ರಾಜೀವ್ ಗಾಂಧಿ ಹಂತಕರ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಕಾಂಗ್ರೆಸ್​ ನಿರ್ಧಾರ

ನವೆಂಬರ್ 11ರಂದು ಸುಪ್ರೀಂ ಕೋರ್ಟ್​ ರಾಜೀವ್ ಗಾಂಧಿ ಕೊಲೆ ಪ್ರಕರಣದಲ್ಲಿ 3 ದಶಕಗಳಿಗೂ ಹೆಚ್ಚು ಸಮಯ ಜೀವಾವಧಿ ಶಿಕ್ಷೆ ಅನುಭವಿಸಿದ 6 ಅಪರಾಧಿಗಳನ್ನು ತಕ್ಷಣ ಬಿಡುಗಡೆ ಮಾಡಲು ಆದೇಶಿಸಿತ್ತು.

ರಾಜೀವ್ ಗಾಂಧಿ ಹಂತಕರ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಕಾಂಗ್ರೆಸ್​ ನಿರ್ಧಾರ
ರಾಜೀವ್ ಗಾಂಧಿ ಹಂತಕರುImage Credit source: Hindustan Times
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Nov 21, 2022 | 4:06 PM

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಹತ್ಯೆ ಪ್ರಕರಣದ 6 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಸುಪ್ರೀಂ ಕೋರ್ಟ್​ನ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ (Congress) ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಿದೆ. ಕೆಲವು ದಿನಗಳ ಹಿಂದೆ ಕೇಂದ್ರ ಸರ್ಕಾರ ಕೂಡ ರಾಜೀವ್ ಗಾಂಧಿ ಹತ್ಯೆ ಪ್ರಕರಣದ 6 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಆದೇಶವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್​ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು.

ನವೆಂಬರ್ 11ರಂದು ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿಗಳಾದ ಬಿಆರ್​ ಗವಾಯಿ, ಬಿವಿ ನಾಗರತ್ನ ಅವರ ನ್ಯಾಯಪೀಠ ರಾಜೀವ್ ಗಾಂಧಿ ಕೊಲೆ ಪ್ರಕರಣದಲ್ಲಿ 3 ದಶಕಗಳಿಗೂ ಹೆಚ್ಚು ಸಮಯ ಜೀವಾವಧಿ ಶಿಕ್ಷೆ ಅನುಭವಿಸಿದ 6 ಅಪರಾಧಿಗಳನ್ನು ತಕ್ಷಣ ಬಿಡುಗಡೆ ಮಾಡಲು ಆದೇಶಿಸಿತ್ತು. ಈ 6 ಅಪರಾಧಿಗಳ ಪೈಕಿ ನಾಲ್ವರು ಶ್ರೀಲಂಕಾದವರಾಗಿದ್ದಾರೆ.

“ಆದೇಶದಲ್ಲಿ ನಿಗದಿಪಡಿಸಿದ ಆಧಾರದ ಮೇಲೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೊಸ ಮರುಪರಿಶೀಲನಾ ಅರ್ಜಿಯನ್ನು ಮುಂದಿನ ಕೆಲವು ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಸಲ್ಲಿಸಲಾಗುವುದು” ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Breaking News: ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಆದೇಶ ನೀಡಿದ ಸುಪ್ರೀಂ

ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರೆಲ್ಲರೂ ಶಿಕ್ಷೆಯನ್ನು ಅನುಭವಿಸಿದ್ದಾರೆ ಎಂದು ಪರಿಗಣಿಸಿದ ನಂತರ 6 ಅಪರಾಧಿಗಳನ್ನು ಅವಧಿಗೆ ಮುನ್ನ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಮೇ 21, 1991ರ ರಾತ್ರಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಧನು ಎಂಬ ಮಹಿಳಾ ಆತ್ಮಾಹುತಿ ಬಾಂಬರ್‌ನಿಂದ ಹತ್ಯೆಗೀಡಾಗಿದ್ದರು.

2018ರ ಸೆಪ್ಟೆಂಬರ್ 9ರಂದು ನಡೆದ ಸಂಪುಟ ಸಭೆಯಲ್ಲಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ 7 ಅಪರಾಧಿಗಳ ಕ್ಷಮಾದಾನ ಅರ್ಜಿಗಳನ್ನು ಪರಿಗಣಿಸಲಾಗಿತ್ತು. ಸಂವಿಧಾನದ ಆರ್ಟಿಕಲ್ 161ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಅನ್ವಯಿಸಿ ಅವರ ಜೀವಾವಧಿ ಶಿಕ್ಷೆಯನ್ನು ಹಿಂತೆಗೆದುಕೊಳ್ಳಲು ರಾಜ್ಯಪಾಲರಿಗೆ ಶಿಫಾರಸು ಮಾಡಲು ನಿರ್ಧರಿಸಲಾಗಿತ್ತು. 1991ರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಅವರಲ್ಲದೆ, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ರವಿಚಂದ್ರನ್ ಅವರು ಜೈಲು ಪಾಲಾಗಿದ್ದರು.

ಇದನ್ನೂ ಓದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳ ಬಿಡುಗಡೆ ಆದೇಶದ ಮರುಪರಿಶೀಲನೆ ಕೋರಿ ಸುಪ್ರೀಂ ಮೊರೆ ಹೋದ ಕೇಂದ್ರ

1991ರ ಮೇ 21ರ ರಾತ್ರಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಧನು ಎಂಬ ಮಹಿಳಾ ಆತ್ಮಾಹುತಿ ಬಾಂಬರ್‌ ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ಹತ್ಯೆ ಮಾಡಿದ್ದರು. ಇದೀಗ ಮಾಜಿ ಪ್ರಧಾನಿಯನ್ನು ಹತ್ಯೆ ಮಾಡಿದ ಅಪರಾಧಿಗಳನ್ನು ಬಿಡುಗಡೆಗೊಳಿಸುವಂತೆ ಸುಪ್ರೀಂ ಆದೇಶವನ್ನು ನೀಡಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್

Published On - 4:06 pm, Mon, 21 November 22

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!