ಮೇ 13ರಿಂದ ಉದಯಪುರದಲ್ಲಿ ಕಾಂಗ್ರೆಸ್​ನಿಂದ ಚಿಂತನ ಶಿಬಿರ; ಪ್ರಶಾಂತ್ ಕಿಶೋರ್ ಪ್ಲಾನ್ ಬಗ್ಗೆ ಚರ್ಚೆ

ಮೇ 13ರಿಂದ 15ರವರೆಗೆ ರೆಸಾರ್ಟ್‌ನಲ್ಲಿ ಚಿಂತನ ಶಿಬಿರ ನಡೆಯಲಿದೆ. ಅಲ್ಲಿ ಪಕ್ಷಕ್ಕೆ ಏನು ಕೊರತೆಯಿದೆ ಮತ್ತು ಅದರ ಚುನಾವಣಾ ಭವಿಷ್ಯವನ್ನು ಪುನರುಜ್ಜೀವನಗೊಳಿಸಲು ಏನು ಮಾಡಬೇಕು ಎಂಬುದರ ಕುರಿತು ಕಾಂಗ್ರೆಸ್ ನಾಯಕರು ಚರ್ಚಿಸಲಿದ್ದಾರೆ.

ಮೇ 13ರಿಂದ ಉದಯಪುರದಲ್ಲಿ ಕಾಂಗ್ರೆಸ್​ನಿಂದ ಚಿಂತನ ಶಿಬಿರ; ಪ್ರಶಾಂತ್ ಕಿಶೋರ್ ಪ್ಲಾನ್ ಬಗ್ಗೆ ಚರ್ಚೆ
ಕಾಂಗ್ರೆಸ್ ನಾಯಕರ ಭೇಟಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 20, 2022 | 1:32 PM

ಜೈಪುರ: ರಾಜಸ್ಥಾನದಲ್ಲಿ ಮುಂದಿನ ತಿಂಗಳು ಕಾಂಗ್ರೆಸ್ ನಡೆಸಲು ಉದ್ದೇಶಿಸಿರುವ “ಚಿಂತನ ಶಿಬಿರ”ಕ್ಕೆ ಮುಂಚಿತವಾಗಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ಥಾಪಿಸಿದ 8 ಸದಸ್ಯರ ಗುಂಪು ಮಂಗಳವಾರ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ (Prashant Kishor) ನೀಡಿದ ಪ್ರಸ್ತುತಿಯಲ್ಲಿನ ಕ್ರಿಯಾತ್ಮಕ ಅಂಶಗಳನ್ನು ಸಂಗ್ರಹಿಸುವಲ್ಲಿ ನಿರತವಾಗಿದೆ. ಸತತ ಚುನಾವಣಾ ಸೋಲುಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪುನರ್‌ಪರಿಶೀಲನೆ ಮತ್ತು ಪುನರುಜ್ಜೀವನಕ್ಕಾಗಿ ಪಕ್ಷದ ಕಾರ್ಯತಂತ್ರವನ್ನು ರೂಪಿಸಲು ದೇಶಾದ್ಯಂತದ ಸುಮಾರು 400 ಹಿರಿಯ ಕಾಂಗ್ರೆಸ್ ನಾಯಕರು ಮುಂದಿನ ತಿಂಗಳು ರಾಜಸ್ಥಾನದ ಉದಯಪುರದಲ್ಲಿ (Udaipur) ಮೂರು ದಿನಗಳ ಚಿಂತನ ಶಿಬಿರದಲ್ಲಿ ಭಾಗಿಯಾಗಲಿದ್ದಾರೆ. ಮೇ 13ರಿಂದ 15ರವರೆಗೆ ರೆಸಾರ್ಟ್‌ನಲ್ಲಿ ಚಿಂತನ ಶಿಬಿರ (Chintan Shivir) ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅಲ್ಲಿ ಪಕ್ಷಕ್ಕೆ ಏನು ಕೊರತೆಯಿದೆ ಮತ್ತು ಅದರ ಚುನಾವಣಾ ಭವಿಷ್ಯವನ್ನು ಪುನರುಜ್ಜೀವನಗೊಳಿಸಲು ಏನು ಮಾಡಬೇಕು ಎಂಬುದರ ಕುರಿತು ನಾಯಕರು ಚರ್ಚಿಸಲಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ವಿಧಾನಸಭೆ ಮತ್ತು ಸಾರ್ವತ್ರಿಕ ಚುನಾವಣೆಗಳಲ್ಲಿ ಕಾಂಗ್ರೆಸ್ ಪುನರಾವರ್ತಿತ ಸೋಲನ್ನು ಅನುಭವಿಸಿದೆ. ರಾಹುಲ್ ಗಾಂಧಿ ವಿದೇಶದಿಂದ ಮರಳಿದ ನಂತರ ಮೇ ಮಧ್ಯದಲ್ಲಿ ನಡೆಯಲಿರುವ ಚಿಂತನ-ಮಂಥನ ಅಧಿವೇಶನಕ್ಕೂ ಮೊದಲೇ ಕ್ರಿಯಾ ಯೋಜನೆಯನ್ನು ಅಂತಿಮಗೊಳಿಸುವ ಆಲೋಚನೆ ಇದೆ. ಇದರ ಮಧ್ಯೆ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಛತ್ತೀಸ್‌ಗಢ ಸಿಎಂ ಭೂಪೇಶ್ ಬಾಘೆಲ್ ಇಂದು ದೆಹಲಿಗೆ ಆಗಮಿಸಲಿದ್ದು, ಸೋನಿಯಾ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಅಶೋಕ್ ಗೆಹ್ಲೋಟ್ ಅವರು ಚಿಂತನ ಶಿಬಿರ ನಡೆಯುವ ಸ್ಥಳ ಮತ್ತು ಇತರ ವಿವರಗಳನ್ನು ಸೋನಿಯಾ ಗಾಂಧಿ ಅವರೊಂದಿಗೆ ಚರ್ಚಿಸಬಹುದು. ಚಿಂತನ ಶಿಬಿರ ಉದಯಪುರದಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆಯೇ ಎಂಬ ಪ್ರಶ್ನೆಗೆ, ಅವರ ಸಲಹೆಗಳನ್ನು ಅನುಸರಿಸಿ ಮತ್ತು ಎಲ್ಲವನ್ನೂ ಕಾರ್ಯಗತಗೊಳಿಸಬಹುದು ಎಂಬುದರ ಕುರಿತು ವರದಿಯನ್ನು ಸಿದ್ಧಪಡಿಸುವುದು ನಮ್ಮ ಆದೇಶವಾಗಿದೆ. ಉಳಿದವುಗಳನ್ನು ಕಾಂಗ್ರೆಸ್ ಅಧ್ಯಕ್ಷರು ನಿರ್ಧರಿಸುತ್ತಾರೆ ಎಂದಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಮತ್ತು ರಾಜ್ಯಗಳಲ್ಲಿ ಸಂಸ್ಥೆಯನ್ನು ಪುನರ್​ ರಚಿಸುವ ಬಗ್ಗೆ ಮಾತುಕತೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ ಪ್ರಶಾಂತ್ ಕಿಶೋರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಹಿರಿಯ ನಾಯಕ ಎಂ. ವೀರಪ್ಪ ಮೊಯ್ಲಿ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಕಾಯಕಲ್ಪ ಬೇಕು. ಅದಕ್ಕೆ ಸರಿಯಾಗಿ ಕಾರ್ಯತಂತ್ರ ರೂಪಿಸಬೇಕು. ನಾನು ಬಹಳ ಸಮಯದಿಂದ ಹೇಳುತ್ತಿದ್ದೇನೆ, ಕಾಂಗ್ರೆಸ್ ಅಧ್ಯಕ್ಷರಿಗೂ ಪತ್ರ ಬರೆದಿದ್ದೇನೆ. ಅವರನ್ನು ಕಾಂಗ್ರೆಸ್​ಗೆ ಸೇರ್ಪಡೆ ಮಾಡುವುದು ಉತ್ತಮ. ಕಾರ್ಯತಂತ್ರವನ್ನು ರೂಪಿಸಲು ಪ್ರಶಾಂತ್ ಕಿಶೋರ್ ಅವರನ್ನು ಕೇಳಬೇಕು ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕಾಂಗ್ರೆಸ್‌ನಂತಹ 137 ವರ್ಷಗಳಷ್ಟು ಹಳೆಯದಾದ ಪಕ್ಷವು ತನ್ನ ಪುನರುಜ್ಜೀವನಕ್ಕಾಗಿ ಚುನಾವಣಾ ತಂತ್ರಗಾರನನ್ನು ಅವಲಂಬಿಸಬೇಕೇ ಮತ್ತು ಪಕ್ಷದಲ್ಲಿ ಸಾಕಷ್ಟು ಸಮರ್ಥ ನಾಯಕರಿಲ್ಲವೇ ಎಂಬ ಬಗ್ಗೆ ಮಾತನಾಡಿದ ವೀರಪ್ಪ ಮೊಯ್ಲಿ, ಕಾಂಗ್ರೆಸ್​ನಲ್ಲಿ ಹಲವು ಸಮರ್ಥ ನಾಯಕರಿದ್ದಾರೆ. ನಮ್ಮಲ್ಲಿ ಸಂಪನ್ಮೂಲಗಳಿವೆ ಆದರೆ ಅದನ್ನು ಚಾನೆಲೈಸ್ ಮಾಡಬೇಕಾಗಿದೆ. ಅದಕ್ಕಾಗಿ ತಂತ್ರವಿರಬೇಕು. 2024ರಲ್ಲಿ ಬಿಜೆಪಿಯನ್ನು ವಿರೋಧಿಸುವ ಇತರ ಪಕ್ಷಗಳು ಸರ್ಕಾರವನ್ನು ರಚಿಸಬೇಕು. ಯುಪಿಎ 3 ಹೊರಹೊಮ್ಮಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ನಾಯಕರೊಂದಿಗೆ 4 ತಾಸು ಸಭೆ ನಡೆಸಿದ ಪ್ರಶಾಂತ್ ಕಿಶೋರ್​; 2024 ಲೋಕಸಭಾ ಚುನಾವಣೆ ಬಗ್ಗೆ ಸುದೀರ್ಘ ವಿಷಯ ಮಂಡನೆ

ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆ ಪಕ್ಕಾ?-ಇಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭೇಟಿ ಮಾಡಿದ ಚುನಾವಣಾ ತಂತ್ರಜ್ಞ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ