ಪ್ರಿಯಾಂಕಾ ಗಾಂಧಿ ವಿರುದ್ಧ ಷಡ್ಯಂತ್ರ, ಸದ್ಯದಲ್ಲೇ ಕಾಂಗ್ರೆಸ್​ ಇಬ್ಭಾಗ; ಪ್ರಮೋದ್ ಕೃಷ್ಣಂ

Lok Sabha Elections 2024: ಕಾಂಗ್ರೆಸ್​ನಲ್ಲಿ ಗಾಂಧಿ ಕುಟುಂಬದಿಂದಾಗಿಯೇ ಪಕ್ಷ ಇಬ್ಭಾಗವಾಗುವ ಸಾಧ್ಯತೆ ಹೆಚ್ಚಾಗಿದೆ. ಸದ್ಯದಲ್ಲೇ ರಾಹುಲ್ ಗಾಂಧಿ ಬಣ ಮತ್ತು ಪ್ರಿಯಾಂಕಾ ಗಾಂಧಿ ಬಣ ಎಂಬ ಎರಡು ಭಾಗವಾಗಲಿದೆ ಎಂದು ಕಾಂಗ್ರೆಸ್​ನಿಂದ ಉಚ್ಛಾಟಿತರಾಗಿರುವ ಆಚಾರ್ಯ ಪ್ರಮೋದ್ ಕೃಷ್ಣಂ ಭವಿಷ್ಯ ನುಡಿದಿದ್ದಾರೆ.

ಪ್ರಿಯಾಂಕಾ ಗಾಂಧಿ ವಿರುದ್ಧ ಷಡ್ಯಂತ್ರ, ಸದ್ಯದಲ್ಲೇ ಕಾಂಗ್ರೆಸ್​ ಇಬ್ಭಾಗ; ಪ್ರಮೋದ್ ಕೃಷ್ಣಂ
ರಾಹುಲ್ ಗಾಂಧಿ ಬಣ ಮತ್ತು ಪ್ರಿಯಾಂಕಾ ಗಾಂಧಿ
Follow us
ಸುಷ್ಮಾ ಚಕ್ರೆ
|

Updated on:May 04, 2024 | 8:04 PM

ನವದೆಹಲಿ: ರಾಹುಲ್ ಗಾಂಧಿ (Rahul Gandhi) ರಾಯ್ ಬರೇಲಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಬಗ್ಗೆ ಮಾರ್ಚ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿತರಾದ ಆಚಾರ್ಯ ಪ್ರಮೋದ್ ಕೃಷ್ಣಂ (Acharya Pramod Krishnam) ಅವರು ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕೆ ಪ್ರವೇಶಿಸುವ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ ಬೆನ್ನಲ್ಲೇ ಪ್ರಮೋದ್ ಕೃಷ್ಣಂ ಕೂಡ ಆಶ್ಚರ್ಯಕರವಾದ ಹೇಳಿಕೆಯನ್ನು ನೀಡಿದ್ದಾರೆ. ಕಾಂಗ್ರೆಸ್ ಶೀಘ್ರದಲ್ಲೇ ರಾಹುಲ್ ಗಾಂಧಿ ಬಣ ಮತ್ತು ಪ್ರಿಯಾಂಕಾ ಗಾಂಧಿ ಬಣವಾಗಿ ವಿಭಜನೆಯಾಗಬಹುದು ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಷಡ್ಯಂತ್ರಕ್ಕೆ ಪ್ರಿಯಾಂಕಾ ಗಾಂಧಿ ಬಲಿಯಾಗಿದ್ದಾರೆ ಎಂದು ಕೃಷ್ಣಂ ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಅವರು ಅಮೇಥಿಯನ್ನು ತೊರೆದಿದ್ದರಿಂದಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನೈತಿಕ ಸ್ಥೈರ್ಯ ಕುಸಿದಿದೆ. ಪ್ರಿಯಾಂಕಾ ಗಾಂಧಿ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಇದು ಈಗ ಅವರ ಬೆಂಬಲಿಗರ ಹೃದಯದಲ್ಲಿ ಜ್ವಾಲಾಮುಖಿಯಾಗಿದ್ದು, ಜೂನ್ 4ರ ನಂತರ ಸ್ಫೋಟಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅನುಭವಿ ಚೆಸ್ ಆಟಗಾರ; ರಾಯ್​ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆಗೆ ಕಾಂಗ್ರೆಸ್ ಸಮರ್ಥನೆ

“ಕಾಂಗ್ರೆಸ್ ಮತ್ತೆ ಎರಡು ಬಣಗಳಾಗಿ ವಿಭಜನೆಯಾಗಲಿದೆ, ಒಂದು ರಾಹುಲ್ ಗಾಂಧಿ ಮತ್ತು ಇನ್ನೊಂದು ಪ್ರಿಯಾಂಕಾ ಗಾಂಧಿ ಬಣವಾಗಿ ಇಬ್ಭಾಗವಾಗಲಿದೆ. ಪಾಕಿಸ್ತಾನದಲ್ಲಿ ಅವರ ಜನಪ್ರಿಯತೆ ಮತ್ತು ಬೇಡಿಕೆ ಹೆಚ್ಚುತ್ತಿರುವ ಕಾರಣ ರಾಹುಲ್ ಗಾಂಧಿ ರಾಯ್​ಬರೇಲಿಯ ಬದಲಿಗೆ ರಾವಲ್ಪಿಂಡಿಯಿಂದ ಸ್ಪರ್ಧಿಸಬೇಕು ಎಂದು ಪ್ರಮೋದ್ ಕೃಷ್ಣಂ ಲೇವಡಿ ಮಾಡಿದ್ದಾರೆ.

“ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ರಾಹುಲ್ ಗಾಂಧಿ ಚುನಾವಣೆಗೆ ಸ್ಪರ್ಧಿಸಲು ಬಿಡುವುದಿಲ್ಲ ಎಂದು ನಾನು ಈಗಾಗಲೇ ಹೇಳಿದ್ದೆ. ಪ್ರಿಯಾಂಕಾ ಗಾಂಧಿ ವಿರುದ್ಧ ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಪಿತೂರಿ ನಡೆಯುತ್ತಿದೆ. ಕುಟುಂಬ ಮತ್ತು ಪಕ್ಷದಲ್ಲಿನ ಪಿತೂರಿಗೆ ಅವರು ಬಲಿಯಾಗಿದ್ದಾರೆ” ಎಂದು ಮಾಜಿ ಎಂದು ಕಾಂಗ್ರೆಸ್ ಮುಖಂಡ ಆಚಾರ್ಯ ಪ್ರಮೋದ್ ಕೃಷ್ಣಂ ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ಅಮ್ಮನಿಂದಾಗಿ ನಮ್ಮ ಕುಟುಂಬದ ಕರ್ಮಭೂಮಿಗೆ ಸೇವೆ ಸಲ್ಲಿಸುವ ಪುಣ್ಯ ಸಿಕ್ಕಿದೆ; ರಾಹುಲ್ ಗಾಂಧಿ

ರಾಹುಲ್ ಗಾಂಧಿ ರಾಯ್​ಬರೇಲಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಅವರು ಈ ಲೋಕಸಭಾ ಚುನಾವಣೆಯಲ್ಲಿ ರಾಯ್​ ಬರೇಲಿ ಜೊತೆಗೆ ವಯನಾಡಿನಿಂದ ಕೂಡ ಸ್ಪರ್ಧಿಸುತ್ತಿದ್ದಾರೆ. ರಾಯ್ಬರೇಲಿ ಮತ್ತು ವಯನಾಡ್ ಲೋಕಸಭಾ ಕ್ಷೇತ್ರಗಳೆರಡೂ ಕಾಂಗ್ರೆಸ್ ಭದ್ರಕೋಟೆಗಳಾಗಿವೆ. ಅಮೇಥಿ ಕೂಡ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಆದರೆ, 2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಅಮೇಥಿ ಕ್ಷೇತ್ರದಿಂದ ಸೋತಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:01 pm, Sat, 4 May 24

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ