ದೆಹಲಿ: ಐದು ರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (Congress Working Committee) ಭಾನುವಾರದ ಸಭೆಯಲ್ಲಿ ಮಹತ್ವದ ನಿರ್ಧಾರಗಳು ಪ್ರಕಟವಾಗುವ ಸಾಧ್ಯತೆ ಇದೆ. ಅದೇ ವೇಳೆ ಚುನಾವಣಾ ನಿರ್ವಹಣೆ ಮಾಡಿದ್ದ ನಾಯಕರು ರಾಜೀನಾಮೆ ನೀಡಬಹುದು ಎಂದು ಊಹಿಸಲಾಗುತ್ತಿದೆ. ಈ ಹಿಂದೆ ಸೋನಿಯಾ ಗಾಂಧಿ (Sonia Gandhi) ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಅದನ್ನು ಸಿಡಬ್ಲ್ಯುಸಿ ತಿರಸ್ಕರಿಸಿತು. ಇದೀಗ ಪಕ್ಷದೊಳಗಿನ ಬಂಡಾಯ ಗುಂಪು ನಾಯಕತ್ವದಲ್ಲಿ ಬದಲಾವಣೆಯನ್ನು ಬಯಸುತ್ತಿದೆ. 2019 ರ ಚುನಾವಣೆಯಲ್ಲಿ ರಾಹುಲ್ ಗಾಂಧಿ (Rahul Gandhi) ಅವರು ಪಕ್ಷದ ಅಧ್ಯಕ್ಷರಾಗಿ ರಾಜೀನಾಮೆ ನೀಡಿದ್ದರು. ಆನಂತರ ಸೋನಿಯಾ ಈ ಅಧಿಕಾರವನ್ನು ವಹಿಸಿಕೊಳ್ಳಬೇಕಾಗಿ ಬಂದಿತ್ತು. ಜಿ 23 ನಾಯಕರು ಪಕ್ಷದ ಆಂತರಿಕ ಚುನಾವಣೆಗಳನ್ನು ಮುನ್ನಡೆಸುವಂತೆ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಸಭೆ ನಡೆಯುತ್ತಿದೆ. ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಇತರ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಅಂಬಿಕಾ ಸೋನಿ, ಸಲ್ಮಾನ್ ಖುರ್ಷಿದ್, ಅಜಯ್ ಮಾಕನ್, ಪ್ರಿಯಾಂಕಾ ಗಾಂಧಿ, ಪಿ ಚಿದಂಬರಂ, ಅಶೋಕ್ ಗೆಹ್ಲೋಟ್, ಅಧಿರಾಜನ್ ಚೌಧರಿ, ಜಿತೇಂದ್ರ ಭವಾರ್ ಸಿಂಗ್, ಡಾ. ಅಜೋಯ್ ಕುಮಾರ್, ದಿಗ್ವಿಜಯ್ ಸಿಂಗ್, ಆನಂದ್ ಶರ್ಮಾ, ಭೂಪೇಶ್ ಭಾಗೇಲ್, ತಾರಿಕ್ ಅನ್ವರ್ ಮತ್ತು ಹರೀಶ್ ರಾವತ್ ಸಭೆಗೆ ಆಗಮಿಸಿದ್ದಾರೆ. ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಪಾಲ್ಗೊಳ್ಳಲಿರುವ ನಾಯಕರು ಸ್ಮಾರ್ಟ್‌ಫೋನ್ ಕೊಂಡೊಯ್ಯುವಂತಿಲ್ಲ ಎಂದು ವರದಿಗಳು ತಿಳಿಸಿವೆ.
ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯೊಳಗೆ ಸಿಡಬ್ಲ್ಯುಸಿ ಸಭೆ ಪ್ರಾರಂಭವಾಗುತ್ತಿದ್ದಂತೆ, ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಕಚೇರಿಯ ಹೊರಗೆ ಜಮಾಯಿಸಿ ಗಾಂಧಿಗಳ ಪರವಾಗಿ ಘೋಷಣೆಗಳನ್ನು ಕೂಗಿದರು ಮತ್ತು ರಾಹುಲ್ ಗಾಂಧಿಯನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿ ಎಂದು ಒತ್ತಾಯಿಸಿದರು.
As #CWC meet starts inside AICC headquarters in #Delhi, Congress workers gather outside party office shouting slogans in favour of #Gandhis and demanding that Mr @RahulGandhi be made party president … pic.twitter.com/Vv7YGkZRL9
— Supriya Bhardwaj (@Supriya23bh) March 13, 2022
ಸಭೆಗೆ ಮುಂಚಿತವಾಗಿ ಗಾಂಧಿ ಕುಟುಂಬ ಕಾಂಗ್ರೆಸ್ ಮಾತ್ರವಲ್ಲ ದೇಶದ ಎಲ್ಲ ವರ್ಗಗಳನ್ನು ಬೆಸೆಯುವ ದಾರ ಎಂದು ಯುವ ಕಾಂಗ್ರೆಸ್ ಮುಖಂಡ ಬಿ.ವಿ ಶ್ರೀನಿವಾಸ್ ಹೇಳಿದ್ದಾರೆ.
ಸಿಡಬ್ಲ್ಯುಸಿ ಸಭೆಯ ಅಪ್ಡೇಟ್ಸ್
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆರಂಭವಾಗಿದ್ದು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ.
Congress Working Committee meeting begins. The meeting is being chaired by party’s interim president Sonia Gandhi pic.twitter.com/czj37hmjKX
— ANI (@ANI) March 13, 2022
ಇದನ್ನೂ ಓದಿ: ಕಾಂಗ್ರೆಸ್ ಒಗ್ಗಟ್ಟಾಗಿರಲು ಗಾಂಧಿ ಕುಟುಂಬ ಮುಖ್ಯ, ರಾಹುಲ್ ಗಾಂಧಿ ಅಧ್ಯಕ್ಷರಾಗಬೇಕು: ಅಶೋಕ್ ಗೆಹ್ಲೋಟ್
Published On - 5:02 pm, Sun, 13 March 22