AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರು ಗೆದ್ದಿದ್ದು ಒಂದೇ ರಾಜ್ಯ ಆಗಿದ್ದರೂ ಎಷ್ಟೊಂದು ಸದ್ದು ಮಾಡ್ತಿದ್ದಾರೆ: ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಬಗ್ಗೆ ಹಿಮಂತ ಶರ್ಮಾ

ಕಾಂಗ್ರೆಸ್‌ನ ಗೆಲುವಿನ ಪ್ರಭಾವ ಇತರ ರಾಜ್ಯಗಳ ಮೇಲೆಯೂ ಇರುತ್ತದೆ ಎಂಬ ವಾದವನ್ನು ತಳ್ಳಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹಲವು ರಾಜ್ಯಗಳಲ್ಲಿ ಚುನಾವಣೆ ಗೆದ್ದ ನಂತರವೂ ಬಿಜೆಪಿ ಅಷ್ಟೊಂದು ಸದ್ದು ಮಾಡಿಲ್ಲ ಎಂದು ಹೇಳಿದ್ದಾರೆ.

ಅವರು ಗೆದ್ದಿದ್ದು ಒಂದೇ ರಾಜ್ಯ ಆಗಿದ್ದರೂ ಎಷ್ಟೊಂದು ಸದ್ದು ಮಾಡ್ತಿದ್ದಾರೆ: ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಬಗ್ಗೆ ಹಿಮಂತ ಶರ್ಮಾ
ಹಿಮಂತ ಬಿಸ್ವ ಶರ್ಮಾ
ರಶ್ಮಿ ಕಲ್ಲಕಟ್ಟ
|

Updated on: May 14, 2023 | 9:02 PM

Share

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka assembly elections )ಕಾಂಗ್ರೆಸ್‌ನ (Congress) ಗೆಲುವಿನ ಪ್ರಭಾವ ಇತರ ರಾಜ್ಯಗಳ ಮೇಲೆಯೂ ಇರುತ್ತದೆ ಎಂಬ ವಾದವನ್ನು ತಳ್ಳಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma), ಹಲವು ರಾಜ್ಯಗಳಲ್ಲಿ ಚುನಾವಣೆ ಗೆದ್ದ ನಂತರವೂ ಬಿಜೆಪಿ ಅಷ್ಟೊಂದು ಸದ್ದು ಮಾಡಿಲ್ಲ ಎಂದು ಹೇಳಿದ್ದಾರೆ. ಶರ್ಮಾ ಅವರು ತೆಲಂಗಾಣದ ಕರೀಂನಗರದಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಆಯೋಜಿಸಿದ್ದ ‘ಹಿಂದೂ ಏಕತಾ ಯಾತ್ರೆ’ಯಲ್ಲಿ ಮಾತನಾಡುತ್ತಿದ್ದರು. ಈ ವರ್ಷ ವಿಧಾನಸಭಾ ಚುನಾವಣೆಗಳು ನಡೆಯಲಿರುವ ನೆರೆಯ ತೆಲಂಗಾಣದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿನ ಪ್ರಭಾವದ ಬಗ್ಗೆ ಕೇಳಿದಾಗ, ಶರ್ಮಾ ಅವರು ಸಚಿನ್ ತೆಂಡೂಲ್ಕರ್ ಆಗಾಗ್ಗೆ ದ್ವಿಶತಕಗಳನ್ನು ಗಳಿಸಿದರು. ಕೆಲವೊಮ್ಮೆ ಅವರು ಶೂನ್ಯಕ್ಕೆ ಔಟಾದರು. ಅವರು (ಕಾಂಗ್ರೆಸ್) ಕೇವಲ ಒಂದು ರಾಜ್ಯದಲ್ಲಿ ಗೆದ್ದಿದ್ದಾರೆ. ಅದರ ಬಗ್ಗೆ ತುಂಬಾ ಸದ್ದು ಮಾಡುತ್ತಿದ್ದಾರೆ. ನಾವು ಹಲವಾರು ರಾಜ್ಯಗಳಲ್ಲಿ ಗೆದ್ದಿದ್ದೇವೆ ಆದರೆ ಇಷ್ಟೊಂದು ಬೀಗಲಿಲ್ಲ ಎಂದಿದ್ದಾರೆ.

ತೆಲುಗು ಹನುಮಾನ್ ಜಯಂತಿಯಂದು ನಡೆದ ಹಿಂದೂ ಏಕತಾ ಯಾತ್ರೆಯಲ್ಲಿ ಮುಖ್ಯ ಅತಿಥಿಯಾಗಿ ಶರ್ಮಾ ಭಾಗವಹಿಸಿದ್ದಾರೆ. ರಾಜ್ಯ ಬಿಜೆಪಿ ಪ್ರಕಾರ, ವಿವಾದಾತ್ಮಕ ಚಲನಚಿತ್ರ ‘ದಿ ಕೇರಳ ಸ್ಟೋರಿ’ ನಿರ್ದೇಶಕರು, ಇತರ ಸಿಬ್ಬಂದಿ ಸದಸ್ಯರು ಭಾಗವಹಿಸಿದ್ದಾರೆ. ಸುಮಾರು ಒಂದು ಲಕ್ಷ ಜನರು ಯಾತ್ರೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಬಿಜೆಪಿ ಹೇಳಿದೆ.

ಹಿಂದೂ ಏಕತಾ ಯಾತ್ರೆಯ ಉದ್ದೇಶವು ಭಾರತ್ ರಾಷ್ಟ್ರ ಸಮಿತಿ (BRS) ಸರ್ಕಾರದ ಅಡಿಯಲ್ಲಿ ತೆಲಂಗಾಣದ ಹಿಂದೂಗಳಿಗೆ ಮಾಡಿದ ಅನ್ಯಾಯಗಳನ್ನು ಎತ್ತಿ ತೋರಿಸುತ್ತದೆ. ಇದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಎಂಐಎಂ) ಜೊತೆಗೆ ಮತ್ತು ಈ ಧೋರಣೆಯನ್ನು ಹೊಂದಿದೆ. ರಾಜ್ಯವು ಇಸ್ಲಾಮಿಕ್ ಉಗ್ರರಿಗೆ ಸುರಕ್ಷಿತ ಆಶ್ರಯ ತಾಣವಾಗಿದೆ ಎಂದು ಬಂಡಿ ಸಂಜಯ್ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ಇದನ್ನೂ ಓದಿ: Fact Check: ವೈರಲ್ ವಿಡಿಯೊದಲ್ಲಿ ತೋರಿಸಿದ್ದು ನಿರ್ದಿಷ್ಟ ಭಾಗವಷ್ಟೇ; ಭಟ್ಕಳದಲ್ಲಿ ಇಸ್ಲಾಂ ಬಾವುಟ ಜತೆ ಬೇರೆ ಧ್ವಜಗಳೂ ಇತ್ತು

ಏತನ್ಮಧ್ಯೆ, ಮುಂದಿನ ಮುಖ್ಯಮಂತ್ರಿಯನ್ನು ನಿರ್ಧರಿಸಲು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಡಿಕೆ ಶಿವಕುಮಾರ್ ಆಕಾಂಕ್ಷಿಗಳಾಗಿದ್ದಾರೆ. ಎಐಸಿಸಿ ವೀಕ್ಷಕರು ಪಕ್ಷದ ಶಾಸಕರ ಅಭಿಪ್ರಾಯವನ್ನು ಹೈಕಮಾಂಡ್‌ಗೆ ತಲುಪಿಸಿ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಎಲ್ಲವೂ ಸುಸೂತ್ರವಾಗಿ ನಡೆದಿದ್ದು, ಆದಷ್ಟು ಬೇಗ ಸರ್ಕಾರ ರಚನೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!