ಹೊರಗಿನ ರಾಜಕೀಯ ಸನ್ನಿವೇಶ ಏನೇ ಇರಲಿ, ನಾವು ಜನ ಸಾಮಾನ್ಯರ ಕುಂದುಕೊರತೆಗಳನ್ನು ನಿವಾರಿಸಲು ಒಗ್ಗಟ್ಟಿನಿಂದ ಇರಬೇಕು: ಮಲ್ಲಿಕಾರ್ಜುನ ಖರ್ಗೆ

Mallikarjun Kharge ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ನಾವು ನಿನ್ನೆ ಕಾರ್ಯತಂತ್ರ ಸಮಿತಿ ಸಭೆ ನಡೆಸಿದ್ದೇವೆ. ಉಭಯ ಸದನದ ನಾಯಕರು ಹಾಜರಿದ್ದರು. ಹೊರಗಿನ ರಾಜಕೀಯ ಸನ್ನಿವೇಶ ಏನೇ ಇರಲಿ, ಆದರೆ ಒಳಗೆ ನಾವು ಜನ ಸಾಮಾನ್ಯರ ಕುಂದುಕೊರತೆಗಳನ್ನು ನಿವಾರಿಸಲು ಒಗ್ಗಟ್ಟಿನಿಂದ ಇರಬೇಕು ಎಂದು ಖರ್ಗೆ ಹೇಳಿದ್ದಾರೆ.

ಹೊರಗಿನ ರಾಜಕೀಯ ಸನ್ನಿವೇಶ ಏನೇ ಇರಲಿ, ನಾವು ಜನ ಸಾಮಾನ್ಯರ ಕುಂದುಕೊರತೆಗಳನ್ನು ನಿವಾರಿಸಲು ಒಗ್ಗಟ್ಟಿನಿಂದ ಇರಬೇಕು: ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Nov 26, 2021 | 5:38 PM

ದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಅವರ ಪಕ್ಷದೊಂದಿಗೆ ಕಾಂಗ್ರೆಸ್ ಪಕ್ಷವು ಭಿನ್ನಾಭಿಪ್ರಾಯಗಳ ನಡುವೆಯೂ ಪ್ರತಿಪಕ್ಷಗಳ ಏಕತೆಯನ್ನು ಖಚಿತಪಡಿಸಿಕೊಳ್ಳಲು ಕೆಲಸ ಮಾಡುತ್ತದೆ ಎಂದು ಎನ್​​ಡಿಟಿವಿ ಜತೆ ಮಾತನಾಡಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಹೇಳಿದ್ದಾರೆ. ಬೆಲೆ ಏರಿಕೆ, ಕೃಷಿ ಕಾನೂನುಗಳನ್ನು ಹಿಂಪಡೆಯುವುದು ಮತ್ತು ಚೀನಾ ಗಡಿ ಉದ್ವಿಗ್ನತೆಯಂತಹ ಪ್ರಮುಖ ವಿಷಯಗಳ ಕುರಿತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಅಥವಾ ಎನ್‌ಡಿಎಯನ್ನು ಪ್ರಶ್ನಿಸಲು ತೃಣಮೂಲ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಹೇಗೆ ಒಟ್ಟಾಗಿ ಕೆಲಸ ಮಾಡಬಹುದು ಎಂಬುದನ್ನು ಚರ್ಚಿಸಲು ಮಮತಾ ಬ್ಯಾನರ್ಜಿ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ದೆಹಲಿಗೆ ಬಂದಿದ್ದರು. “ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರ ನೇತೃತ್ವದಲ್ಲಿ ನಾವು ನಿನ್ನೆ ಕಾರ್ಯತಂತ್ರ ಸಮಿತಿ ಸಭೆ ನಡೆಸಿದ್ದೇವೆ. ಉಭಯ ಸದನದ ನಾಯಕರು ಹಾಜರಿದ್ದರು. ಹೊರಗಿನ ರಾಜಕೀಯ ಸನ್ನಿವೇಶ ಏನೇ ಇರಲಿ, ಆದರೆ ಒಳಗೆ ನಾವು ಜನ ಸಾಮಾನ್ಯರ ಕುಂದುಕೊರತೆಗಳನ್ನು ನಿವಾರಿಸಲು ಒಗ್ಗಟ್ಟಿನಿಂದ ಇರಬೇಕು ಎಂದು ಖರ್ಗೆ ಹೇಳಿದ್ದಾರೆ. ಗೋವಾ ಮತ್ತು ಮೇಘಾಲಯದಲ್ಲಿ ತೃಣಮೂಲ ಕಾಂಗ್ರೆಸ್ (TMC) ಪಕ್ಷವು ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡುವಲ್ಲಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ಒಗ್ಗಟ್ಟಿನ ಮಾತುಕತೆಗಳು ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಅಸ್ತಿತ್ವವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡುತ್ತವೆ.

ನೋಡಿ, ಅದು ಸಾಂಸ್ಥಿಕ ವಿಷಯವಾಗಿದೆ. ಹೈಕಮಾಂಡ್ ಆ ಸಮಸ್ಯೆಗಳನ್ನು ನಿಭಾಯಿಸುತ್ತದೆ. ಸಂಸತ್ತಿಗೆ ಸಂಬಂಧಿಸಿದಂತೆ, ಬಿಜೆಪಿ ಸರ್ಕಾರದ ನೀತಿಗಳ ವಿರುದ್ಧ ಎಲ್ಲಾ ಪಕ್ಷಗಳು ಒಂದಾಗಲು ನಾವು ವಿನಂತಿಸುತ್ತೇವೆ” ಎಂದು ಖರ್ಗೆ ಹೇಳಿದರು.

ಏತನ್ಮಧ್ಯೆ ನವೆಂಬರ್ 29 ರಂದು ಸದನದಲ್ಲಿ ತಪ್ಪದೇ ಹಾಜರಾಗಿ ಪಕ್ಷದ ನಿಲುವನ್ನು ಬೆಂಬಲಿಸುವಂತೆ ಕಾಂಗ್ರೆಸ್ ತನ್ನ ಲೋಕಸಭಾ ಸಂಸದರಿಗೆ ಮೂರು ಸಾಲಿನ ವಿಪ್ ಜಾರಿ ಮಾಡಿದೆ ಎಂದು ಎಎನ್ಐ  ಟ್ವೀಟ್ ಮಾಡಿದೆ.

ಮೇಘಾಲಯದ 17 ಕಾಂಗ್ರೆಸ್ ಶಾಸಕರ ಪೈಕಿ ಕನಿಷ್ಠ 12 ಮಂದಿ ಬ್ಯಾನರ್ಜಿಯವರ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅಸ್ಸಾಂ, ಗೋವಾ, ಉತ್ತರ ಪ್ರದೇಶ, ಬಿಹಾರ ಮತ್ತು ಹರಿಯಾಣದಲ್ಲಿಯೂ ತೃಣಮೂಲ ಕಾಂಗ್ರೆಸ್‌ ,ಕಾಂಗ್ರೆಸ್ ನಾಯಕರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ದೆಹಲಿಯಲ್ಲಿ ಬಿಜೆಪಿ ವಿರುದ್ಧದ ಹೋರಾಟದಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಸೇರಲು ಬಯಸುವ ಯಾವುದೇ ನಾಯಕರಿಗೆ ಬ್ಯಾನರ್ಜಿ ಈಗಾಗಲೇ ಮುಕ್ತ ಆಹ್ವಾನ ನೀಡಿದ್ದಾರೆ.

ಇದನ್ನೂ ಓದಿ: ದ್ವಂದ್ವ ನಿಲುವು ಬಿಟ್ಟುಬಿಡಿ: 26/11 ವಿಚಾರಣೆಯನ್ನು ತ್ವರಿತಗೊಳಿಸುವಂತೆ ಪಾಕಿಸ್ತಾನಕ್ಕೆ ಹೇಳಿದ ಭಾರತ