Assam Jodo Yatra: ನವೆಂಬರ್ 1 ರಿಂದ ಕಾಂಗ್ರೆಸ್​ನ ‘ಅಸ್ಸಾಂ ಜೋಡೋ ಯಾತ್ರೆ’ ಆರಂಭ

ಭಾರತ್ ಜೋಡೋ ಯಾತ್ರೆಯ ಭಾಗವಾಗಿ ನವೆಂಬರ್ 1 ರಿಂದ ಅಸ್ಸಾಂ ಜೋಡೋ ಯಾತ್ರೆಯನ್ನು ಕಾಂಗ್ರೆಸ್ ಆರಂಭಿಸಲಿದೆ. ಈ ಕುರಿತು ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ತಿಳಿಸಿದ್ದಾರೆ.

Assam Jodo Yatra: ನವೆಂಬರ್ 1 ರಿಂದ ಕಾಂಗ್ರೆಸ್​ನ ‘ಅಸ್ಸಾಂ ಜೋಡೋ ಯಾತ್ರೆ’ ಆರಂಭ
Congress
Updated By: ನಯನಾ ರಾಜೀವ್

Updated on: Sep 17, 2022 | 10:01 AM

ಭಾರತ್ ಜೋಡೋ ಯಾತ್ರೆಯ ಭಾಗವಾಗಿ ನವೆಂಬರ್ 1 ರಿಂದ ಅಸ್ಸಾಂ ಜೋಡೋ ಯಾತ್ರೆಯನ್ನು ಕಾಂಗ್ರೆಸ್ ಆರಂಭಿಸಲಿದೆ. ಈ ಕುರಿತು ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯನ್ನು ಹಳಿತಪ್ಪಿಸುವಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಯಶಸ್ವಿಯಾಗಲಿಲ್ಲ. ಹಿಮಂತ ಬಿಸ್ವಾ ಶರ್ಮಾ ಅವರು ಪಕ್ಷದ ಶಾಸಕರ ಮೇಲೆ ಎಷ್ಟೇ ಪ್ರಭಾವ ಬೀರಲು ಪ್ರಯತ್ನಿಸಿದರೂ ಕಾಂಗ್ರೆಸ್ ನಿಲ್ಲುವುದಿಲ್ಲ, ಶರ್ಮಾ ಅವರಂತೆ ಯಾವುದೇ ಶಾಸಕರು ಪಕ್ಷವನ್ನು ತೊರೆದರೂ ನಾವು ಹೆದರುವುದಿಲ್ಲ ಎಂದು ರಮೇಶ್ ಹೇಳಿದರು.

ಶರ್ಮಾ ಕಾಂಗ್ರೆಸ್ ಬಗ್ಗೆ ಯೋಚಿಸುವುದನ್ನು ನಿಲ್ಲಿಸಬೇಕು ಮತ್ತು ಅಸ್ಸಾಂನ ಕಲ್ಯಾಣಕ್ಕಾಗಿ ಕೆಲಸ ಮಾಡುವತ್ತ ಗಮನ ಹರಿಸಬೇಕು ಎಂದು ಅವರು ಹೇಳಿದರು. ಶರ್ಮಾ ಈ ಹಿಂದೆ ರಾಹುಲ್ ಗಾಂಧಿಯನ್ನು ಟೀಕಿಸಿದ್ದರು ಮತ್ತು ಪಾಕಿಸ್ತಾನದಿಂದ ಭಾರತ್ ಜೋಡೋ ಯಾತ್ರೆಯನ್ನು ಪ್ರಾರಂಭಿಸಲು ಸಲಹೆ ನೀಡಿದ್ದರು, ದೇಶದ ವಿಭಜನೆಗೆ ಕಾಂಗ್ರೆಸ್ ಕಾರಣ ಎಂದು ಹೇಳಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ರಮೇಶ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಬಿಜೆಪಿ ಆಡಳಿತದಲ್ಲಿ ದೇಶ ಇಬ್ಭಾಗವಾಗಿದೆ. ದೇಶವು ಪ್ರಚಂಡ ಆರ್ಥಿಕ ಅಸಮಾನತೆ, ಸಾಮಾಜಿಕ ಧ್ರುವೀಕರಣ ಮತ್ತು ಅಧಿಕಾರದ ಕೇಂದ್ರೀಕರಣವನ್ನು ಎದುರಿಸುತ್ತಿದೆ, ಇದು ಸಮಾಜದ ವಿವಿಧ ವರ್ಗಗಳ ನಡುವೆ ಭಾರಿ ವಿಭಜನೆಯನ್ನು ಸೃಷ್ಟಿಸಿದೆ ಎಂದು ಅವರು ಹೇಳಿದರು.

ಇಂದು, ಜನರು ಧರ್ಮ, ಸಂಸ್ಕೃತಿ ಮತ್ತು ಆಹಾರ ಪದ್ಧತಿಯ ಮೇಲೆ ವಿಭಜನೆಗೊಂಡಿದ್ದಾರೆ. ರಾಜ್ಯ ಸರ್ಕಾರಗಳ ಅಧಿಕಾರವನ್ನು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಕಿತ್ತುಕೊಂಡಿದೆ ಎಂದು ರಮೇಶ್ ಪ್ರತಿಪಾದಿಸಿದರು.

ಮುಂದಿನ ವರ್ಷ ಅರುಣಾಚಲ ಪ್ರದೇಶದಿಂದ ಗುಜರಾತ್‌ಗೆ ಎರಡನೇ ಹಂತದ ಭಾರತ್ ಜೋಡೋ ಯಾತ್ರೆಯನ್ನು ಪ್ರಾರಂಭಿಸುವ ಕಾಂಗ್ರೆಸ್‌ನ ಯೋಜನೆಯ ಬಗ್ಗೆ ಪಕ್ಷದ ಹಿರಿಯ ನಾಯಕ ಸುಳಿವು ಬಿಟ್ಟುಕೊಟ್ಟಿದ್ದಾರೆ.

 

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ