AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWC meeting ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟ ಸಾಧ್ಯತೆ

ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯೊಳಗೆ ಸಿಡಬ್ಲ್ಯುಸಿ ಸಭೆ ಪ್ರಾರಂಭವಾಗುತ್ತಿದ್ದಂತೆ, ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಕಚೇರಿಯ ಹೊರಗೆ ಜಮಾಯಿಸಿ ಗಾಂಧಿಗಳ ಪರವಾಗಿ ಘೋಷಣೆಗಳನ್ನು ಕೂಗಿದರು ಮತ್ತು ರಾಹುಲ್ ಗಾಂಧಿಯನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿ ಎಂದು ಒತ್ತಾಯಿಸಿದರು.

CWC meeting  ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟ ಸಾಧ್ಯತೆ
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Mar 13, 2022 | 5:13 PM

Share

ದೆಹಲಿ: ಐದು ರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (Congress Working Committee) ಭಾನುವಾರದ ಸಭೆಯಲ್ಲಿ ಮಹತ್ವದ ನಿರ್ಧಾರಗಳು ಪ್ರಕಟವಾಗುವ ಸಾಧ್ಯತೆ ಇದೆ. ಅದೇ ವೇಳೆ ಚುನಾವಣಾ ನಿರ್ವಹಣೆ ಮಾಡಿದ್ದ ನಾಯಕರು ರಾಜೀನಾಮೆ ನೀಡಬಹುದು ಎಂದು ಊಹಿಸಲಾಗುತ್ತಿದೆ. ಈ ಹಿಂದೆ ಸೋನಿಯಾ ಗಾಂಧಿ (Sonia Gandhi) ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಅದನ್ನು ಸಿಡಬ್ಲ್ಯುಸಿ ತಿರಸ್ಕರಿಸಿತು. ಇದೀಗ ಪಕ್ಷದೊಳಗಿನ ಬಂಡಾಯ ಗುಂಪು ನಾಯಕತ್ವದಲ್ಲಿ ಬದಲಾವಣೆಯನ್ನು ಬಯಸುತ್ತಿದೆ. 2019 ರ ಚುನಾವಣೆಯಲ್ಲಿ ರಾಹುಲ್ ಗಾಂಧಿ (Rahul Gandhi) ಅವರು ಪಕ್ಷದ ಅಧ್ಯಕ್ಷರಾಗಿ ರಾಜೀನಾಮೆ ನೀಡಿದ್ದರು. ಆನಂತರ ಸೋನಿಯಾ ಈ ಅಧಿಕಾರವನ್ನು ವಹಿಸಿಕೊಳ್ಳಬೇಕಾಗಿ ಬಂದಿತ್ತು. ಜಿ 23 ನಾಯಕರು ಪಕ್ಷದ ಆಂತರಿಕ ಚುನಾವಣೆಗಳನ್ನು ಮುನ್ನಡೆಸುವಂತೆ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಸಭೆ ನಡೆಯುತ್ತಿದೆ.  ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಇತರ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಅಂಬಿಕಾ ಸೋನಿ, ಸಲ್ಮಾನ್ ಖುರ್ಷಿದ್, ಅಜಯ್ ಮಾಕನ್, ಪ್ರಿಯಾಂಕಾ ಗಾಂಧಿ, ಪಿ ಚಿದಂಬರಂ, ಅಶೋಕ್ ಗೆಹ್ಲೋಟ್, ಅಧಿರಾಜನ್ ಚೌಧರಿ, ಜಿತೇಂದ್ರ ಭವಾರ್ ಸಿಂಗ್, ಡಾ. ಅಜೋಯ್ ಕುಮಾರ್, ದಿಗ್ವಿಜಯ್ ಸಿಂಗ್, ಆನಂದ್ ಶರ್ಮಾ, ಭೂಪೇಶ್ ಭಾಗೇಲ್, ತಾರಿಕ್ ಅನ್ವರ್ ಮತ್ತು ಹರೀಶ್ ರಾವತ್ ಸಭೆಗೆ ಆಗಮಿಸಿದ್ದಾರೆ. ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಪಾಲ್ಗೊಳ್ಳಲಿರುವ ನಾಯಕರು ಸ್ಮಾರ್ಟ್‌ಫೋನ್ ಕೊಂಡೊಯ್ಯುವಂತಿಲ್ಲ ಎಂದು ವರದಿಗಳು ತಿಳಿಸಿವೆ. ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯೊಳಗೆ ಸಿಡಬ್ಲ್ಯುಸಿ ಸಭೆ ಪ್ರಾರಂಭವಾಗುತ್ತಿದ್ದಂತೆ, ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಕಚೇರಿಯ ಹೊರಗೆ ಜಮಾಯಿಸಿ ಗಾಂಧಿಗಳ ಪರವಾಗಿ ಘೋಷಣೆಗಳನ್ನು ಕೂಗಿದರು ಮತ್ತು ರಾಹುಲ್ ಗಾಂಧಿಯನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿ ಎಂದು ಒತ್ತಾಯಿಸಿದರು.

ಸಭೆಗೆ ಮುಂಚಿತವಾಗಿ  ಗಾಂಧಿ ಕುಟುಂಬ ಕಾಂಗ್ರೆಸ್‌ ಮಾತ್ರವಲ್ಲ ದೇಶದ ಎಲ್ಲ ವರ್ಗಗಳನ್ನು ಬೆಸೆಯುವ ದಾರ ಎಂದು ಯುವ ಕಾಂಗ್ರೆಸ್ ಮುಖಂಡ ಬಿ.ವಿ ಶ್ರೀನಿವಾಸ್  ಹೇಳಿದ್ದಾರೆ.

ಸಿಡಬ್ಲ್ಯುಸಿ ಸಭೆಯ ಅಪ್ಡೇಟ್ಸ್

ಕಾಂಗ್ರೆಸ್  ಕಾರ್ಯಕಾರಿ ಸಮಿತಿ ಸಭೆ ಆರಂಭವಾಗಿದ್ದು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ  ಗಾಂಧಿ   ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಒಗ್ಗಟ್ಟಾಗಿರಲು ಗಾಂಧಿ ಕುಟುಂಬ ಮುಖ್ಯ, ರಾಹುಲ್ ಗಾಂಧಿ ಅಧ್ಯಕ್ಷರಾಗಬೇಕು: ಅಶೋಕ್ ಗೆಹ್ಲೋಟ್

Published On - 5:02 pm, Sun, 13 March 22

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್