ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿ ಸ್ಪರ್ಧೆ; ಆಪ್ ಜೊತೆ ಮೈತ್ರಿ ಇಲ್ಲ ಎಂದು ಘೋಷಣೆ

ದೆಹಲಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಚುನಾವಣೆಯ ನಂತರ ಕಾಂಗ್ರೆಸ್ ಶಾಸಕಾಂಗ ಪಕ್ಷವು ನಿರ್ಧರಿಸುತ್ತದೆ ಎಂದು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದ್ರ ಯಾದವ್ ಸ್ಪಷ್ಟಪಡಿಸಿದ್ದಾರೆ. ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಫೆಬ್ರವರಿ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿ ಸ್ಪರ್ಧೆ; ಆಪ್ ಜೊತೆ ಮೈತ್ರಿ ಇಲ್ಲ ಎಂದು ಘೋಷಣೆ
ಕಾಂಗ್ರೆಸ್
Follow us
ಸುಷ್ಮಾ ಚಕ್ರೆ
|

Updated on: Nov 29, 2024 | 7:35 PM

ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಕಾಂಗ್ರೆಸ್ ಪಕ್ಷವು ಇಂದು ಪ್ರಕಟಿಸಿದೆ. ಆಮ್ ಆದ್ಮಿ ಪಾರ್ಟಿ (ಎಎಪಿ)ಯೊಂದಿಗೆ ಯಾವುದೇ ಮೈತ್ರಿಯನ್ನು ಮಾಡಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಘೋಷಿಸಿದೆ. ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 70 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷವು ಸ್ವಂತವಾಗಿ ಸ್ಪರ್ಧಿಸಲಿದೆ ಎಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಹೇಳಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿಯನ್ನು ಚುನಾವಣೆಯ ನಂತರ ಕಾಂಗ್ರೆಸ್ ಶಾಸಕಾಂಗ ಪಕ್ಷವು ನಿರ್ಧರಿಸುತ್ತದೆ ಎಂದು ದೇವೇಂದ್ರ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ವಾಸವಾಗಿದ್ದ ಸರ್ಕಾರಿ ಬಂಗಲೆಯ ಬಾತ್​ರೂಂ ನವೀಕರಣಕ್ಕೆ 15 ಕೋಟಿ ದುಂದುವೆಚ್ಚ!

ಈ ತಿಂಗಳ ಆರಂಭದಲ್ಲಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯನ್ನು ಮಹಾಭಾರತದಂತೆಯೇ ‘ಧರ್ಮಯುದ್ಧ’ಕ್ಕೆ ಹೋಲಿಸಿದ್ದರು. “ದೆಹಲಿ ವಿಧಾನಸಭಾ ಚುನಾವಣೆಯು ‘ಧರ್ಮಯುದ್ಧ’ದಂತಿದೆ. ಕೌರವರಂತೆ ಅವರಲ್ಲಿ ಅಪಾರ ಹಣ ಮತ್ತು ಬಲವಿದೆ. ಆದರೆ, ಪಾಂಡವರಂತೆ ದೇವರು ಮತ್ತು ಜನರು ನಮ್ಮೊಂದಿಗಿದ್ದಾರೆ” ಎಂದು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಸಂಪುಟ ಪುನಾರಚನೆ ಬಗ್ಗೆ ಗೊತ್ತಿಲ್ಲ, ಇವತ್ತು ಮುಖ್ಯಮಂತ್ರಿ ದೆಹಲಿಗೆ ಹೋಗುತ್ತಾರೆ: ಪರಮೇಶ್ವರ್

ಎಲ್ಲಾ 70 ಕ್ಷೇತ್ರಗಳಿಗೆ ದೆಹಲಿಯ ವಿಧಾನಸಭಾ ಚುನಾವಣೆಗಳು 2025ರ ಫೆಬ್ರವರಿಯಲ್ಲಿ ಅಥವಾ ಅದಕ್ಕೂ ಮೊದಲು ನಡೆಯಲಿವೆ. ಹಿಂದಿನ ಅಸೆಂಬ್ಲಿ ಚುನಾವಣೆಗಳು 2020ರ ಫೆಬ್ರವರಿಯಲ್ಲಿ ನಡೆದವು. ಚುನಾವಣೆಯ ನಂತರ, ಆಮ್ ಆದ್ಮಿ ಪಕ್ಷವು ರಾಜ್ಯ ಸರ್ಕಾರವನ್ನು ರಚಿಸಿತು. ಅರವಿಂದ್ ಕೇಜ್ರಿವಾಲ್ ಮೂರನೇ ಅವಧಿಗೆ ಮುಖ್ಯಮಂತ್ರಿಯಾದರು. ಈಗ ಅತಿಶಿ ಮುಖ್ಯಮಂತ್ರಿಯಾಗಿದ್ದಾರೆ. 7ನೇ ದೆಹಲಿ ವಿಧಾನಸಭೆಯ ಅಧಿಕಾರಾವಧಿಯು 2025ರ ಫೆಬ್ರವರಿ 15ರಂದು ಕೊನೆಗೊಳ್ಳಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ