ರಾಹುಲ್ ಕುರಿತ ನನ್ನ ಹೇಳಿಕೆಯನ್ನು ಕಾಂಗ್ರೆಸ್ ತಪ್ಪಾಗಿ ಅರ್ಥೈಸುತ್ತಿದೆ: ಅಸ್ಸಾಂ ಸಿಎಂ

ಅವರು ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲು ಪ್ರಯತ್ನಿಸುತ್ತಿದ್ದಾರೆ. ನಾನು ಏನೆಂದರೆ ಪ್ರಶ್ನೆ ಮಾಡಬಾರದ ಕೆಲವು ಸಮಸ್ಯೆಗಳಿವೆ. ಯಾವುದೇ ದೇಶದಲ್ಲಿ, ಸಶಸ್ತ್ರ ಪಡೆಗಳು ದಾಳಿ ನಡೆಸಿ ಹಿಂತಿರುಗಿದಾಗ, ಅವರು ಚಪ್ಪಾಳೆ ಮತ್ತು ಪ್ರಶಂಸೆಗಳನ್ನು ಪಡೆಯುತ್ತಾರೆ.

ರಾಹುಲ್ ಕುರಿತ ನನ್ನ ಹೇಳಿಕೆಯನ್ನು ಕಾಂಗ್ರೆಸ್ ತಪ್ಪಾಗಿ ಅರ್ಥೈಸುತ್ತಿದೆ: ಅಸ್ಸಾಂ ಸಿಎಂ
ಹಿಮಂತ ಬಿಸ್ವಾ ಶರ್ಮಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Feb 13, 2022 | 9:32 PM

ದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು ರಾಹುಲ್ ಗಾಂಧಿ (Rahul Gandhi) ಅವರ ಅಪ್ಪನ ಬಗ್ಗೆ ವಾಗ್ದಾಳಿ ಕುರಿತು ಪ್ರತಿಪಕ್ಷಗಳಿಂದ ಟೀಕೆಗೆ ಒಳಗಾಗಿದ್ದು, ಕಾಂಗ್ರೆಸ್  (Congress) ತನ್ನ ಹೇಳಿಕೆಗೆ “ತಪ್ಪು ವ್ಯಾಖ್ಯಾನ” ನೀಡುತ್ತಿದ್ದು, ವಾಸ್ತವದಿಂದ ವಿಮುಖವಾಗಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.“ನಾನು ಕೆಲವು ಪ್ರಶ್ನೆಗಳನ್ನು ಎತ್ತಿದ್ದೇನೆ .ಸರ್ಜಿಕಲ್ ಸ್ಟ್ರೈಕ್ ನಂತರ ಕಾಂಗ್ರೆಸ್ ಪಕ್ಷವು ಭಾರತೀಯ ಸೇನೆಯನ್ನು ಪ್ರಶಂಸಿಸುವ ಬದಲು ಸೈನಿಕರನ್ನು ಏಕೆ ಪ್ರಶ್ನಿಸಿತು? ಜನರಲ್ ಬಿಪಿನ್ ರಾವತ್ ಅವರು ಬದುಕಿರುವಾಗಲೇ ಅವರನ್ನು ಕಾಂಗ್ರೆಸ್ ನಿಂದಿಸಿದ್ದು ಏಕೆ? ಈ ಪ್ರಶ್ನೆಗಳಿಗೆ ಉತ್ತರಿಸುವುದರಿಂದ ನೀವು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ದೇಶವು ಇವುಗಳಿಗೆ ಉತ್ತರಿಸಬೇಕಾಗಿದೆ, ”ಎಂದು ಶರ್ಮಾ ದಿ ಸಂಡೇ ಎಕ್ಸ್‌ಪ್ರೆಸ್‌ಗೆ ತಿಳಿಸಿದರು. ಶುಕ್ರವಾರ ಉತ್ತರಾಖಂಡದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ, ಗಡಿ ನಿಯಂತ್ರಣ ರೇಖೆ (LOC) ಮೂಲಕ ಭಯೋತ್ಪಾದಕರ ವಿರುದ್ಧದ 2016 ರ ಸರ್ಜಿಕಲ್ ಸ್ಟ್ರೈಕ್ ಅನ್ನು ಪ್ರಶ್ನಿಸಿದ ಆರೋಪದ ಮೇಲೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಶರ್ಮಾ ವಾಗ್ದಾಳಿ ನಡೆಸಿದರು. “ಭಾರತವು ಜನರಲ್ ಬಿಪಿನ್ ರಾವತ್ ನೇತೃತ್ವದಲ್ಲಿ ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿತು. ರಾಹುಲ್ ಗಾಂಧಿ ಅವರು ದಾಳಿ ಬಗ್ಗೆ ಪುರಾವೆ ಕೇಳಿದರು. ನೀವು ರಾಜೀವ್ ಗಾಂಧಿಯವರ ಮಗನೋ ಅಲ್ಲವೋ ಎಂಬುದಕ್ಕೆ ನಾವು ಎಂದಾದರೂ ನಿಮ್ಮ ಬಳಿ ಪುರಾವೆ ಕೇಳಿದ್ದೇವೆಯೇ? ಎಂದು ಹಿಮಂತ ಕೇಳಿದ್ದರು.

ಈ ಹೇಳಿಕೆಯು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಸೇರಿದಂತೆ ಕಾಂಗ್ರೆಸ್ ನಾಯಕರು ಮತ್ತು ಇತರ ವಿರೋಧ ಪಕ್ಷಗಳಿಂದ ಟೀಕೆಗೊಳಗಾಗಿದೆ. ಕೆ ಚಂದ್ರಶೇಖರ್ ರಾವ್ ಅವರು ಶರ್ಮಾ ಅವರನ್ನು ವಜಾಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದರು.

ಅವರು ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲು ಪ್ರಯತ್ನಿಸುತ್ತಿದ್ದಾರೆ. ನಾನು ಏನೆಂದರೆ ಪ್ರಶ್ನೆ ಮಾಡಬಾರದ ಕೆಲವು ಸಮಸ್ಯೆಗಳಿವೆ. ಯಾವುದೇ ದೇಶದಲ್ಲಿ, ಸಶಸ್ತ್ರ ಪಡೆಗಳು ದಾಳಿ ನಡೆಸಿ ಹಿಂತಿರುಗಿದಾಗ, ಅವರು ಚಪ್ಪಾಳೆ ಮತ್ತು ಪ್ರಶಂಸೆಗಳನ್ನು ಪಡೆಯುತ್ತಾರೆ. ಆದರೆ ಇಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಅದನ್ನು ಪ್ರಶ್ನಿಸಿದೆ ಎಂದು ಶರ್ಮಾ ಹೇಳಿದರು.

ಉತ್ತರಾಖಂಡ್‌ನಲ್ಲಿ ಸೇನೆ ಮತ್ತು ಜನರಲ್ ರಾವತ್‌ಗೆ ಕಾಂಗ್ರೆಸ್‌ನ “ಅಗೌರವ” ವನ್ನು ಪ್ರಶ್ನಿಸಲು ನಾನು ಪ್ರಯತ್ನಿಸುತ್ತಿದ್ದಾರೆ. ಸೋಮವಾರದಂದು ಉತ್ತರಾಖಂಡ ಚುನಾವಣೆ ನಡೆಯಲಿದೆ. ಆದರೆ ಕಾಂಗ್ರೆಸ್ ಕೇವಲ “ಗಮನವನ್ನು ತಿರುಗಿಸಲು ಪ್ರಯತ್ನಿಸುತ್ತಿದೆ” ಎಂದು ಅವರು ಹೇಳಿದರು.

ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತ ಸೇನಾ ಸಿಬ್ಬಂದಿ ಉತ್ತರಾಖಂಡದ ಮತದಾರರಲ್ಲಿ ಗಣನೀಯ ಭಾಗವನ್ನು ಹೊಂದಿದ್ದು ರಾಜಕೀಯ ಪಕ್ಷಗಳು ಜನರಲ್ ರಾವತ್ ಬಗ್ಗೆ ಮಾತನಾಡಿವೆ.

ರಾಹುಲ್ ಗಾಂಧಿ ವಿರುದ್ಧ ಶರ್ಮಾ ಅವರ ಹೇಳಿಕೆಯನ್ನು ಹಲವು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಭಾನುವಾರ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇದು ಬಾಲಿಶ ಮತ್ತು ಖಂಡನೀಯ ಹೇಳಿಕೆ. ಅಧಿಕಾರಕ್ಕಾಗಿ ಶರ್ಮಾ ಬಿಜೆಪಿಗೆ ಹೋಗಿದ್ದಾರೆ. ಈಗ ಪ್ರಧಾನಿ ಮತ್ತು ಆರ್‌ಎಸ್‌ಎಸ್‌ನ ಭಾಷೆಯನ್ನು ಮಾತನಾಡುತ್ತಾರೆ, ಅವರು ಯಾವಾಗಲೂ ಚಾರಿತ್ರ್ಯಹತ್ಯೆಯಲ್ಲಿ ತೊಡಗುತ್ತಾರೆ. ನಾನು ಅವರಿಂದ ಅಂತಹ ಹೇಳಿಕೆಗಳನ್ನು ನಿರೀಕ್ಷಿಸಿರಲಿಲ್ಲ. ಯಾವಾಗ ಮತ್ತು ಏನು ಹೇಳಬೇಕೆಂದು ಸಿಎಂ ತಿಳಿದಿರಬೇಕು, ”ಎಂದು ಖರ್ಗೆ ಹೇಳಿದರು, 2015 ರಲ್ಲಿ ಶರ್ಮಾ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರವಾಗಿದ್ದರು.

ಇದನ್ನೂ ಓದಿರಾಹುಲ್ ಗಾಂಧಿ ರಾಜೀವ್ ಗಾಂಧಿಯವರ ಮಗನೋ ಅಲ್ಲವೋ ಎಂಬುದಕ್ಕೆ ಪುರಾವೆ ಕೇಳಿದ್ದೇವಾ?: ಅಸ್ಸಾಂ ಸಿಎಂ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್