ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬದಲಾವಣೆಗೆ ಮುಹೂರ್ತ ಫಿಕ್ಸ್? ಯಾರಾಗ್ತಾರೆ ನೂತನ ಅಧ್ಯಕ್ಷ

ದೆಹಲಿ: ರಾಷ್ಟ್ರೀಯ ಕಾಂಗ್ರೆಸ್​ನಲ್ಲಿ ಅಧ್ಯಕ್ಷರ ಬದಲಾವಣೆ ಕೂಗು ಜೋರಾಗಿ ಸದ್ದು ಮಾಡ್ತಿದೆ. ಭವಿಷ್ಯದ ದೃಷ್ಟಿಯಿಂದ ನಾಯಕತ್ವ ಬದಲಾಗಲೇ ಬೇಕು ಅಂತಾ ಹಿರಿಯ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆ ಅಧ್ಯಕ್ಷ ಬದಲಾವಣೆ ಸಂಬಂಧ ಇಂದು ಮಹತ್ವದ ಸಭೆ ನಡೆಯಲಿದ್ದು ರಾಷ್ಟ್ರೀಯ ಕಾಂಗ್ರೆಸ್ ನೂತನ ಸಾರಥಿ ಯಾರಾಗಬಹುದು ಅನ್ನೊ ಡಿಟೈಲ್ಸ್ ಇಲ್ಲಿದೆ ನೋಡಿ. ಗಾಂಧಿ ಕುಟುಂಬದಿಂದ ಜಾರುತ್ತಾ ಅಧ್ಯಕ್ಷ ಗಾದಿ? ಅತಿ ದೊಡ್ಡ ಪಕ್ಷವಾಗಿದ್ದ ಕಾಂಗ್ರೆಸ್ ಕಳೆದೆರಡು ಲೋಕಸಭಾ ಚುನಾವಣೆಯಿಂದ ಅವನತಿಯತ್ತ ಹೆಜ್ಜೆ ಹಾಕುತ್ತಿದೆ. ದಿನೇ ದಿನೇ ಕಾಂಗ್ರೆಸ್ […]

ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬದಲಾವಣೆಗೆ ಮುಹೂರ್ತ ಫಿಕ್ಸ್? ಯಾರಾಗ್ತಾರೆ ನೂತನ ಅಧ್ಯಕ್ಷ
ಸೋನಿಯಾ ಗಾಂಧಿ
Follow us
ಆಯೇಷಾ ಬಾನು
|

Updated on: Aug 24, 2020 | 8:33 AM

ದೆಹಲಿ: ರಾಷ್ಟ್ರೀಯ ಕಾಂಗ್ರೆಸ್​ನಲ್ಲಿ ಅಧ್ಯಕ್ಷರ ಬದಲಾವಣೆ ಕೂಗು ಜೋರಾಗಿ ಸದ್ದು ಮಾಡ್ತಿದೆ. ಭವಿಷ್ಯದ ದೃಷ್ಟಿಯಿಂದ ನಾಯಕತ್ವ ಬದಲಾಗಲೇ ಬೇಕು ಅಂತಾ ಹಿರಿಯ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆ ಅಧ್ಯಕ್ಷ ಬದಲಾವಣೆ ಸಂಬಂಧ ಇಂದು ಮಹತ್ವದ ಸಭೆ ನಡೆಯಲಿದ್ದು ರಾಷ್ಟ್ರೀಯ ಕಾಂಗ್ರೆಸ್ ನೂತನ ಸಾರಥಿ ಯಾರಾಗಬಹುದು ಅನ್ನೊ ಡಿಟೈಲ್ಸ್ ಇಲ್ಲಿದೆ ನೋಡಿ.

ಗಾಂಧಿ ಕುಟುಂಬದಿಂದ ಜಾರುತ್ತಾ ಅಧ್ಯಕ್ಷ ಗಾದಿ? ಅತಿ ದೊಡ್ಡ ಪಕ್ಷವಾಗಿದ್ದ ಕಾಂಗ್ರೆಸ್ ಕಳೆದೆರಡು ಲೋಕಸಭಾ ಚುನಾವಣೆಯಿಂದ ಅವನತಿಯತ್ತ ಹೆಜ್ಜೆ ಹಾಕುತ್ತಿದೆ. ದಿನೇ ದಿನೇ ಕಾಂಗ್ರೆಸ್ ವರ್ಚಸ್ಸು ಕುಂಠಿತವಾಗುತ್ತಲೇ ಇದೆ. ಹೀಗಾಗಿ ಪಕ್ಷವನ್ನು ಪುನಶ್ಚೇತನಗೊಳಿಸುವ ಅಗತ್ಯ ಹಿಂದೆಂದಿಗಿಂತಲೂ ಈಗ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷವನ್ನು ಮರುಕಟ್ಟಲು ಕಾಂಗ್ರೆಸ್ ನಾಯಕರು ಚಿಂತಿಸಿದ್ದಾರೆ.

ಕಾಂಗ್ರೆಸ್ ಸಂಸದರು, ಕೇಂದ್ರದ ಮಾಜಿ ಸಚಿವರು ಮತ್ತು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಸುಮಾರು 23 ಮುಖಂಡರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಮತ್ತು ಕಾಂಗ್ರೆಸ್ ಸಂಘಟನೆಗಾಗಿ ಹೊಸ ನಾಯಕತ್ವ ಸೂಕ್ತ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಹಾಗಾಗಿ ನಾಳೆ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಬಹಳ ಮಹತ್ವ ಪಡೆದುಕೊಂಡಿದೆ.

ಕಾಂಗ್ರೆಸ್ ಕಾರ್ಯಕಾರಿಣಿಗೆ ಕೌಂಟ್‌ಡೌನ್ ಇಂದು ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಆರಂಭವಾಗಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಈ ಸಿಡಬ್ಲ್ಯುಸಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೊಸ ಅಧ್ಯಕ್ಷರು ಯಾರಾಗಬೇಕೆಂಬ ಬಗ್ಗೆ ಚರ್ಚೆ ನಡೆಯಲಿದೆ. ಇನ್ನು ಹಂಗಾಮಿ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ. ಅಷ್ಟೇ ಅಲ್ಲ ಹೊಸ ಅಧ್ಯಕ್ಷರ ನೇಮಕದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ವಿಚಾರವಾಗಿ ಚರ್ಚೆ ನಡೆಯಲಿದೆ.

ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಏರಲು ರಾಹುಲ‌್ ಗಾಂಧಿ ಹಿಂದೇಟು ಸೋನಿಯಾ ಗಾಂಧಿ ಬಳಿಕ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹೆಸರು ಕೇಳಿ ಬರ್ತಿದೆ. ಯುವ ನಾಯಕ ರಾಹುಲ್ ಗಾಂಧಿಗೆ ಮತ್ತೆ ಪಟ್ಟ ಕಟ್ಟಿ ಅಂತಾ ಕೆಲ ನಾಯಕರು ಮನವಿ ಮಾಡಿದ್ದಾರೆ. ಇನ್ನು ಕೆಲ ನಾಯಕರು ಇಂದಿರಾ ಗಾಂಧಿ ಹೋಲುವ ಪ್ರಿಯಾಂಕಾಗೆ ಹೆಸರು ಸೂಚಿಸಿದ್ದಾರೆ. ಆದ್ರೆ ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿ ತಾವು ಅಧ್ಯಕ್ಷರಾಗುವುದಿಲ್ಲ, ಗಾಂಧಿ ಕುಟುಂಬದ ವ್ಯಕ್ತಿಯನ್ನು ಆಯ್ಕೆ ಮಾಡಿ ಅಂತಾ ಸಲಹೆ ನೀಡಿದ್ದಾರೆ.

ಗಾಂಧಿ ಕುಟುಂಬದ ಹೊರತಾದವರಿಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ? ಹೌದು, ಈ ಬಾರಿ ಗಾಂಧಿ ಕುಟುಂಬತೇರ ವ್ಯಕ್ತಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಏರುವ ಸಾಧ್ಯತೆಯಿದೆ. ಈ ಪಟ್ಟಿಯಲ್ಲಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಮಲ್ಲಿಕಾರ್ಜುನ ಖರ್ಗೆ, ಮುಕುಲ್ ವಾಸ್ನಿಕ್, ಶಶಿ ತರೂರು, ಸುಶೀಲ್‌ ಕುಮಾರ್ ಸಿಂಧೆ ಸೇರಿದಂತೆ ಹಲವು ಹೆಸರುಗಳು ಚಾಲ್ತಿಯಲ್ಲಿವೆ.

ಮಲ್ಲಿಕಾರ್ಜುನ ಖರ್ಗೆ ಯಾಕೆ? ಮಲ್ಲಿಕಾರ್ಜುನ ಖರ್ಗೆಗೆ ರಾಹುಲ್ ಗಾಂಧಿ ಟೀಂ ಬೆಂಬಲವಿದೆ. ಅಷ್ಟೇ ಅಲ್ಲ ಸೋನಿಯಾ ಗಾಂಧಿ ಆಪ್ತ ಬಣದಲ್ಲೂ ಖರ್ಗೆ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಕನ್ನಡಿಗರ ಪೈಕಿ ಎಸ್.ನಿಜಲಿಂಗಪ್ಪ ಬಳಿಕ ಖರ್ಗೆಗೆ ರಾಷ್ಟ್ರೀಯ ಕಾಂಗ್ರೆಸ್ ಹೊಣೆ ಹೊರಬಹುದಾದ ಸಾಮರ್ಥ್ಯವಿದೆ.

ಈ ಬೆಳವಣಿಗೆ ಮಧ್ಯೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ‌ ಪಕ್ಷವನ್ನು ಮುನ್ನಡೆಸುತ್ತಾರೆ ಎಂಬ ಭರವಸೆ ಇದೆ. ಇಲ್ಲವಾದಲ್ಲಿ ದೇಶದ ಹಿತದೃಷ್ಟಿಯಿಂದ ರಾಹುಲ್​ ಗಾಂಧಿ ಅಧ್ಯಕ್ಷರಾಗಬೇಕು ನಮ್ಮ ಆಶಯ ಎಂದಿದ್ದಾರೆ. ಇನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿರುವ ಡಿಕೆಶಿ, ದಯವಿಟ್ಟು ಎಐಸಿಸಿ ನಾಯಕತ್ವವನ್ನ ನೀವೆ ಮುಂದುವರಿಸಿ. ಒಂದು ವೇಳೆ ನೀವು ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಇಳಿಯುವುದಾದರೆ, ರಾಹುಲ್ ಗಾಂಧಿ ಪಕ್ಷದ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಅಷ್ಟೇ ಅಲ್ಲ ಮಲ್ಲಿಕಾರ್ಜನ ಖರ್ಗೆಯವ್ರು ಕೂಡ ದಯವಿಟ್ಟು ಪಕ್ಷದ ನಾಯಕತ್ವವನ್ನು ನೀವೇ ಮುಂದುವರಿಸಿ. ಒಂದು ವೇಳೆ ನೀವು ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಇಳಿಯುವುದಾದರೆ, ತಕ್ಷಣವೇ ರಾಹುಲ್ ಗಾಂಧಿ ಅಧಿಕಾರವಹಿಸಿಕೊಳ್ಳಬೇಕು ಎಂದು ಟ್ವೀಟ್ ಮಾಡಿದ್ದಾರೆ. ಒಟ್ನಲ್ಲಿ ಇಂದು ನಡೆಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಬಹಳ ಕುತೂಹಲ ಕೆರಳಿಸಿದೆ. ಎಲ್ಲಾ ಕುತೂಹಲಗಳಿಗೆ ಇಂದಿನ ಸಭೆಯಲ್ಲಿ ತೆರೆ ಬೀಳುತ್ತಾ ಕಾದು ನೋಡಬೇಕಿದೆ.

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ