ಡಿ.8ರ ಭಾರತ್ ಬಂದ್​ಗೆ ಕಾಂಗ್ರೆಸ್ ಸಂಪೂರ್ಣ​ ಬೆಂಬಲ: ಪವನ್ ಖೇರಾ

ರೈತರು ರಾಜಧಾನಿಯ ಹೊರಗೆ ಮಧ್ಯರಾತ್ರಿಯ ಚಳಿಯಲ್ಲಿ ಕುಳಿತು ತಮ್ಮ ಸಮಸ್ಯೆಯನ್ನು ಸರ್ಕಾರ ಆಲಿಸಲಿ ಎಂದು ಕಾಯುತ್ತಿರುವ ಭೀಕರ ದೃಶ್ಯವನ್ನು ಇಡೀ ಜಗತ್ತು ನೋಡುತ್ತಿದೆ ಎಂದು ಎಚ್ಚರಿಸಿದರು.

ಡಿ.8ರ ಭಾರತ್ ಬಂದ್​ಗೆ ಕಾಂಗ್ರೆಸ್ ಸಂಪೂರ್ಣ​ ಬೆಂಬಲ: ಪವನ್ ಖೇರಾ
ಕಾಂಗ್ರೆಸ್ ವಕ್ತಾರ ಪವನ್ ಖೇರಾ
Follow us
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 06, 2020 | 5:15 PM

ದೆಹಲಿ: ಹೊಸ ಕೃಷಿ ಮಾರುಕಟ್ಟೆ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಡಿಸೆಂಬರ್ 8ರಂದು ಕರೆ ನೀಡಿರುವ ‘ಭಾರತ್ ಬಂದ್’ಗೆ ಕಾಂಗ್ರೆಸ್ ಭಾನುವಾರ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದೆ. ಎಲ್ಲಾ ಜಿಲ್ಲೆ ಮತ್ತು ರಾಜ್ಯ ಕೇಂದ್ರ ಕಚೇರಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ. ನವೆಂಬರ್ 26ರಿಂದ ದೆಹಲಿಯ ವಿವಿಧ ಗಡಿಗಳಲ್ಲಿ ಇರುವ ರೈತರ ಪ್ರತಿನಿಧಿಗಳು, ಡಿಸೆಂಬರ್ 8ರಂದು ಭಾರತ್ ಬಂದ್​ಗೆ ಕರೆ ನೀಡಿರುವುದಾಗಿ ಹೇಳಿದ್ದರು.

ಡಿ.8ರ ಭಾರತ್ ಬಂದ್​ಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಘೋಷಿಸಲು ಬಯಸುತ್ತೇನೆ. ಟ್ರಾಕ್ಟರ್ ಱಲಿಗಳು, ಸಹಿ ಅಭಿಯಾನ ಹಾಗೂ ಕಿಸಾನ್ ಱಲಿಗಳ ಮೂಲಕ ಪಕ್ಷದ ನಾಯಕ ರಾಹುಲ್ ಗಾಂಧಿ ರೈತರಿಗೆ ನೆರವಾಗುತ್ತಿದ್ದಾರೆ. ನಮ್ಮ ಜಿಲ್ಲಾ ಹಾಗೂ ಪ್ರಧಾನ ಕಚೇರಿಗಳ ಪ್ರತಿಭಟನಾ ಸಭೆ ನಡೆಯಲಿವೆ ಎಂದು ಎಐಸಿಸಿ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪವನ್ ಖೇರಾ ತಿಳಿಸಿದರು.

ಇಡೀ ಜಗತ್ತು ರೈತರ ದುಃಸ್ಥಿತಿಯನ್ನು ಗಮನಿಸುತ್ತಿದೆ. ರೈತರು ರಾಜಧಾನಿಯ ಹೊರಗೆ ಮಧ್ಯರಾತ್ರಿಯ ಚಳಿಯಲ್ಲಿ ಕುಳಿತು ತಮ್ಮ ಸಮಸ್ಯೆಯನ್ನು ಸರ್ಕಾರ ಆಲಿಸಲಿ ಎಂದು ಕಾಯುತ್ತಿರುವ ಭೀಕರ ದೃಶ್ಯವನ್ನು ಇಡೀ ಜಗತ್ತು ನೋಡುತ್ತಿದೆ ಎಂದು ಎಚ್ಚರಿಸಿದರು.

ಕೋವಿಡ್ ಸಾಂಕ್ರಾಮಿಕದ ಈ ಸಮಯದಲ್ಲಿ, ಜೂನ್​ನಲ್ಲಿ ಸರ್ಕಾರವು ರಹಸ್ಯವಾಗಿ ಸುಗ್ರಿವಾಜ್ಞೆಯನ್ನು ತಂದಿದೆ. ಏನು ಅವಸರವಿತ್ತು? ಸಾಂಕ್ರಾಮಿಕ ರೋಗದಿಂದಾಗಿ ದೇಶದ ಆರ್ಥಿಕ, ಸಾಮಾಜಿಕ ಮತ್ತು ಆರೋಗ್ಯ ವ್ಯವಸ್ಥೆ ಕುಸಿದಿರುವಾಗ ಕಾರ್ಪೊರೇಟ್ ಸ್ನೇಹಿತರಿಗೆ ಸಹಾಯ ಮಾಡಲು ಮುತುವರ್ಜಿವಹಿಸಿತ್ತು ಎಂದು ಆರೋಪಿಸಿದರು.

ವಿರೋಧ ಪಕ್ಷವನ್ನು ಸಂಸತ್ತಿನಿಂದ ಅಮಾನತಿನಲ್ಲಿಟ್ಟಿದ್ದೀರಿ. ಸಂಸತ್ತಿನ ಶಿಷ್ಟಾಚಾರಗಳನ್ನು ಪಾಲಿಸುತ್ತಿಲ್ಲ. ಮಸೂದೆಗಳನ್ನು ಅಂಗೀಕರಿಸುವುದರಲ್ಲಿ ಅವರಸ ತೋರುತ್ತಿದ್ದೀರಿ. ಯಾಕಿಷ್ಟು ಅವಸರ? ರೈತರ ಹಿತಾಸಕ್ತಿಯ ಬಗ್ಗೆ ಸರ್ಕಾರ ಎಚ್ಚರವಹಿಸಿದ್ದರೆ ರೈತರ ಸಲಹೆಗಳನ್ನು ಪಡೆಯುತ್ತಿದ್ದೀರಿ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಡಿಸೆಂಬರ್​ 8: ಭಾರತ್ ಬಂದ್ ದಿನ ಕರ್ನಾಟಕ ಕೂಡ ಬಂದ್.. ಬಂದ್..​ ಬಂದ್​..

ಇನ್ನಷ್ಟು…

ದೆಹಲಿ ಚಲೋ ಹಿನ್ನೆಲೆ.. ಚಳಿಗೆ ದೆಹಲಿ ಗಢಗಢ, ಆದ್ರೆ ಅವಡುಗಚ್ಚಿ ಅಚಲವಾಗಿ ಕುಳಿತ ಪಂಜಾಬ್ ರೈತರು! ದೆಹಲಿ ಚಲೋ ಆರ್ಥಿಕತೆಗಷ್ಟೇ ಅಲ್ಲ.. ಮುಂದೆ ದೇಶದ ಭದ್ರತೆಗೇ ಧಕ್ಕೆ ತರಲಿದೆ: ಅಮರೀಂದರ್ ಎಚ್ಚರಿಕೆ ನಾನು ದೆಹಲಿಗೂ ಹೋಗಬಲ್ಲೆ: ಕಂಗನಾ ಲೇವಡಿಗೆ 73ರ ಹರೆಯದ ಹೋರಾಟಗಾರ್ತಿಯ ತಿರುಗೇಟು ದೆಹಲಿಯಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿ: ಕುಮಾರಸ್ವಾಮಿ ಸರಣಿ ಟ್ವೀಟ್

Published On - 5:14 pm, Sun, 6 December 20

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ