ಉತ್ತರ ಪ್ರದೇಶಕ್ಕೆ ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?-ನಿರ್ಧಾರ ಅವರ ಕೈಲಿದೆ ಎಂದ ಕಾಂಗ್ರೆಸ್​ ನಾಯಕ

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ನಂತರ ರಾಹುಲ್​ ಗಾಂಧಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದಾದ ಬಳಿಕ ಸೋನಿಯಾ ಗಾಂಧಿ ಆ ಸ್ಥಾನಕ್ಕೆ ಏರಿದ್ದಾರೆ.

ಉತ್ತರ ಪ್ರದೇಶಕ್ಕೆ ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?-ನಿರ್ಧಾರ ಅವರ ಕೈಲಿದೆ ಎಂದ ಕಾಂಗ್ರೆಸ್​ ನಾಯಕ
ಪ್ರಿಯಾಂಕಾ ಗಾಂಧಿ ವಾದ್ರಾ
Follow us
TV9 Web
| Updated By: Lakshmi Hegde

Updated on:Sep 19, 2021 | 9:59 AM

ಲಖನೌ:  ಉತ್ತರ ಪ್ರದೇಶದಲ್ಲಿ ಮುಂದಿನ ವಿಧಾನಸಭೆ ಚುನಾವಣೆ (Uttar Pradesh Assembly Election) ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi)  ನೇತೃತ್ವದಲ್ಲೇ ನಡೆಯಲಿದೆ ಎಂದು ಕಾಂಗ್ರೆಸ್​ ನಾಯಕ ಸಲ್ಮಾನ್​ ಖುರ್ಷಿದ್​ ಹೇಳಿದ್ದಾರೆ. ಇನ್ನು ಪ್ರಿಯಾಂಕಾ ಗಾಂಧಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾ ಎಂಬ ಬಗ್ಗೆ ನಾವೇನೂ ಹೇಳುವುದಿಲ್ಲ. ಅದನ್ನು ಅವರೇ ನಿರ್ಧರಿಸಬೇಕು ಎಂದು ಶನಿವಾರ ಸುದ್ದಿಗೋಷ್ಠಿಯ ವೇಳೆ ಹೇಳಿದ್ದಾರೆ. 

ರಾಷ್ಟ್ರಮಟ್ಟದ ನಾಯಕತ್ವದಲ್ಲಿ ಏನಾದೂ ಬದಲಾವಣೆಗಳು ಆಗಬಹುದಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್​ಗೆ ಈಗಾಗಲೇ ಅಧ್ಯಕ್ಷರು ಇದ್ದಾರೆ. ಹಾಗಾಗಿ ಬೇರೆ ಅಧ್ಯಕ್ಷರನ್ನು ನೇಮಕ ಮಾಡುವ ಅಗತ್ಯವಿಲ್ಲ. ಈಗಿರುವ ಅಧ್ಯಕ್ಷರ ಬಗ್ಗೆ ನಾವೆಲ್ಲ ಕಾಂಗ್ರೆಸ್​ ನಾಯಕರು, ಕಾರ್ಯಕರ್ತರು ತುಂಬ ಗೌರವ ಹೊಂದಿದ್ದೇವೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ತಿಳಿಸಿದರು. ಹಾಗೇ, ಕಾಂಗ್ರೆಸ್ಸಿಗರಲ್ಲದ ಜನರಿಗೆ ನಮ್ಮ ಪಕ್ಷದ ಅಧ್ಯಕ್ಷರ ಬಗ್ಗೆ ತೃಪ್ತಿಯಿಲ್ಲ ಎಂದು ಹೇಳಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ನಂತರ ರಾಹುಲ್​ ಗಾಂಧಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದಾದ ಬಳಿಕ ಸೋನಿಯಾ ಗಾಂಧಿ ಆ ಸ್ಥಾನಕ್ಕೆ ಏರಿದ್ದಾರೆ. ಬೇರೆ ಯಾರನ್ನಾದರೂ ನೇಮಕ ಮಾಡುವವರೆಗೆ ತಾವು ಆ ಸ್ಥಾನದಲ್ಲಿ ಮುಂದುವರಿಯುವುದಾಗಿ ಸೋನಿಯಾ ಗಾಂಧಿ ಹೇಳಿದ್ದರು. ಆದರೆ ಅಧ್ಯಕ್ಷ ಸ್ಥಾನಕ್ಕೆ ಇನ್ಯಾರನ್ನೂ ಆಯ್ಕೆ ಮಾಡಲು ಕಾಂಗ್ರೆಸ್​ಗೆ ಸಾಧ್ಯವಾಗಿಲ್ಲ. ಈ ಮಧ್ಯೆ ಕೆಲವರು ರಾಹುಲ್ ಗಾಂಧಿಯೇ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂದು ಒತ್ತಾಯಿಸುತ್ತಿದ್ದಾರೆ. ರಾಹುಲ್​ ಗಾಂಧಿ ಕಾಂಗ್ರೆಸ್​ ಅಧ್ಯಕ್ಷರಾಗಬೇಕು ಎಂದು ಕಾಂಗ್ರೆಸ್​ನ ಸಾಮಾಜಿಕ ಮಾಧ್ಯಮ ವಿಭಾಗ ಶನಿವಾರ ಒಮ್ಮತದಿಂದ ನಿರ್ಣಯ ಅಂಗೀಕಾರ ಮಾಡಿದೆ. ಕಳೆದ ವಾರ ದೆಹಲಿ ಪ್ರದೇಶ ಮಹಿಳಾ ಕಾಂಗ್ರೆಸ್​ ಕೂಡ ಇದೇ ರೀತಿಯ ನಿರ್ಣಯ ಪಾಸ್​ ಮಾಡಿದೆ.  ಅಂದಹಾಗೆ ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ಫೆಬ್ರವರಿ-ಮಾರ್ಚ್​​ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಜನಪ್ರಿಯ ಒಟಿಟಿಗೆ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾದ ರಾಮ್​ ಚರಣ್; ಇದಕ್ಕೆ ಅವರು ಪಡೆಯೋ ಹಣ ಇಷ್ಟೊಂದಾ?

Poetry : ಅವಿತಕವಿತೆ ; ‘ನಿನ್ನ ಸೇರಿ ಉಪ್ಪಾಗಲಾರೆ ಎಂದಿತು ತನ್ನೆಡೆ ಹರಿದುಬಂದ ನದಿ’

(Congress would contest in the Uttar Pradesh assembly polls under Priyanka Gandhi Vadra)

Published On - 9:51 am, Sun, 19 September 21

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ