ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಲು ಮುಂದಾದ ಕಾಂಗ್ರೆಸ್; ಇನ್ಮುಂದೆ ಒಂದು ಕುಟುಂಬಕ್ಕೆ ಒಂದೇ ಟಿಕೆಟ್
ಕಾಂಗ್ರೆಸ್ ಸಿಡಬ್ಲ್ಯುಸಿ(CWC) ಸಭೆಯಲ್ಲಿ ಷರತ್ತುಗಳೊಂದಿಗೆ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ನಿಯಮಕ್ಕೆ ಅನುಮೋದನೆ ನೀಡಲಾಗಿದೆ. ಅದೇ ಕುಟುಂಬದ ಮತ್ತೊಬ್ಬ ಸದಸ್ಯ 5 ವರ್ಷ ಪಕ್ಷಕ್ಕಾಗಿ ದುಡಿದಿದ್ದರೆ ಟಿಕೆಟ್ ನೀಡುವ ಬಗ್ಗೆ ಪರಿಶೀಲನೆ ನಡೆಸಲು ಸಭೆಯಲ್ಲಿ ಸೂಚಿಸಲಾಗಿದೆ.
ಬೆಂಗಳೂರು: ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಲು ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್‌ನಲ್ಲಿ ಇನ್ಮುಂದೆ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ನಿಯಮಕ್ಕೆ ಅನುಮೋದನೆ ನೀಡಲಾಗಿದೆ. ರಾಜಸ್ಥಾನದ ಉದಯಪುರದಲ್ಲಿ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಸಿಡಬ್ಲ್ಯುಸಿ(CWC) ಸಭೆಯಲ್ಲಿ ಷರತ್ತುಗಳೊಂದಿಗೆ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ನಿಯಮಕ್ಕೆ ಅನುಮೋದನೆ ನೀಡಲಾಗಿದೆ. ಅದೇ ಕುಟುಂಬದ ಮತ್ತೊಬ್ಬ ಸದಸ್ಯ 5 ವರ್ಷ ಪಕ್ಷಕ್ಕಾಗಿ ದುಡಿದಿದ್ದರೆ ಟಿಕೆಟ್ ನೀಡುವ ಬಗ್ಗೆ ಪರಿಶೀಲನೆ ನಡೆಸಲು ಸಭೆಯಲ್ಲಿ ಸೂಚಿಸಲಾಗಿದೆ. ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಲು ಕಾಂಗ್ರೆಸ್ ಮೊದಲ ಹೆಜ್ಜೆ ಇಟ್ಟಿದ್ದು ದೇಶಾದ್ಯಂತ ಈ ಸಿದ್ಧಾಂತ ಅನುಷ್ಠಾನಕ್ಕೆ ಕಾಂಗ್ರೆಸ್ ಮುಂದಾಗಿದೆ. ಇನ್ನು ಸಿಡಬ್ಲ್ಯುಸಿ ಸಭೆಯಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ ಮಾಡಲಾಗಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಂಗೀಕರಿಸಿದ ನಿರ್ಣಯಗಳು -ಒಂದು ಕುಟುಂಬಕ್ಕೆ ಒಂದೇ ಟಿಕೆಟ್ -ಇವಿಎಂ ಬಗ್ಗೆ ಸಮಾನ ಮನಸ್ಕ ಪಕ್ಷಗಳ ಜೊತೆ ಸೇರಿ ಚರ್ಚೆ -ಸೋನಿಯಾ ಗಾಂಧಿ ಸಹಾಯಕ್ಕೆ ಇತರ ಸಲಹಾ ಸಮಿತಿ ರಚನೆ -ಬೂತ್ ಮಟ್ಟದಿಂದ ಕಾಂಗ್ರೆಸ್ ಕಾರ್ಯಕಾರಿ ಸಮಿತಿವರೆಗೆ ಶೇಕಡಾ 50 ಯುವಕರಿಗೆ ಸ್ಥಾನ ನೀಡಲು ತೀರ್ಮಾನ -SC-ST, ಒಬಿಸಿ, ಅಲ್ಪಸಂಖ್ಯಾತರಿಗೆ ಶೇ.50ರೊಳಗೆ ಸ್ಥಾನ -ಬ್ಲಾಕ್ ಸಮಿತಿಯಿಂದ ಕಾರ್ಯಕಾರಿ ಸಮಿತಿವರೆಗೆ ಪ್ರತಿ ಪದಾಧಿಕಾರಿಗೂ ಗರಿಷ್ಠ 5 ವರ್ಷ ಅವಧಿ ನಿಗದಿ ಬಳಿಕ ಮೂರು ವರ್ಷ ಕೂಲಿಂಗ್ ಪೀರಿಯಡ್ -ಜನರ ನೈಜ ಸಮಸ್ಯೆ ಕೈಗೆತ್ತಿಕೊಳ್ಳಲು ಪ್ರತಿ ರಾಜ್ಯದಲ್ಲಿ ಸಮಿತಿ ರಚನೆ -ರಾಜ್ಯ ಉಸ್ತುವಾರಿಗಳು ಆಯಾಯ ರಾಜ್ಯಗಳಲ್ಲೇ ಠಿಕಾಣಿ ಹೂಡಲು ಕಾಂಗ್ರೆಸ್ ರಾಜ್ಯ ಉಸ್ತುವಾರಿಗಳಿಗೆ ಸೂಚನೆ -ಭಾರತ ಜೋಡಣಾ ಯಾತ್ರೆಗೆ ಸಿಡಬ್ಲ್ಯುಸಿ ಸಭೆಯಲ್ಲಿ ನಿರ್ಧಾರ -ಪ್ರತಿ ರಾಜ್ಯಗಲ್ಲಿಯೂ ಕಾಂಗ್ರೆಸ್ ನಾಯಕ ರಾಹುಲ್ ಪ್ರವಾಸ -ರೂಟ್ ಮ್ಯಾಪ್ ಹೊಣೆಗಾರಿಕೆ ಆಯಾಯ ಪ್ರದೇಶ ಸಮಿತಿಗಳಿಗೆ ಸೇರಿದಂತೆ ಸಿಡಬ್ಲ್ಯುಸಿ ಸಭೆಯಲ್ಲಿ ಮುಂದಿನ ಚುನಾವಣೆ ದೃಷ್ಟಿಯಿಂದ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
ಇನ್ನು 70 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಈ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದೆ. ಆದ್ರೆ ಒಮ್ಮತ ಮೂಡದ ಹಿನ್ನೆಲೆ ಯಾವುದೇ ನಿರ್ಧಾರಕೈಗೊಂಡಿಲ್ಲ. 70 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ನಿರಾಕರಣೆಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅರ್ಹ ವ್ಯಕ್ತಿಗಳು ಟಿಕೆಟ್‌ನಿಂದ ವಂಚಿತರಾಗುತ್ತಾರೆಂದು ವಿರೋಧ ವ್ಯಕ್ತಪಡಿಸಿದ್ದಾರೆ. ಸಹಮತ ವ್ಯಕ್ತವಾಗದ ಹಿನ್ನೆಲೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.
Published On - 4:13 pm, Sun, 15 May 22