Constitution Day 2021: ಸಂಸತ್​ನಲ್ಲಿ ಸಂವಿಧಾನ ದಿನಾಚರಣೆ; ಪ್ರಧಾನಿ ಮೋದಿ ಭಾಷಣ ಬಹಿಷ್ಕಾರಕ್ಕೆ ವಿಪಕ್ಷಗಳ ನಿರ್ಧಾರ

| Updated By: ಆಯೇಷಾ ಬಾನು

Updated on: Nov 26, 2021 | 11:36 AM

Narendra Modi Speech: ಕಾಂಗ್ರೆಸ್ ಮತ್ತು ಟಿಎಂಸಿ ಸೇರಿದಂತೆ 13 ವಿರೋಧ ಪಕ್ಷಗಳು ಇಂದಿನ ಪ್ರಧಾನಿ ಮೋದಿ ಭಾಷಣ ಹಾಗೂ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಭಾಷಣಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾರೆ.

Constitution Day 2021: ಸಂಸತ್​ನಲ್ಲಿ ಸಂವಿಧಾನ ದಿನಾಚರಣೆ; ಪ್ರಧಾನಿ ಮೋದಿ ಭಾಷಣ ಬಹಿಷ್ಕಾರಕ್ಕೆ ವಿಪಕ್ಷಗಳ ನಿರ್ಧಾರ
ಸೋನಿಯಾ ಗಾಂಧಿ
Follow us on

ನವದೆಹಲಿ: ಸಂಸತ್ ಭವನದಲ್ಲಿ ಇಂದು ಸಂವಿಧಾನ ದಿನಾಚರಣೆ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ ಕೋವಿಂದ್ ಭಾಷಣ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯ ಭಾಷಣವನ್ನು ಬಹಿಷ್ಕರಿಸಲು 14 ವಿಪಕ್ಷಗಳು ನಿರ್ಧಾರ ಮಾಡಿವೆ. ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಪ್ರಧಾನಿ ಭಾಷಣ ಮಾಡಲಿದ್ದು, ಕಾಂಗ್ರೆಸ್, ಟಿಎಂಸಿ, ಶಿವಸೇನೆ, ಎನ್​ಸಿಪಿ, ಎಸ್​ಪಿ, ಡಿಎಂಕೆ ಪಕ್ಷಗಳು ಈ ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ಸಂಸತ್ ಭವನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಲಿದ್ದು, ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಪ್ರಧಾನಿ ಭಾಷಣ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಟಿಎಂಸಿ ಸೇರಿದಂತೆ 13 ವಿರೋಧ ಪಕ್ಷಗಳು ಇಂದಿನ ಪ್ರಧಾನಿ ಮೋದಿ ಭಾಷಣ ಹಾಗೂ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಭಾಷಣಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾರೆ.

ನಿನ್ನೆ ಸಂಜೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಿ, ನಿರ್ಧರಿಸಲಾಗಿದೆ. ಸೋಮವಾರದಿಂದ ಚಳಿಗಾಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಎನ್​ಡಿಎ ಸರ್ಕಾರದ ವಿರುದ್ಧ ಯಾವ ರೀತಿಯ ಆಕ್ರಮಣ ನಡೆಸಬೇಕೆಂಬ ಕುರಿತು ಚರ್ಚಿಸಿವೆ. ಮುಂಬರುವ ಅಧಿವೇಶನದಲ್ಲಿ ಸರ್ಕಾರಕ್ಕೆ ಯಾವ ರೀತಿ ವಿರೋಧವೊಡ್ಡಬೇಕೆಂಬ ಬಗ್ಗೆ ಒಂದೇ ಮನಸ್ಥಿತಿಯ ಎಡ ಪಕ್ಷಗಳ ಜೊತೆ ಕಾಂಗ್ರೆಸ್ ಚರ್ಚೆ ನಡೆಸಿದೆ. ಇಂದಿನ ಕಾರ್ಯಕ್ರಮವನ್ನು ಬಹಿಷ್ಕರಿಸಲು ಆರ್​ಜೆಡಿ, ಟಿಎಂಸಿ ಸೇರಿದಂತೆ ಎಡಪಕ್ಷಗಳು ಕಾಂಗ್ರೆಸ್​ಗೆ ಬೆಂಬಲ ಸೂಚಿಸಿವೆ.

71ನೇ ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂವಿಧಾನದ ಪೀಠಿಕೆ ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಹಾಗೇ, ಪ್ರಧಾನಿ ನರೇಂದ್ರ ಮೋದಿ ಸಂಸತ್​ನಲ್ಲಿ ವಿಶೇಷ ಸಭೆಯನ್ನು ಉದ್ದೇಶಿಸಿ ಮಾತನಾಡಿದರೆ, ರಾಷ್ಟ್ರಪತಿ ಕೋವಿಂದ್ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾಷ್ಟ್ರಪತಿ ಕೋವಿಂದ್ ಅವರು ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಸಂವಿಧಾನ ಸಭೆಯ ಚರ್ಚೆಯ ಡಿಜಿಟಲ್ ಆವೃತ್ತಿ ಬಿಡುಗಡೆ ಮಾಡಲಿದ್ದಾರೆ. ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಮತ್ತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಉಪಸ್ಥಿತರಿರಲಿದ್ದಾರೆ.

ಪ್ರಧಾನಿ ಮೋದಿ ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ಎರಡು ದಿನಗಳ ಸಂವಿಧಾನ ದಿನಾಚರಣೆ ಉದ್ಘಾಟಿಸಲಿದ್ದಾರೆ. 1949ರ ನವೆಂಬರ್‌ 26 ರಂದು ಡಾ.ಬಿ.ಆರ್‌.ಅಂಬೇಡ್ಕರ್‌ ಬರೆದಿದ್ದ ಸಂವಿಧಾನವನ್ನು ಅಂಗೀಕರಿಸಲಾಯಿತು. ಇದರ ಅಂಗವಾಗಿಯೇ ಇಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ. 1949ರ ನವೆಂಬರ್‌ 26ರಂದು ಸಂವಿಧಾನ ಅಂಗೀಕಾರವಾಗಿದ್ದರೂ ಇದು ದೇಶದಲ್ಲಿ ಜಾರಿ ತಂದಿದ್ದ ಮಾತ್ರ 1950 ಜನವರಿ 26 ರಂದು. ಈ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸುತ್ತೇವೆ.

ಇದನ್ನೂ ಓದಿ: Constitution Day 2021: ನ.26 ಸಂವಿಧಾನ ದಿನ; ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್​

ಸಂವಿಧಾನವೇ ನಮ್ಮ ರಾಷ್ಟ್ರಧರ್ಮ; ನಾಡಿನ ಜನತೆಗೆ ಸಂವಿಧಾನ ದಿನದ ಶುಭಕಾಮನೆ ತಿಳಿಸಿದ ಸಿಎಂ ಬೊಮ್ಮಾಯಿ

Published On - 10:45 am, Fri, 26 November 21