Naa Nayaki Convention ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಹುಲ್ ಗಾಂಧಿಯವರ(Rahul Gandhi) "ಭಾರತ್ ಜೋಡೋ ಯಾತ್ರೆ"ಯ ಸಂದೇಶವನ್ನು ದೃಢಪಡಿಸುವ ಉದ್ದೇಶದಿಂದ ಪ್ರಿಯಾಂಕಾ "ಹಾತ್ ಸೆ ಹಾತ್ ಜೋಡೋ" ಮೆಗಾ ಸಮಾವೇಶದಲ್ಲಿ ಮಹಿಳಾ ಕೇಂದ್ರಿತ ಭರವಸೆಯನ್ನು ಘೋಷಿಸಲಿದ್ದಾರೆ.
ಬೆಂಗಳೂರು: ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಎರಡನೇ ದೊಡ್ಡ ಭರವಸೆಯನ್ನು ಘೋಷಿಸಲು ಕಾಂಗ್ರೆಸ್ (Congress) ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ(Priyanka Gandhi Vadra) ನಾಳೆ (ಸೋಮವಾರ) ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ರಾಹುಲ್ ಗಾಂಧಿಯವರ(Rahul Gandhi) “ಭಾರತ್ ಜೋಡೋ ಯಾತ್ರೆ”ಯ ಸಂದೇಶವನ್ನು ದೃಢಪಡಿಸುವ ಉದ್ದೇಶದಿಂದ ಪ್ರಿಯಾಂಕಾ “ಹಾತ್ ಸೆ ಹಾತ್ ಜೋಡೋ” ಮೆಗಾ ಸಮಾವೇಶದಲ್ಲಿ ಮಹಿಳಾ ಕೇಂದ್ರಿತ ಭರವಸೆಯನ್ನು ಘೋಷಿಸಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಘಟಕದ ಅಧ್ಯಕ್ಷ ಡಿಕೆ ಶಿವಕುಮಾರ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ. ಸುಮಾರು 15,000 ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ.ರಾಜ್ಯದಲ್ಲಿ ಮಹಿಳೆಯರನ್ನು ಕೇಂದ್ರೀಕರಿಸಿ ಕಾಂಗ್ರೆಸ್ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.
ಆಡಳಿತಾರೂಢ ಬಿಜೆಪಿ ತನ್ನ ಚುನಾವಣಾ ಯಂತ್ರದ ಸಾಂಪ್ರದಾಯಿಕ ನಡೆಗಳೊಂದಿಗೆ ಮುನ್ನಡೆಯುತ್ತಿರುವ ಕಾರಣ ರಾಜ್ಯದಲ್ಲಿ ಕಾಂಗ್ರೆಸ್ ಮರಳಿ ಗೆಲ್ಲಲು ನಿರ್ಧರಿಸಿದ್ದು ತನ್ನ ಪ್ರಚಾರವನ್ನು ಚುರುಕುಗೊಳಿಸಿದೆ. ಇತ್ತ ಬಿಜೆಪಿ ಕೂಡಾ ಪ್ರಚಾರ ಚುರುಕಾಗಿಸಿದ್ದು ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ, ಅಮಿತ್ ಶಾ ಅವರಲ್ಲದೆ, ಪ್ರಧಾನಿ ನರೇಂದ್ರ ಮೋದಿ ಕೂಡ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.
ಕಳೆದ ವಾರ ಪ್ರಧಾನಿ ಮೋದಿ ಉತ್ತರ ಕರ್ನಾಟಕದ ಹುಬ್ಬಳ್ಳಿಯಲ್ಲಿ ಯುವಜನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಜನವರಿ 19ರಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಬಾರಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳ ತಾಂಡಾ ನಿವಾಸಿಗಳಿಗೆ ಭೂಹಕ್ಕು ವಿತರಿಸುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವ ಅವರು ಜಲ ಜೀವನ್ ಮಿಷನ್ ಅಡಿಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಇದನ್ನೂ ಓದಿ:ಪಂಜಾಬ್ನಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜತೆಯಾದ ಸಿಧು ಮೂಸೆವಾಲಾರ ಅಪ್ಪ
ಈ ವಾರದ ಆರಂಭದಲ್ಲಿ, ಕಾಂಗ್ರೆಸ್ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಅನ್ನು ಘೋಷಿಸಿದೆ.
ಆಡಳಿತಾರೂಢ ಮೈತ್ರಿಕೂಟದ ಶಾಸಕರ ಒಂದು ಭಾಗದಿಂದ ನಿರ್ಗಮಿಸಿದ ನಂತರ ಮಿತ್ರಪಕ್ಷ ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರವು ಪತನಗೊಂಡಿದ್ದರಿಂದ ಕಾಂಗ್ರೆಸ್ 2019 ರಲ್ಲಿ ಕರ್ನಾಟಕದಲ್ಲಿ ಅಧಿಕಾರವನ್ನು ಕಳೆದುಕೊಂಡಿತು. ರಾಜ್ಯದಲ್ಲಿ ಪ್ರಬಲ ನೆಲೆಯನ್ನು ಹೊಂದಿರುವ ಪಕ್ಷವು ತನ್ನ ರಾಜ್ಯ ಮುಖ್ಯಸ್ಥ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬಿಜೆಪಿಯನ್ನು ಸೋಲಿಸಲು ದೊಡ್ಡ ಪ್ರಯತ್ನವನ್ನು ಮಾಡುವ ನಿರೀಕ್ಷೆಯಿದೆ.
ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಂಟಿಯಾಗಿ ನಡೆಸುತ್ತಿರುವ ‘ಪ್ರಜಾಧ್ವನಿ ಯಾತ್ರೆ’ – ಬಸ್ ರ್ಯಾಲಿಯ ಭಾಗವಾಗಿ ಪಕ್ಷವು ಬೃಹತ್ ಜನಸಂಪರ್ಕ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.
1924 ರಲ್ಲಿ ಮಹಾತ್ಮಾ ಗಾಂಧಿಯವರು ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಸ್ಮಾರಕವಾದ “ವೀರ್ ಸೌಧ” ದಿಂದ ಕಳೆದ ವಾರ ಪ್ರವಾಸ ಪ್ರಾರಂಭವಾಗಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ