ಜಿ20 ಶೃಂಗಸಭೆ: ಮೋದಿ ಹೋರ್ಡಿಂಗ್ ಕುರಿತು ಪವನ್ ಖೇಡಾ ಟ್ವೀಟ್​​ಗೆ ಬಿಜೆಪಿ ನಾಯಕರ ತಿರುಗೇಟು, ಕೊನೆಗೂ ಪೋಸ್ಟ್​ ಡಿಲೀಟ್

ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಸೆಪ್ಟೆಂಬರ್ 9 ಹಾಗೂ 10ರಂದು ಜಿ20 ಶೃಂಗಸಭೆ ನಡೆಯಲಿದೆ. ಇದಕ್ಕಾಗಿ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಜಿ20 ಹೋರ್ಡಿಂಗ್ಸ್​ ಕುರಿತು ಕಾಂಗ್ರೆಸ್ ನಾಯಕ ಪವನ್ ಖೇಡಾ(Pawan Khera) ಟ್ವೀಟ್ ಮಾಡಿ ಜನಪ್ರಿಯತೆ ಶ್ರೇಯಾಂಕದ ಆಧಾರದ ಮೇಲೆ ದೆಹಲಿಯಲ್ಲಿ ನರೇಂದ್ರ ಮೋದಿ ಹಾಗೂ ಇತರೆ ಜಾಗತಿಕ ನಾಯಕರ ಪೋಸ್ಟರ್​ಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು.

ಜಿ20 ಶೃಂಗಸಭೆ: ಮೋದಿ ಹೋರ್ಡಿಂಗ್ ಕುರಿತು ಪವನ್ ಖೇಡಾ ಟ್ವೀಟ್​​ಗೆ ಬಿಜೆಪಿ ನಾಯಕರ ತಿರುಗೇಟು, ಕೊನೆಗೂ ಪೋಸ್ಟ್​ ಡಿಲೀಟ್
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on: Sep 08, 2023 | 9:46 AM

ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಸೆಪ್ಟೆಂಬರ್ 9 ಹಾಗೂ 10ರಂದು ಜಿ20 ಶೃಂಗಸಭೆ(G20 Summit) ನಡೆಯಲಿದೆ. ಇದಕ್ಕಾಗಿ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಜಿ20 ಹೋರ್ಡಿಂಗ್ಸ್​ ಕುರಿತು ಕಾಂಗ್ರೆಸ್ ನಾಯಕ ಪವನ್ ಖೇಡಾ(Pawan Khera) ಟ್ವೀಟ್ ಮಾಡಿ ಜನಪ್ರಿಯತೆ ಶ್ರೇಯಾಂಕದ ಆಧಾರದ ಮೇಲೆ ದೆಹಲಿಯಲ್ಲಿ ನರೇಂದ್ರ ಮೋದಿ ಹಾಗೂ ಇತರೆ ಜಾಗತಿಕ ನಾಯಕರ ಪೋಸ್ಟರ್​ಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು.

ಪವನ್​ಖೇಡಾ ಅವರ ಪೋಸ್ಟ್​ಗೆ ಬಿಜೆಪಿ ತಿರುಗೇಟು ನೀಡಿದ್ದು, ಕಾಂಗ್ರೆಸ್ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಹೇಳಿದೆ, ಅಷ್ಟೇ ಅಲ್ಲದೆ ಬಿಜೆಪಿ ನಾಯಕ ವಿಜಯ್ ಗೋಯೆಲ್ ಟ್ವೀಟ್ ಮಾಡಿದ್ದು, ಅಂತಹ ಯಾವುದೇ ಹೋರ್ಡಿಂಗ್ಸ್​ ನಾವು ಹಾಕಿಲ್ಲ ಈ ಸುದ್ದಿ ಸಂಪೂರ್ಣ ಸುಳ್ಳು ಎಂದು ಹೇಳಿದ್ದಾರೆ. ಭಾರತ ವಿಶ್ವಕ್ಕೆ ಆತಿಥ್ಯ ವಹಿಸಲು ಹೊರಟಿರುವಾಗ ಕಾಂಗ್ರೆಸ್ ಇಂತಹ ಹೊಲಸು ರಾಜಕಾರಣ ಮಾಡಬಾರದು ಎಂದರು.

ನಮ್ಮ ಅತಿಥಿಗಳನ್ನು ನಾವು ಹೀಗೆಯೇ ಸ್ವಾಗತಿಸುತ್ತೇವೆಯೇ? ಮಾಧ್ಯಮಗಳ ವರದಿ ಪ್ರಕಾರ, ಪೋಸ್ಟರ್​ ಜತೆಗೆ ತಮ್ಮ ಪೋಸ್ಟ್​ನಲ್ಲಿ ಪವನ್ ಖೇಡಾರನ್ನು ವಿಜಯ್ ಗೋಯಲ್ ಅವರನ್ನು ಟೀಕಿಸಿದ್ದಾರೆ ಮತ್ತು ಪಿಎಂ ಮೋದಿಯನ್ನು ವಿಶ್ವದ ಜನಪ್ರಿಯ ನಾಯಕ ಎಂದು ಅಭಿನಂದಿಸಲಾಗಿದೆ. ಈ ಪೋಸ್ಟರ್‌ನಲ್ಲಿ ಪ್ರಧಾನಿ ಮೋದಿಯವರಲ್ಲದೆ, ಹಲವು ದೇಶಗಳ ನಾಯಕರ ಚಿತ್ರಗಳನ್ನು ಸಹ ಸೇರಿಸಲಾಗಿದೆ ಎಂದುದ್ದಾರೆ.

ಪ್ರಧಾನಿ ಮೋದಿ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಗ್ಲೋಬಲ್ ಲೀಡರ್ ಅಪ್ರೂವಲ್ ಟ್ರ್ಯಾಕರ್ ಮಾರ್ನಿಂಗ್ ಕನ್ಸಲ್ಟ್ ತನ್ನ ವರದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಎಂದು ಹೇಳಿದೆ. ಈ ಸಂಶೋಧನಾ ಸಂಸ್ಥೆಯು 22 ನಾಯಕರ ಮೇಲೆ ಸಮೀಕ್ಷೆ ನಡೆಸಿದ್ದು, ಅದರಲ್ಲಿ ಪ್ರಧಾನಿ ಮೋದಿ ಮೊದಲ ಸ್ಥಾನದಲ್ಲಿದ್ದಾರೆ.

ಮತ್ತಷ್ಟು ಓದಿ: ಪ್ರಧಾನಿ ಮೋದಿಯ ಮೇಕ್ ಇನ್ ಇಂಡಿಯಾಗೆ ಫಾಕ್ಸ್​​ಕಾನ್ ಅಧ್ಯಕ್ಷ ಯಾಂಗ್ ಲಿಯು ಬೆಂಬಲ

ಕಾಂಗ್ರೆಸ್​ನ ಈ ರಾಜಕಾರಣ ನಾಚಿಕೆಗೇಡಿನದ್ದು: ಅಮಿತ್ ಮಾಳವೀಯ ಪವನ್ ಖೇಡಾ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದು ಆರೋಪಿಸಿ ವಿಜಯ್ ಗೋಯೆಲ್ ಟ್ವೀಟ್ ಮಾಡಿದ ಬಳಿಕ ಪವನ್ ತಮ್ಮ ಪೋಸ್ಟ್​ನ್ನು ಡಿಲೀಟ್ ಮಾಡಿದ್ದಾರೆ. ಇದೇ ವೇಳೆ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಕೂಡ ಈ ಹೋರ್ಡಿಂಗ್ ಹೊಸದಲ್ಲ ಎಂದು ಹೇಳಿದ್ದಾರೆ. ಈ ಚಿತ್ರ ಹಳೆಯದಾಗಿದ್ದು, ಇಂತಹ ರಾಜಕಾರಣ ಮಾಡಲು ಕಾಂಗ್ರೆಸ್ ನಾಚಿಕೆಯಾಗಬೇಕು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್