳನ್ನು ಅಪಾಯಕ್ಕೆ ಸಿಲುಕಿಸುತ್ತಿದೆ ಎಂದು ಮೋದಿ ಆರೋಪಿಸಿದ್ದಾರೆ.

ಗಲ್ಫ್ ದೇಶಗಳೊಂದಿಗಿನ ಭಾರತದ ಸಂಬಂಧ ಹಾಳು ಮಾಡುವುದೇ ಕಾಂಗ್ರೆಸ್ ಉದ್ದೇಶ; ಪ್ರಧಾನಿ ಮೋದಿ ವಾಗ್ದಾಳಿ
Pm Modi In Kerala
Image Credit source: PTI

Updated on: Apr 04, 2026 | 8:25 PM

ನವದೆಹಲಿ, ಏಪ್ರಿಲ್ 4: ಕೇರಳದಲ್ಲಿ ವಿಧಾನಸಭಾ ಚುನಾವಣೆ (Keralam Assembly Elections)  ನಡೆಯಲಿರುವುದರಿಂದ ಪ್ರಧಾನಿ ನರೇಂದ್ರ ಮೋದಿ (PM Modi) ತಿರುವಲ್ಲಾದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. “ಪಶ್ಚಿಮ ಏಷ್ಯಾದ ದೇಶಗಳು ಭಾರತವನ್ನು ತಮ್ಮ ಶತ್ರುವೆಂದು ಪರಿಗಣಿಸಬೇಕೆಂದು ಕಾಂಗ್ರೆಸ್ ಬಯಸುತ್ತದೆ. ಅದೇ ಕಾರಣದಿಂದ ಕಾಂಗ್ರೆಸ್ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದೆ. ನಾವು ಇಲ್ಲಿ ಅಂತಹ ಹೇಳಿಕೆ ನೀಡಿದರೆ ಭಾರತೀಯರನ್ನು ಗಲ್ಫ್ ದೇಶಗಳಿಂದ ಹೊರಹಾಕಲಾಗುತ್ತದೆ. ಅದೇ ಕಾರಣದಿಂದ ಕಾಂಗ್ರೆಸ್ ಪಕ್ಷವು ಗಲ್ಫ್ ರಾಷ್ಟ್ರಗಳನ್ನು ಕೆರಳಿಸುವ ಹೇಳಿಕೆಗಳನ್ನು ನೀಡುತ್ತಿದೆ” ಎಂದು ಮೋದಿ ಟೀಕಿಸಿದ್ದಾರೆ.

“ರಾಜಕೀಯ ಒಂದೇ ಮುಖ್ಯವಲ್ಲ. ಚುನಾವಣೆಗಳು ಬರುತ್ತವೆ ಹೋಗುತ್ತವೆ, ನನಗೆ ಕೇರಳದ ಜನರ ಸುರಕ್ಷತೆಯೇ ಪ್ರಮುಖ ಆದ್ಯತೆ. ನಾನು ಅದಕ್ಕೆ ಬದ್ಧನಾಗಿದ್ದೇನೆ” ಎಂದು ಪ್ರಧಾನಿ ಮೋದಿ ಹೇಳಿದರು. ಕೇರಳದಲ್ಲಿ ಅಧಿಕಾರದಲ್ಲಿರುವ ಸರ್ಕಾರವಾದ ಎಲ್‌ಡಿಎಫ್ ಮೇಲೆಯೂ ಅವರು ತೀವ್ರ ವಾಗ್ದಾಳಿ ನಡೆಸಿದರು. ಮುಂಬರುವ ಮೇ 4ರಂದು ನಡೆಯುವ ಚುನಾವಣೆ ದಶಕಗಳ ದುರಾಡಳಿತದ ಅಂತ್ಯವನ್ನು ಸೂಚಿಸಲಿದೆ. ಈ ಬಾರಿ ಕೇರಳದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಲಿದೆ ಎಂದು ಅವರು ಹೇಳಿದರು.

 

ಇದನ್ನೂ ಓದಿ: Video: ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ, ಎಲ್ಡಿಎಫ್​, ಯುಡಿಎಫ್ ಹಗರಣಗಳನ್ನು ಬಯಲು ಮಾಡುತ್ತೆ: ಪ್ರಧಾನಿ ಮೋದಿ

ಎಲ್‌ಡಿಎಫ್ ಸರ್ಕಾರದ ನಿರ್ಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂಬುದು ಖಚಿತ. ಕೇರಳದಲ್ಲಿ ಮೊದಲ ಬಾರಿಗೆ ಬಿಜೆಪಿ-ಎನ್‌ಡಿಎ ಸರ್ಕಾರ ರಚನೆಯಾಗಲಿದೆ. ಕೇರಳದ ಎಲ್‌ಡಿಎಫ್ ಮತ್ತು ಯುಡಿಎಫ್ ನಡುವೆ ಸಿಲುಕಿಕೊಂಡಿದೆ. ಈ ಬಾರಿ ಕೇರಳದ ಜನರು ಎರಡೂ ಪಕ್ಷಗಳನ್ನು ಅಧಿಕಾರದಿಂದ ದೂರ ಇಡುತ್ತಾರೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.


ಎಲ್‌ಡಿಎಫ್-ಯುಡಿಎಫ್ ಸರ್ಕಾರಗಳು ಈ ಪ್ರದೇಶದ ಬಗ್ಗೆ ಎಂದಿಗೂ ಕಾಳಜಿ ವಹಿಸಿಲ್ಲ. ಸಂಪರ್ಕ ರಸ್ತೆಗಳು ಭಯಾನಕ ಸ್ಥಿತಿಯಲ್ಲಿವೆ. ವರ್ಷಗಳಲ್ಲಿ ಒಂದೇ ಒಂದು ಪ್ರಮುಖ ಸೇತುವೆಯನ್ನು ನಿರ್ಮಿಸಿಲ್ಲ. ವೈದ್ಯಕೀಯ ಕಾಲೇಜು ಕೆಟ್ಟ ಸ್ಥಿತಿಯಲ್ಲಿದೆ. ಮೂಲಭೂತ ಮೂಲಸೌಕರ್ಯಗಳ ಕೊರತೆಯಿರುವ ಈ ಪ್ರದೇಶದ ಜೀವನ ಮಟ್ಟವನ್ನು ಯಾರಾದರೂ ಊಹಿಸಬಹುದು. ಈ ಎಲ್ಲಾ ವಿಷಯಗಳ ಕುರಿತು ಕೆಲಸ ಮಾಡಲಾಗುವುದು ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us