Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಯಿಂದ ಕಾಂಗ್ರೆಸ್‌ ನಾಯಕ ಅಧೀರ್ ರಂಜನ್ ಚೌಧರಿ ಅಮಾನತು

ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವುದು ಇದೇ ಮೊದಲು. ಈ ವಿಷಯವನ್ನು ವಿಶೇಷಾಧಿಕಾರ ಸಮಿತಿಗೆ ಒಪ್ಪಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ನಾನು ಯಾರಿಗೂ ತೊಂದರೆ ಮಾಡುವ ಉದ್ದೇಶವನ್ನು ಹೊಂದಿರಲಿಲ್ಲ. ನಾನು ಏನನ್ನೂ ತಪ್ಪಾಗಿ ಹೇಳಿಲ್ಲ ಎಂದು ಮಾಧ್ಯಮದವರೊಂದಿಗೆ ಮಾತನಾಡಿದ ಚೌಧರಿ ಹೇಳಿದ್ದಾರೆ.

ಲೋಕಸಭೆಯಿಂದ ಕಾಂಗ್ರೆಸ್‌ ನಾಯಕ ಅಧೀರ್ ರಂಜನ್ ಚೌಧರಿ ಅಮಾನತು
ಅಧೀರ್ ರಂಜನ್ ಚೌಧುರಿ
Follow us
ರಶ್ಮಿ ಕಲ್ಲಕಟ್ಟ
|

Updated on:Aug 10, 2023 | 9:00 PM

ದೆಹಲಿ ಆಗಸ್ಟ್ 10: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ ನೀಡಿದ ಆರೋಪದ ಮೇಲೆ ಲೋಕಸಭೆಯಲ್ಲಿ(Lok sabha) ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ (Adhir Ranjan Chowdhury) ಅವರನ್ನು ಸದನದಿಂದ ಅಮಾನತುಗೊಳಿಸಲಾಗಿದೆ. ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವುದು ಇದೇ ಮೊದಲು. ಈ ವಿಷಯವನ್ನು ವಿಶೇಷಾಧಿಕಾರ ಸಮಿತಿಗೆ ಒಪ್ಪಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಚೌಧರಿ ಅವರ ಅಮಾನತು ಪ್ರಸ್ತಾವನೆಯನ್ನು ಮಂಡಿಸಿದ್ದಾರೆ. “ಸದಸ್ಯ ಮತ್ತು ಅಧ್ಯಕ್ಷರ ಅಧಿಕಾರವನ್ನು ಸಂಪೂರ್ಣವಾಗಿ ಕಡೆಗಣಿಸಿ ಅಧೀರ್ ರಂಜನ್ ಚೌಧುರಿಯವರ ಉದ್ದೇಶಪೂರ್ವಕ ಮತ್ತು ಪುನರಾವರ್ತಿತ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿದ ಈ ಸದನವು ಅವರ ದುಷ್ಕೃತ್ಯದ ವಿಷಯವನ್ನು ಹೆಚ್ಚಿನ ತನಿಖೆಗಾಗಿ ಸದನದ ವಿಶೇಷಾಧಿಕಾರಗಳ ಸಮಿತಿಗೆ ಉಲ್ಲೇಖಿಸಲು ನಿರ್ಧರಿಸುತ್ತದೆ. ಸದನಕ್ಕೆ ವರದಿ ಮತ್ತು ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಅಧೀರ್ ರಂಜನ್ ಚೌಧರಿ ಅವರನ್ನು ಸದನದ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಪ್ರಸ್ತಾವನೆಯಲ್ಲಿ ಹೇಳಿದೆ.

ನಾನು ಯಾರಿಗೂ ತೊಂದರೆ ಮಾಡುವ ಉದ್ದೇಶವನ್ನು ಹೊಂದಿರಲಿಲ್ಲ. ನಾನು ಏನನ್ನೂ ತಪ್ಪಾಗಿ ಹೇಳಿಲ್ಲ ಎಂದು ಮಾಧ್ಯಮದವರೊಂದಿಗೆ ಮಾತನಾಡಿದ ಚೌಧರಿ ಹೇಳಿದ್ದಾರೆ.

ಗುರುವಾರ ಬೆಳಗ್ಗೆ ಬಿಜೆಪಿ ಸದಸ್ಯರ ತೀವ್ರ ಆಕ್ಷೇಪದ ನಂತರ ಪ್ರಧಾನಿ ನರೇಂದ್ರ ಮೋದಿಯವರವ ವಿರುದ್ಧ ಚೌಧರಿಯವರ ಹೇಳಿಕೆಯನ್ನು ಕಲಾಪದ ದಾಖಲೆಯಿಂದ ತೆಗೆದುಹಾಕಲಾಗಿದೆ. ಪ್ರಲ್ಹಾದ್ ಜೋಶಿ ಅವರು ಆದೇಶದ ಪ್ರಶ್ನೆಯನ್ನು ಎತ್ತಿದ್ದು, ಕಾಂಗ್ರೆಸ್ ಸದಸ್ಯರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ: ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತೀರಿ, ಆದರೆ ಲೈಂಗಿಕ ಕಿರುಕುಳ ನೀಡಿದ ಸಂಸದರ ಬಗ್ಗೆ ಯಾಕೆ ಮಾತನಾಡಲ್ಲ?: ಮಹುವಾ ಮೊಯಿತ್ರಾ

ನರೇಂದ್ರ ಮೋದಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ನಂತರ ಬಿಜೆಪಿಯ ವೀರೇಂದ್ರ ಅವಸ್ಥಿ ಮತ್ತು ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಅವರ ನಡವಳಿಕೆಯು ಸೌಜನ್ಯ ಉಲ್ಲಂಘನೆಯಾಗಿದೆ ಎಂದು ಸ್ಪೀಕರ್ ಹೇಳಿದ್ದಾರೆ.

ವೀರೇಂದ್ರ ಅವಸ್ತಿ ಅವರು ಕ್ಷಮೆಯಾಚಿಸಿದ್ದು, ಪ್ರಧಾನಿ ವಿರುದ್ಧ ನಕಾರಾತ್ಮಕ ಕಾಮೆಂಟ್‌ಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:57 pm, Thu, 10 August 23

VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ