ಚುನಾವಣೆ ಸೋಲಿನ ಆತ್ಮಾವಲೋಕನ; ಮಾ.13ರಂದು ದೆಹಲಿಯಲ್ಲಿ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆ

ಪಂಚರಾಜ್ಯಗಳ ಚುನಾವಣೆಯಲ್ಲಿ ಸೋತ ಬೆನ್ನಲ್ಲೇ ಕಾಂಗ್ರೆಸ್​​ನ ಜಿ 23 ನಾಯಕರು ಮತ್ತೆ ಅಲರ್ಟ್ ಆಗಿದ್ದಾರೆ. ಕೂಡಲೇ ಎಐಸಿಸಿ ಸಭೆ ನಡೆಸಬೇಕು. ಕಾಂಗ್ರೆಸ್​ಗೆ ಕೂಡಲೇ ಬೇರೆ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು ಎಂದು ನಿನ್ನೆ (ಮಾರ್ಚ್​ 11) ಆಗ್ರಹಿಸಿದ್ದರು.

ಚುನಾವಣೆ ಸೋಲಿನ ಆತ್ಮಾವಲೋಕನ; ಮಾ.13ರಂದು ದೆಹಲಿಯಲ್ಲಿ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆ
ಸಾಂಕೇತಿಕ ಚಿತ್ರ
Follow us
| Updated By: Lakshmi Hegde

Updated on:Mar 12, 2022 | 5:06 PM

ಪಂಚರಾಜ್ಯಗಳ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್​ಗೆ (Congress) ಬಹುದೊಡ್ಡ ಶಾಕ್​ ಎದುರಾಗಿದೆ. ಕೈಯಲ್ಲಿರುವ ರಾಜ್ಯವನ್ನೂ ಈ ಚುನಾವಣೆಯಲ್ಲಿ ಕಾಂಗ್ರೆಸ್ ಕಳೆದುಕೊಂಡಿದೆ. ಈ ಸೋಲನ್ನು ಪರಾಮರ್ಶಿಸುವ ಸಲುವಾಗಿ ಭಾನುವಾರ (ಮಾರ್ಚ್​ 13) ಸಂಜೆ 4 ಗಂಟೆಗೆ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ (Congress Working Committee) ಸಭೆ ಕರೆದಿದೆ. ಈ ಕಮಿಟಿ ಕಾಂಗ್ರೆಸ್​​ನ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಸಮಿತಿಯಾಗಿದ್ದು, ದೆಹಲಿಯ ಕಾಂಗ್ರೆಸ್​ ಪ್ರಧಾನ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂದು ಎಎನ್​ಐ ಸುದ್ದಿ ಮಾಧ್ಯಮ ವರದಿ ಮಾಡಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದಕ್ಕೆ ಕಾರಣ, ಸದ್ಯದ ರಾಜಕೀಯ ಪರಿಸ್ಥಿತಿ ಮತ್ತು ಪಕ್ಷದ ಪರಿಸ್ಥಿತಿ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.

ಸಾಮಾನ್ಯವಾಗಿ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ ದೇಶದ ಲೋಕಸಭಾ ಚುನಾವಣೆಯ ಮುನ್ಸೂಚನೆ ಎಂದೇ ಹೇಳಲಾಗುತ್ತದೆ. ಅಲ್ಲೀಗ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು ಇದು ಕಾಂಗ್ರೆಸ್ ಪಾಲಿಗೆ ಹೊಡೆತ. ಹಾಗೇ ಇನ್ನೊಂದು ಮುಖ್ಯ ಹಿನ್ನಡೆಯೆಂದರೆ ಪಂಜಾಬ್​. ಕಾಂಗ್ರೆಸ್​ ಸರ್ಕಾರ ಇರುವುದೇ ಮೂರು ರಾಜ್ಯಗಳಲ್ಲಾಗಿತ್ತು. ರಾಜಸ್ಥಾನ, ಪಂಜಾಬ್​ ಮತ್ತು ಛತ್ತೀಸ್​ಗಢ್​​ನಲ್ಲಿ. ಅದರಲ್ಲೀಗ ಪಂಜಾಬ್​ ಕೈತಪ್ಪಿತು. ಮಹಾರಾಷ್ಟ್ರದಲ್ಲಿ ಮೈತ್ರಿಯ ಒಂದು ಭಾಗ ಬಿಟ್ಟರೆ ಪೂರ್ಣ ಪ್ರಮಾಣದ ಸರ್ಕಾರವಿಲ್ಲ. ಇಡೀ ದೇಶವನ್ನಾಳಿದ್ದ ಪಕ್ಷವೀಗ ಕೇವಲ ಎರಡು ರಾಜ್ಯಗಳಲ್ಲಿ ಮಾತ್ರ ಸರ್ಕಾರ ಉಳಿಸಿಕೊಂಡಿದ್ದು ಸಣ್ಣಪುಟ್ಟ ಸೋಲಲ್ಲ. ಪಕ್ಷದ ಅಸ್ತಿತ್ವದ ದೃಷ್ಟಿಯಿಂದ ಆತ್ಮಾವಲೋಕನ ಅತ್ಯಗತ್ಯ ಎಂಬುದು ರಾಜಕೀಯ ತಜ್ಞರ ಅಭಿಪ್ರಾಯ.

ಪಂಚರಾಜ್ಯಗಳ ಚುನಾವಣೆಯಲ್ಲಿ ಸೋತ ಬೆನ್ನಲ್ಲೇ ಕಾಂಗ್ರೆಸ್​​ನ ಜಿ 23 ನಾಯಕರು ಮತ್ತೆ ಅಲರ್ಟ್ ಆಗಿದ್ದಾರೆ. ಕೂಡಲೇ ಎಐಸಿಸಿ ಸಭೆ ನಡೆಸಬೇಕು. ಕಾಂಗ್ರೆಸ್​ಗೆ ಕೂಡಲೇ ಬೇರೆ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು ಎಂದು ನಿನ್ನೆ (ಮಾರ್ಚ್​ 11) ಆಗ್ರಹಿಸಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಸೋತಾಗಲೇ ಈ ನಾಯಕರು ಹೊಸ ಅಧ್ಯಕ್ಷರ ನೇಮಕ, ಪಕ್ಷ ಸಂಘಟನೆ ಬೇಡಿಕೆಗಳನ್ನು ಇಟ್ಟಿದ್ದರು. ಆದರೆ ಅವರಿಗೆ ಸೋನಿಯಾ ಗಾಂಧಿ ಖಡಕ್​ ಎಚ್ಚರಿಕೆ ನೀಡಿದ್ದರು. ಹೀಗೆ ಪತ್ರ ಬರೆದಿದ್ದ ಕೆಲವರನ್ನು ಪ್ರಸಕ್ತ ಬಾರಿಯ ವಿಧಾನಸಭೆ ಚುನಾವಣೆಯ ಸ್ಟಾರ್​ ಪ್ರಚಾರಕ ಪಟ್ಟಿಯಿಂದ ಕೈಬಿಡಲಾಗಿತ್ತು.

2020ರಲ್ಲಿ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದ ಭೂಪೇಂದರ್​ ಸಿಂಗ್​ ಹೂಡಾ, ಮನೀಶ್ ತಿವಾರಿ, ಕಪಿಲ್ ಸಿಬಲ್​, ಗುಲಾಂ ನಬಿ ಆಜಾದ್​, ಆನಂದ್​ ಶರ್ಮಾ, ಅಖಿಲೇಶ್ ಪ್ರಸಾದ್ ಸಿಂಗ್​ ಇತರರನ್ನೊಳಗೊಂಡ ಜಿ 23 ನಾಯಕರು, ಕಾಂಗ್ರೆಸ್ ಕಾರ್ಯಕಾರಿ ಸಭೆಯನ್ನು ತೆಗೆದುಹಾಕಬೇಕು. ಈ ಸಿಡಬ್ಲ್ಯೂಸಿಯಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಒಂದೂ ಗಂಭೀರ ವಿಚಾರಗಳ ಚರ್ಚೆ, ಸಮಸ್ಯೆಗೆ ಪರಿಹಾರಗಳು ಸಿಗುತ್ತಿಲ್ಲ ಎಂದು ಹೇಳಿದ್ದರು.  ಆಗಿನಿಂದಲೂ ಈ ನಾಯಕರನ್ನು ರೆಬಲ್​ ಎಂದೇ ಪಕ್ಷದ ವರಿಷ್ಠರು ಭಾವಿಸಿದ್ದಾರೆ.

ಇದನ್ನೂ ಓದಿ: BIFFES: ಅಪ್ಪು ನಟನೆಯ ‘ಯುವರತ್ನ’ಗೆ ಪ್ರಶಸ್ತಿಯ ಗರಿ; ಇಲ್ಲಿದೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪ್ರಶಸ್ತಿ ವಿವರ

Published On - 5:05 pm, Sat, 12 March 22

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ