ಕಾಂಗ್ರೆಸ್ ಅಧ್ಯಕ್ಷ ಗಾದಿ ಏರಲಿದ್ದಾರಾ ರಾಹುಲ್ ಗಾಂಧಿ? ಸುಳಿವು ನೀಡಿದ ರಣ​ದೀಪ್​ ಸುರ್ಜೇವಾಲಾ

ಕಾಂಗ್ರೆಸ್​ಗೆ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸದ್ಯದಲ್ಲೇ ಆರಂಭವಾಗಲಿದ್ದು, ರಾಹುಲ್ ಗಾಂಧಿಯವರೇ ಅಧ್ಯಕ್ಷರಾಗಲೆಂದು ಶೇ.99.9 ಕಾಂಗ್ರೆಸ್ಸಿಗರು ಬಯಸುತ್ತಾರೆ ಎಂದು ಕಾಂಗ್ರೆಸ್​​ನ ರಾಷ್ಟ್ರೀಯ ಮಾಧ್ಯಮ ವಕ್ತಾರ ರಣ​ದೀಪ್​ ಸುರ್ಜೇವಾಲಾ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಗಾದಿ ಏರಲಿದ್ದಾರಾ ರಾಹುಲ್ ಗಾಂಧಿ? ಸುಳಿವು ನೀಡಿದ ರಣ​ದೀಪ್​ ಸುರ್ಜೇವಾಲಾ
ರಣ​ದೀಪ್ ಸುರ್ಜೇವಾಲಾ
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 18, 2020 | 6:47 PM

ದೆಹಲಿ: ಕಾಂಗ್ರೆಸ್​ಗೆ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸದ್ಯದಲ್ಲೇ ಆರಂಭವಾಗಲಿದ್ದು, ರಾಹುಲ್ ಗಾಂಧಿಯವರೇ ಅಧ್ಯಕ್ಷರಾಗಲೆಂದು ಶೇ.99.9 ಕಾಂಗ್ರೆಸ್ಸಿಗರು ಬಯಸುತ್ತಾರೆ ಎಂದು ಕಾಂಗ್ರೆಸ್​​ನ ರಾಷ್ಟ್ರೀಯ ಮಾಧ್ಯಮ ವಕ್ತಾರ ರಣ​ದೀಪ್ ಸುರ್ಜೇವಾಲಾ ಹೇಳಿದ್ದಾರೆ. ಎಐಸಿಸಿ ಸದಸ್ಯರು, ಚುನಾವಣಾ ಸಮಿತಿ ಮತ್ತು ಪಕ್ಷದ ಕಾರ್ಯಕರ್ತರು ಅಧ್ಯಕ್ಷ ಗಾದಿಯಲ್ಲಿ ಯಾರು ಕೂರಬೇಕೆಂದು ಒಕ್ಕೊರೊಲಿನಿಂದ ನಿರ್ಧರಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಪಕ್ಷದ ನಾಯಕತ್ವ ಬದಲಿಸುವಂತೆ ಪತ್ರ ಬರೆದಿದ್ದ ಜಿ23 ನಾಯಕರ ಜೊತೆ ನಾಳೆ (ಡಿ.19) ಚರ್ಚೆ ನಡೆಸಲಿದ್ದಾರೆ. ಕಳೆದ ಆಗಸ್ಟ್​ನಲ್ಲಿ ಪಕ್ಷದಲ್ಲಿ ಗಮನಾರ್ಹ ಬದಲಾವಣೆ ಕೋರಿ ಪತ್ರ ಬರೆದಿದ್ದರೂ ಕಾಂಗ್ರೆಸ್ ಅಧಿನಾಯಕಿಗೆ ಅವರ ಆಕ್ಷೇಪಗಳನ್ನು ಸಂಪೂರ್ಣ ಪರಿಹರಿಸಲು ಸಾಧ್ಯವಾಗಿರಲಿಲ್ಲ. ಇದೀಗ ನಾಳೆಯ ಚರ್ಚೆಯ ಮುನ್ನವೇ ಸುರ್ಜೇವಾಲಾ ಈ ಹೇಳಿಕೆ ನೀಡಿದ್ದಾರೆ. ಇದು ಶಶಿ ತರೂರ್, ಗುಲಾಂ ನಬೀ ಆಜಾದ್​ ಸೇರಿದಂತೆ G23 ನಾಯಕರಿಗೆ ನೀಡಿದ ಎದಿರೇಟು ಎಂದೇ ವಿಶ್ಲೇಷಣೆ ಕೇಳಿಬಂದಿದೆ.

ಗಾಂಧಿ ಪರಿವಾರಕ್ಕೆ ಗಾದಿ ಬೇಡ ಎಂದಿದ್ದ ನಾಯಕರು! ಮುಳುಗುತ್ತಿರುವ ಹಡಗಿನಂತಾಗಿರುವ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾಗಬೇಕು ಎಂದು ವಿವಿಧ ರಾಜ್ಯಗಳ ಹಿರಿಯ ನಾಯಕರು ಬೇಡಿಕೆಯಿಟ್ಟಿದ್ದರು. ತಾತ್ಕಾಲಿಕವಾಗಿ ಈ ಬೇಡಿಕೆಯನ್ನು ಶಮನಗೊಳಿಸಿದ್ದ ಕಾಂಗ್ರೆಸ್ ವರಿಷ್ಠರು ಕೊನೆಗೂ ಗಾಂಧಿ ಪರಿವಾರದಿಂದ ಅಧ್ಯಕ್ಷ ಗಾದಿ ತಪ್ಪದಂತೆ ನೋಡಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ, G23 ನಾಯಕರ ಜೊತೆ ಮಾತುಕತೆಯ ಹಿಂದಿನ ದಿನವೇ ಸೋನಿಯಾ ನಿಷ್ಠ ರಣದೀಪ್ ಸುರ್ಜೇವಾಲಾ ಈ ಹೇಳಿಕೆ ನೀಡಿರಬಹುದು ಎಂದು ವಿಶ್ಲೇಷಿಸಲಾಗಿದೆ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ