AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್‌ ಪ್ರಾದೇಶಿಕ ಸಂಘಟನೆಯಾಗಿ ಪ್ರತ್ಯೇಕಗೊಳ್ಳಲಿದೆ: ಹಿಮಂತ ಬಿಸ್ವ ಶರ್ಮಾ

ಕಾಂಗ್ರೆಸ್ ಕಾರ್ಯಕರ್ತರು ಸಂಪೂರ್ಣವಾಗಿ ಹತಾಶರಾಗಿದ್ದಾರೆ. ಕಾಂಗ್ರೆಸ್ ಯಾವುದೇ ರಾಷ್ಟ್ರೀಯ ನಾಯಕತ್ವವಿಲ್ಲದೆ ಕಾರ್ಯನಿರ್ವಹಿಸುತ್ತಿದೆ. ಕಾಂಗ್ರೆಸ್ ಪ್ರತ್ಯೇಕಗೊಳ್ಳಲಿದೆ, ರಾಷ್ಟ್ರೀಯ ನಾಯಕತ್ವ ಇರುವುದಿಲ್ಲ ಮತ್ತು ಕಾಂಗ್ರೆಸ್  ರಾಜ್ಯದಲ್ಲಿ ಪ್ರಾದೇಶಿಕ ಸಂಘಟನೆಯಾಗಿ ಪ್ರತ್ಯೇಕವಾಗಲಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್‌ ಪ್ರಾದೇಶಿಕ ಸಂಘಟನೆಯಾಗಿ ಪ್ರತ್ಯೇಕಗೊಳ್ಳಲಿದೆ: ಹಿಮಂತ ಬಿಸ್ವ ಶರ್ಮಾ
ಹಿಮಂತ ಬಿಸ್ವ ಶರ್ಮಾ
ರಶ್ಮಿ ಕಲ್ಲಕಟ್ಟ
|

Updated on:Mar 01, 2024 | 2:02 PM

Share

ಗುವಾಹಟಿ ಮಾರ್ಚ್ 01: ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್‌ಗೆ ಪಕ್ಷವು ವಿವಿಧ ಪ್ರಾದೇಶಿಕ ಸಂಘಟನೆಯಾಗಿ ಪ್ರತ್ಯೇಕಗೊಳ್ಳಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ (Himanta Biswa Sarma) ಹೇಳಿದ್ದಾರೆ. ಅದೇ ವೇಳೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (NDA) 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದರು. ಕಾಂಗ್ರೆಸ್‌ (Congress) ಇತಿಹಾಸಕ್ಕೆ ಸೇರಲಿದೆ, ಅದು ಕಟ್ಟಿಟ್ಟ ಬುತ್ತಿ. ಕಾಂಗ್ರೆಸ್ ವಿವಿಧ ಪ್ರಾದೇಶಿಕ ಪಕ್ಷಗಳಾಗಿ ವಿಭಜನೆಯಾಗಲಿದೆ. ಈ ಚುನಾವಣೆಯ ನಂತರ ಕಾಂಗ್ರೆಸ್‌ನ ರಾಷ್ಟ್ರೀಯ ಸ್ಥಾನಮಾನವು ಕ್ಷೀಣಿಸುತ್ತದೆ. ಏಕೆಂದರೆ ಎನ್‌ಡಿಎ 400 ಪ್ಲಸ್ ಗೆಲುವಿನತ್ತ ಸಾಗುತ್ತಿದೆ. ಬೇರೆ ಯಾವುದೇ ಆಯ್ಕೆ ಇಲ್ಲ ಎಂದು ಶರ್ಮಾ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಕಾಂಗ್ರೆಸ್ ಕಾರ್ಯಕರ್ತರು ಸಂಪೂರ್ಣವಾಗಿ ಹತಾಶರಾಗಿದ್ದಾರೆ. ಕಾಂಗ್ರೆಸ್ ಯಾವುದೇ ರಾಷ್ಟ್ರೀಯ ನಾಯಕತ್ವವಿಲ್ಲದೆ ಕಾರ್ಯನಿರ್ವಹಿಸುತ್ತಿದೆ. ಕಾಂಗ್ರೆಸ್ ಪ್ರತ್ಯೇಕಗೊಳ್ಳಲಿದೆ, ರಾಷ್ಟ್ರೀಯ ನಾಯಕತ್ವ ಇರುವುದಿಲ್ಲ ಮತ್ತು ಕಾಂಗ್ರೆಸ್  ರಾಜ್ಯದಲ್ಲಿ ಪ್ರಾದೇಶಿಕ ಸಂಘಟನೆಯಾಗಿ ಪ್ರತ್ಯೇಕವಾಗಲಿದೆ ಎಂದು ಅಸ್ಸಾಂ ಸಿಎಂ ಹೇಳಿದ್ದಾರೆ.

2015 ರಲ್ಲಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದರು. ಅವರು ಇತ್ತೀಚೆಗೆ ಕಾಂಗ್ರೆಸ್‌ನ ಚುಕ್ಕಾಣಿ ಹಿಡಿದಿರುವ ಗಾಂಧಿ ಕುಟುಂಬದ ಮೇಲೆ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

ಮೈತ್ರಿ ಘೋಷಿಸಿದ ಹಿಮಂತ ಬಿಸ್ವಾ ಶರ್ಮಾ

ಹಿಮಂತ ಬಿಸ್ವಾ ಶರ್ಮಾ ಅವರು ನಿನ್ನೆ ಸಾರ್ವತ್ರಿಕ ಚುನಾವಣೆಗೆ ಅಸೋಮ್ ಗಣ ಪರಿಷತ್ (ಎಜಿಪಿ) ಮತ್ತು ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (ಯುಪಿಪಿಎಲ್) ನೊಂದಿಗೆ ತಮ್ಮ ಪಕ್ಷದ ಮೈತ್ರಿಯನ್ನು ಘೋಷಿಸಿದರು. 14 ಲೋಕಸಭಾ ಸ್ಥಾನಗಳ ಪೈಕಿ 11ರಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು, ಎಜಿಪಿ ಮತ್ತು ಯುಪಿಪಿಎಲ್ ಕ್ರಮವಾಗಿ ಎರಡು ಮತ್ತು ಒಂದು ಸ್ಥಾನದಲ್ಲಿ ಸ್ಪರ್ಧಿಸಲಿವೆ ಎಂದರು.

ಏತನ್ಮಧ್ಯೆ, ಅಸ್ಸಾಂ ಕಾಂಗ್ರೆಸ್ ಕಾರ್ಯಾಧ್ಯಕ್ಷ ರಾಣಾ ಗೋಸ್ವಾಮಿ ಗುರುವಾರ ಬಿಜೆಪಿ ಸೇರಿದ್ದಾರೆ. ಅಸ್ಸಾಂ ಕಾಂಗ್ರೆಸ್‌ನ ಮತ್ತೊಬ್ಬ ಕಾರ್ಯಾಧ್ಯಕ್ಷ ಕಾಮಾಖ್ಯ ದೇ ಪುರ್ಕಾಯಸ್ಥ ಕೂಡ ರಾಜ್ಯ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.  ಈ ಹಿಂದೆ, ಶಶಿಕಾಂತ ದಾಸ್ ಮತ್ತು ಸಿದ್ದಿಕ್ ಅಹಮದ್ ಎಂಬ ಇಬ್ಬರು ಕಾಂಗ್ರೆಸ್ ಶಾಸಕರು ರಾಜ್ಯ ಸರ್ಕಾರಕ್ಕೆ ತಮ್ಮ ಬೆಂಬಲವನ್ನು ನೀಡಿದ್ದರು.

ಇದನ್ನೂ ಓದಿ: ಪ್ರತಿ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಯ ವಿಡಿಯೋಗ್ರಫಿ ಮಾಡಲು ಚುನಾವಣಾ ಆಯೋಗಕ್ಕೆ ಬಿಜೆಪಿ ಒತ್ತಾಯ

ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಶರ್ಮಾ, ಕಾಂಗ್ರೆಸ್‌ನಲ್ಲಿನ ನಿರ್ಧಾರಗಳನ್ನು ಊಟದ ಕೋಣೆಯಲ್ಲಿ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು. ಕುಟುಂಬದ ಊಟದ ಕೋಣೆಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಕೆಲಸಗಾರರು ಮಾತ್ರ ಅದನ್ನು ಅನುಸರಿಸುತ್ತಾರೆ. ಕುಟುಂಬದ ಅಗತ್ಯಕ್ಕೆ ತಕ್ಕಂತೆ ಪಕ್ಷದ ಅಜೆಂಡಾ ಮತ್ತು ಸಿದ್ಧಾಂತವನ್ನು ಬದಲಾಯಿಸಲಾಗಿದೆ ಎಂದು ಶರ್ಮಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Fri, 1 March 24

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು