ಕಾಂಗ್ರೆಸ್​​​ಗೆ ನಮ್ಮ ಮತ ಬೇಕು, ಆದರೆ ಮುಸ್ಲಿಮರ ನಾಯಕತ್ವ ಬೇಡ: ಕಾಂಗ್ರೆಸ್​​ ನಾಯಕ

ಕಾಂಗ್ರೆಸ್​​​ ನಮ್ಮ ಮುಸ್ಲಿಂ ಸಮುದಾಯವನ್ನು ಅವರಿಗೆ ಹೇಗೆ ಬೇಕು, ಹಾಗೆ ಉಪಯೋಗಿಸಿಕೊಳ್ಳುತ್ತಿದೆ. ನಮ್ಮ ಮತಬೇಕು ಆದರೆ ನಮ್ಮ ನಾಯಕತ್ವ ಬೇಡ, ನಮಗೆ ಅನ್ಯಾಯ ಮಾಡುತ್ತಿದೆ ಎಂದು ಕಾಂಗ್ರೆಸ್​​ ನಾಯಕ ಮುಹಮ್ಮದ್ ಆರಿಫ್ ನಸೀಮ್ ಖಾ ಬಹಿರಂಗವಾಗಿ ಆರೋಪಿಸಿದ್ದಾರೆ. ಇದೀಗ ಈ ಬಗ್ಗೆ ಮುಸ್ಲಿಂ ಸಮುದಾಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.

ಕಾಂಗ್ರೆಸ್​​​ಗೆ ನಮ್ಮ ಮತ ಬೇಕು, ಆದರೆ ಮುಸ್ಲಿಮರ ನಾಯಕತ್ವ ಬೇಡ: ಕಾಂಗ್ರೆಸ್​​ ನಾಯಕ
ಕಾಂಗ್ರೆಸ್ ನಾಯಕ ಮುಹಮ್ಮದ್ ಆರಿಫ್ ನಸೀಮ್ ಖಾ
Follow us
|

Updated on: Apr 27, 2024 | 11:58 AM

ಕಾಂಗ್ರೆಸ್​​​ಗೆ ನಮ್ಮ ಮತ ಬೇಕು ಆದರೆ ಮುಸ್ಲಿಂ ಸಮುದಾಯದ ನಾಯಕತ್ವ ಬೇಡ ಎಂದು ಕಾಂಗ್ರೆಸ್ ನಾಯಕ ಮುಹಮ್ಮದ್ ಆರಿಫ್ ನಸೀಮ್ ಖಾ (Muhammad Arif Naseem Kha) ಬಹಿರಂಗವಾಗಿ ಆರೋಪಿಸಿದ್ದಾರೆ. ಮಹಾರಾಷ್ಟ್ರದ ಕಾಂಗ್ರೆಸ್​ ಪಕ್ಷದ ಪ್ರಚಾರ ಸಮಿತಿಯಿಂದ ಕೆಳಗಿದ ನಂತರ ಮುಹಮ್ಮದ್ ಆರಿಫ್ ನಸೀಮ್ ಖಾ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ರಾಜ್ಯದಲ್ಲಿ ಯಾವುದೇ ಮುಸ್ಲಿಂ ನಾಯಕರನ್ನು ಕಾಂಗ್ರೆಸ್​​​​ ಪಕ್ಷವು ಲೋಕಸಭೆಗೆ ನಾಮನಿರ್ದೇಶನ ಮಾಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಈ ವಿಚಾರ ಮುಸ್ಲಿಂ ಪಾಳಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಮುಹಮ್ಮದ್ ಆರಿಫ್ ನಸೀಮ್ ಖಾ ಅವರು, ಮಹಾ ವಿಕಾಸ್ ಅಘಾಡಿ (ಎಂವಿಎ) ಬಣವು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಲೋಕಸಭೆ ಚುನಾವಣೆಗೆ ಪಕ್ಷದ ಪರ ಪ್ರಚಾರ ಮಾಡುವುದಿಲ್ಲ ಎಂದು ಕಾಂಗ್ರೆಸ್​​ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರದ ಒಟ್ಟು 48 ಲೋಕಸಭಾ ಸ್ಥಾನಗಳಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಬಣವು ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ನಾಮನಿರ್ದೇಶನ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ಮಹಾರಾಷ್ಟ್ರದಾದ್ಯಂತ ಅನೇಕ ಮುಸ್ಲಿಂ ಸಂಘಟನೆಗಳು, ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು, ಅಲ್ಪಸಂಖ್ಯಾತ ಸಮುದಾಯದಿಂದ ಒಬ್ಬ ಅಭ್ಯರ್ಥಿಯನ್ನು ಕಾಂಗ್ರೆಸ್ ನಾಮನಿರ್ದೇಶನ ಮಾಡುತ್ತದೆ ಎಂಬ ನಂಬಿಕೆ ಇತ್ತು. ಆದರೆ ದುರದೃಷ್ಟವಶಾತ್ ನಮ್ಮ ನಿರೀಕ್ಷೆ ಹುಸಿಯಾಗಿದೆ ಎಂದು ಅವರು ಹೇಳಿದ್ದಾರೆ.

ಇವರಿಗೆ ನಮ್ಮ ಮತಬೇಕು, ಆದರೆ ನಮ್ಮ ನಾಯಕತ್ವಬೇಡ, ಈ ಎಲ್ಲಾ ಕಾರಣಗಳಿಂದಾಗಿ, ನಾನು ಕಾಂಗ್ರೆಸ್​​​ನಲ್ಲಿ ಮುಂದುವರಿಯುವುದಿಲ್ಲ, ನಮ್ಮ ಸಮುದಾಯಕ್ಕೆ ಕಾಂಗ್ರೆಸ್​​​ನಲ್ಲಿ ಯಾಕೆ ಅವಕಾಶವಿಲ್ಲ ಎಂಬ ಸಮುದಾಯದ ಪ್ರಶ್ನೆಗೆ ನನ್ನ ಬಳಿ ಉತ್ತರವಿಲ್ಲ ಎಂದು ಕಾಂಗ್ರೆಸ್​​ ವಿರುದ್ಧ ಮುಹಮ್ಮದ್ ಆರಿಫ್ ನಸೀಮ್ ಖಾ ಅವರು ಅಕ್ರೋಶ ವ್ಯಕ್ತಪಡಿಸಿದರು. ಮಹಾರಾಷ್ಟ್ರ ಕಾಂಗ್ರೆಸ್ ಪ್ರಚಾರ ಸಮಿತಿಗೆ ರಾಜೀನಾಮೆ ನೀಡುವುದಾಗಿಯೂ ಅವರು ಹೇಳಿದ್ದಾರೆ.

ಮಹಾ ವಿಕಾಸ್ ಅಘಾಡಿ (MVA) ಮೂಲಕ ಮಹಾರಾಷ್ಟ್ರದ 48 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 17ರಲ್ಲಿ ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಶರದ್‌ಚಂದ್ರ ಪವಾರ್) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದೆ. ಮುಹಮ್ಮದ್ ಆರಿಫ್ ಖಾನ್ ಮುಂಬೈ ನಾರ್ತ್ ಸೆಂಟ್ರಲ್​​​​​ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿಯಾಗಿದರು. ಆದರೆ ಪಕ್ಷವು ನಗರ ಘಟಕದ ಅಧ್ಯಕ್ಷೆ ವರ್ಷಾ ಗಾಯಕ್ವಾಡ್ ಅವರಿಗೆ ಟಿಕೆಟ್​​ ನೀಡಿದೆ. 2019 ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈನ ಚಂಡಿವಾಲಿಯಿಂದ ಸ್ಪರ್ಧಿಸಿದ್ದರು, ಅಲ್ಲಿ ಅವರು 409 ಮತಗಳಿಂದ ಸೋತಿದ್ದರು.

ಇದನ್ನೂ ಓದಿ: ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ, ಅಂಕ ನೀಡಿದ ಪ್ರಾಧ್ಯಾಪಕರು ಅಮಾನತು

ಪಿಟಿಐ ಜತೆಗೆ ಮಾತನಾಡಿದ ಮುಹಮ್ಮದ್ ಆರಿಫ್ ಖಾನ್ ಅವರು, ಕಾಂಗ್ರೆಸ್ ತನ್ನ ಸಿದ್ಧಾಂತದಿಂದ ಹೊರಗೆ ಬರುತ್ತಿದೆ. ಮೊದಲಿನ ಪಕ್ಷದಂತಿಲ್ಲ, ಮಹಾರಾಷ್ಟ್ರದಲ್ಲಿ ಚುನಾವಣೆಗೆ ಟಿಕೆಟ್ ನೀಡುವಾಗ ಕಾಂಗ್ರೆಸ್ ಏಕೆ ಮುಸ್ಲಿಂ ಸಮುದಾಯವನ್ನು ನಿರ್ಲಕ್ಷಿಸಿದೆ ಎಂದು ಗೊತ್ತಿಲ್ಲ. ಯಾವ ಕಾರಣಕ್ಕೆ ನಮಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ತಿಳಿಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು