AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಭೆ; ಪ್ರಮುಖವಾಗಿ ಮುಂಬರುವ ಚುನಾವಣೆಗಳ ಕುರಿತು ಚರ್ಚೆಯ ನಿರೀಕ್ಷೆ

ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕಾರಣಿ ಸಭೆ ನಡೆಯಲಿದೆ. ಈ ವೇಳೆ ಹಲವು ಪ್ರಮುಖ ವಿಚಾರಗಳು ಚರ್ಚೆಯಾಗುವ ನಿರೀಕ್ಷೆ ಇದೆ.

ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಭೆ; ಪ್ರಮುಖವಾಗಿ ಮುಂಬರುವ ಚುನಾವಣೆಗಳ ಕುರಿತು ಚರ್ಚೆಯ ನಿರೀಕ್ಷೆ
ಸೋನಿಯಾ ಗಾಂಧಿ, ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
Follow us
TV9 Web
| Updated By: shivaprasad.hs

Updated on:Oct 16, 2021 | 7:28 AM

ನವದೆಹಲಿ: ಇಂದು ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದೆ. ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು,  ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಕಾಲಿಕ ಅಧ್ಯಕ್ಷರ ಆಯ್ಕೆ, ರಾಜ್ಯ ಘಟಕಗಳ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆಯಲಿದೆ. ಸಭೆಯಲ್ಲಿ ಮುಖ್ಯವಾಗಿ ಗೋವಾ, ಪಂಜಾಬ್, ಅಸ್ಸಾಂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್ಸಿಗರು ಪಕ್ಷ ತ್ಯಜಿಸುತ್ತಿರುವ ಕುರಿತು ಚರ್ಚೆ ನಡೆಯಲಿದೆ.

ಇದೇ ವೇಳೆ ಆಡಳಿತಾರೂಢ ಕೇಂದ್ರ ಸರ್ಕಾರ ಹಾಗೂ ಬಿಜೆಪಿಯ ವಿರುದ್ಧ ಹೋರಾಟದ ಬಗ್ಗೆಯೂ ಚರ್ಚೆಯಾಗಲಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮೂಲಕ ಅಧ್ಯಕ್ಷರನ್ನು ಆಯ್ಕೆ ಮಾಡುವ ಕುರಿತೂ ಚರ್ಚೆ ನಡೆಯಲಿದೆ. ರಾಹುಲ್ ಗಾಂಧಿ ಮತ್ತೊಮ್ಮೆ ಕಾಂಗ್ರೆಸ್ ಅಧ್ಯಕ್ಷರಾಗುವ ಸಾಧ್ಯತೆ ಇದ್ದು, ಕಾಂಗ್ರೆಸ್ ಪಕ್ಷಕ್ಕೆ ಮೂರರಿಂದ ನಾಲ್ಕು ಕಾರ್ಯಾಧ್ಯಕ್ಷರ ನೇಮಕದ ಬಗ್ಗೆಯೂ ಚರ್ಚೆಯಾಗುವ ನಿರೀಕ್ಷೆ ಇದೆ. ಪ್ರಮುಖವಾಗಿ ಪಕ್ಷದ ಸಂಘಟನೆಯ ಪುನರ್ ರಚನೆ, ಪಕ್ಷ ಬಲಪಡಿಸುವ ಬಗ್ಗೆ ಚರ್ಚೆ ನಡೆಯಲಿದೆ.

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನವಜೋತ್ ಸಿಂಗ್ ಸಿಧು ಮುಂದುವರಿಕೆ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನವಜೋತ್ ಸಿಂಗ್ ಸಿಧು ಮುಂದುವರೆಯಲಿದ್ದಾರೆ. ಇತ್ತೀಚೆಗಷ್ಟೇ ರಾಹುಲ್ ಗಾಂಧಿ ಅವರನ್ನು ಸಿಧು ಭೇಟಿಯಾಗಿದ್ದರು. ಎಲ್ಲಾ ಸಮಸ್ಯೆಗಳು ಬಗೆಹರಿದಿವೆ. ನವಜೋತ್ ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಎಂದು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ತಿಳಿಸಿದ್ದಾರೆ.

ಹಾವೇರಿ: ಹಾನಗಲ್ ವಿಧಾನಸಭಾ ಉಪಚುನಾವಣೆ; ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಚಾರ ಹಾವೇರಿ: ಅಕ್ಟೋಬರ್ 30ರಂದು ನಡೆಯಲಿರುವ ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಯುಕ್ತ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಪ್ರಚಾರ ನಡೆಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ ಹಾನಗಲ್ ಕ್ಷೇತ್ರದ ಮಲಗುಂದ, ಹೇರೂರು, ತಿಳುವಳ್ಳಿ, ಗೊಂದಿ ಗ್ರಾಮಗಳಲ್ಲಿ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ. ಪ್ರಚಾರದ ವೇಳೆ ಮಾಜಿ ಸಚಿವ ಸಂತೋಷ್ ಲಾಡ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯನವರೊಂದಿಗೆ ಉಪಸ್ಥಿತರಿರಲಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ಉಪಚುನಾವಣೆ ಸರ್ಕಾರದ ಮೇಲೆ ಜನರಿಗಿರುವ ಅಭಿಪ್ರಾಯ ತಿಳಿಸಲಿದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಹಾನಗಲ್ ಹಾಗೂ ಸಿಂದಗಿ ಕ್ಷೇತ್ರದ ಉಪಚುನಾವಣೆ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ:

ಸಿಂಘು ಗಡಿಯಲ್ಲಿ ಗುಂಪು ಹಲ್ಲೆ: ಪೊಲೀಸರಿಗೆ ಶರಣಾದ ಕೊಲೆ ಆರೋಪಿ

Crime News: ಆಸ್ತಿ ವಿವಾದ ಹಿನ್ನೆಲೆ ಮಹಿಳೆ ಹತ್ಯೆ; ದೇವಾಲಯದಿಂದ ಮನೆಗೆ ಬರುತ್ತಿದ್ದಾಗ ಘಟನೆ

Published On - 7:27 am, Sat, 16 October 21

ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!