AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ಕೋರಿ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ

ಏಪ್ರಿಲ್ 22 ರಂದು ಲೋಕಸಭೆಯ ಸಚಿವಾಲಯದ ನೋಟಿಸ್‌ನ ಮೇರೆಗೆ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿದ ರಾಹುಲ್, ತೀರ್ಪಿನ ವಿರುದ್ಧ ಸೂರತ್ ಸೆಷನ್ಸ್ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ ಶಿಕ್ಷೆಗೆ ತಡೆ ಕೋರಿದರು.

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ಕೋರಿ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 25, 2023 | 9:04 PM

Share

ಮುಖ್ಯಾಂಶಗಳು

  • ನ್ಯಾಯಾಲಯದ ಏಪ್ರಿಲ್ 20 ರ ಆದೇಶದ ವಿರುದ್ಧ ರಾಹುಲ್ ಮೇಲ್ಮನವಿ ಸಲ್ಲಿಸಿದ್ದಾರೆ
  • ಏಪ್ರಿಲ್ 22 ರಂದು ಲೋಕಸಭೆಯ ಸಚಿವಾಲಯದ ನೋಟಿಸ್‌ನ ಮೇರೆಗೆ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿದ ರಾಹುಲ್
  • ಏಪ್ರಿಲ್ 3 ರಂದು, ರಾಹುಲ್ ಗಾಂಧಿಯವರು ಮ್ಯಾಜಿಸ್ಟ್ರೇಟ್ ತೀರ್ಪಿನ ವಿರುದ್ಧ ಸೆಷನ್ಸ್ ನ್ಯಾಯಾಲಯಕ್ಕೆ ತಮ್ಮ ಮನವಿಯನ್ನು ಸಲ್ಲಿಸಿದ್ದರು.

ಮಾನನಷ್ಟ ಮೊಕದ್ದಮೆಯಲ್ಲಿ (Defamation Case) ಶಿಕ್ಷೆಗೆ ತಡೆಯಾಜ್ಞೆ ಕೋರಿ ಸೂರತ್ ಸೆಷನ್ಸ್ ಕೋರ್ಟ್ ತನ್ನ ಮನವಿಯನ್ನು ತಿರಸ್ಕರಿಸಿದ ದಿನಗಳ ನಂತರ,  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಗುಜರಾತ್ ಹೈಕೋರ್ಟ್‌ಗೆ (Gujarat High Court) ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯದ ಏಪ್ರಿಲ್ 20 ರ ಆದೇಶದ ವಿರುದ್ಧ ರಾಹುಲ್ ಮೇಲ್ಮನವಿ ಸಲ್ಲಿಸಿದ್ದಾರೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರಾಹುಲ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿತು ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಈ ತೀರ್ಪಿನಿಂದಾಗಿ ಅವರು ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡರು. ಏಪ್ರಿಲ್ 22 ರಂದು ಲೋಕಸಭೆಯ ಸಚಿವಾಲಯದ ನೋಟಿಸ್‌ನ ಮೇರೆಗೆ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿದ ರಾಹುಲ್, ತೀರ್ಪಿನ ವಿರುದ್ಧ ಸೂರತ್ ಸೆಷನ್ಸ್ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ ಶಿಕ್ಷೆಗೆ ತಡೆ ಕೋರಿದರು. ಒಂದು ವೇಳೆ ದೋಷಾರೋಪಣೆಗೆ ತಡೆ ನೀಡಿದರೆ, ನ್ಯಾಯಾಲಯದ ಅಂತಿಮ ತೀರ್ಪಿನವರೆಗೆ ಲೋಕಸಭಾ ಸಂಸದರಾಗಿ ಅವರ ಅನರ್ಹತೆಯನ್ನು ಹಿಂಪಡೆಯಲಾಗುತ್ತದೆ.

ಈ ಕಾನೂನು ಹೋರಾಟ ನಡೆಸುತ್ತಿರುವ ಕಾಂಗ್ರೆಸ್‌ನ ಹಿರಿಯ ಸಂಸದ ಮತ್ತು ವಕೀಲ ಅಭಿಷೇಕ್ ಸಿಂಘ್ವಿ ಕಾನೂನು ಮೆಟ್ಟಿಲು ಇದೆ. ಕೆಲವರು ಸೂಚಿಸಿದಂತೆ ರಾಹುಲ್ ನೇರವಾಗಿ ಸುಪ್ರೀಂ ಕೋರ್ಟ್‌ಗೆ ಹೋಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.  ನಾವು ನೇರವಾಗಿ ಸುಪ್ರೀಂಕೋರ್ಟ್‌ಗೆ ಹೋದರೆ ಮತ್ತು ನ್ಯಾಯಾಧೀಶರು ನಮಗೆ ಮೊದಲು ಕೆಳ ನ್ಯಾಯಾಲಯಗಳಿಗೆ ಹೋಗಬೇಕಿತ್ತು ಎಂದು ಹೇಳಿದರೆ, ಇದನ್ನು ಸಲಹೆ ಮಾಡುವವರೇ ಮೊದಲು ನಮ್ಮನ್ನು ಟೀಕಿಸುತ್ತಾರೆ ಎಂದು ಸಿಂಘ್ವಿ ಹೇಳಿದ್ದಾರೆ.

ಏಪ್ರಿಲ್ 3 ರಂದು, ರಾಹುಲ್ ಗಾಂಧಿಯವರು ಮ್ಯಾಜಿಸ್ಟ್ರೇಟ್ ತೀರ್ಪಿನ ವಿರುದ್ಧ ಸೆಷನ್ಸ್ ನ್ಯಾಯಾಲಯಕ್ಕೆ ತಮ್ಮ ಮನವಿಯನ್ನು ಸಲ್ಲಿಸಿದ್ದರು. ನಂತರ ಅವರ ಮನವಿ ಇತ್ಯರ್ಥವಾಗುವವರೆಗೆ ಅವರಿಗೆ ಜಾಮೀನು ನೀಡಲಾಯಿತು. ನನ್ನ ಅನರ್ಹತೆಯು ಸರಿಪಡಿಸಲಾಗದ ನಷ್ಟ ಮತ್ತು ಬದಲಾಯಿಸಲಾಗದ ಗಾಯ ಎಂದು ರಾಹುಲ್ ಗಾಂಧಿಯವರು ಸೆಷನ್ಸ್ ನ್ಯಾಯಾಲಯಕ್ಕೆ ತಿಳಿಸಿದರು.

ಇದನ್ನೂ ಓದಿಏಪ್ರಿಲ್ 27ರಂದು ಚೀನಾ- ಭಾರತ ರಕ್ಷಣಾ ಸಚಿವರ ಭೇಟಿ; ಗಾಲ್ವಾನ್ ಸಂಘರ್ಷ ನಂತರ ಇದು ಮೊದಲನೇ ಸಭೆ

ದೋಷಾರೋಪಣೆ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಯಿಂದ ರಾಹುಲ್ ಗಾಂಧಿ ಎಂಟು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಾಗುತ್ತಾರೆ. ಉನ್ನತ ನ್ಯಾಯಾಲಯವು ಅವರ ಅಪರಾಧವನ್ನು ರದ್ದುಗೊಳಿಸಿದರೆ ಅಥವಾ ಅವರು ಶಿಕ್ಷೆಯನ್ನು ಎರಡು ವರ್ಷಗಳಿಗಿಂತಲೂ ಕಡಿಮೆಗೊಳಿಸಿದರೆ ಮತ್ತೆ ಅರ್ಹತೆಯನ್ನು ಪಡೆಯಬಹುದು.

2019 ರ ಚುನಾವಣೆಗೆ ಪೂರ್ವಭಾವಿಯಾಗಿ ಕೋಲಾರದಲ್ಲಿ ಮಾಡಿದ ಭಾಷಣದಲ್ಲಿ ಮೋದಿ ಉಪನಾಮದ ಹೇಳಿಕೆ ಮಾನಹಾನಿಕರವಲ್ಲ ಎಂದು ರಾಹುಲ್ ಗಾಂಧಿ ವಾದಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿ ಅವರ ಈ ಹೇಳಿಕೆ “ಬಾಲಿಶ, ದುರಹಂಕಾರದ ಪ್ರದರ್ಶನ” ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!