Covid Lockdown: ಕೋವಿಡ್ 2ನೇ ಅಲೆಗೆ ಕಡಿವಾಣ ಹಾಕಲು ಲಾಕ್​ಡೌನ್ ಹೇರಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್​ ಸೂಚನೆ

‘ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಲಾಕ್​ಡೌನ್ ಹೇರುವ ಬಗ್ಗೆಯೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಲೋಚಿಸಬೇಕು’ ಎಂದು ಸುಪ್ರೀಂಕೋರ್ಟ್​ ಸರ್ಕಾರಗಳಿಗೆ ಸಲಹೆ ಮಾಡಿದೆ.

Covid Lockdown: ಕೋವಿಡ್ 2ನೇ ಅಲೆಗೆ ಕಡಿವಾಣ ಹಾಕಲು ಲಾಕ್​ಡೌನ್ ಹೇರಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್​ ಸೂಚನೆ
ಸುಪ್ರೀಂಕೋರ್ಟ್​
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:May 03, 2021 | 10:34 AM

ದೆಹಲಿ: ‘ದೇಶದಲ್ಲಿ ಕೊರೊನಾ 2ನೇ ಅಲೆಯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಹೆಚ್ಚು ಜನರು ಸೇರುವ, ಸೂಪರ್ ಸ್ಪ್ರೆಡರ್ ಕಾರ್ಯಕ್ರಮಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಲಾಕ್​ಡೌನ್ ಹೇರುವ ಬಗ್ಗೆಯೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಲೋಚಿಸಬೇಕು’ ಎಂದು ಸುಪ್ರೀಂಕೋರ್ಟ್​ ಭಾನುವಾರ ರಾತ್ರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಲಹೆ ಮಾಡಿದೆ.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಭಾನುವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹಲವು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದೆ. ‘ಲಾಕ್​ಡೌನ್​ನ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳ ಬಗ್ಗೆ ನಮಗೆ ಅರಿವಿದೆ. ಆದರಲ್ಲಿಯೂ ಬಡವರ ಮೇಲೆ ಲಾಕ್​ಡೌನ್​ನ ಪರಿಣಾಮಗಳು ತೀವ್ರತರವಾಗಿರುತ್ತವೆ ಎಂಬುದು ನಮಗೆ ತಿಳಿದಿದೆ. ಲಾಕ್​ಡೌನ್ ಹೇರಿದರೆ ಈ ಸಮುದಾಯದ ಹಿತ ಕಾಪಾಡಲು ಅಗತ್ಯ ಕ್ರಮಗಳನ್ನೂ ಸರ್ಕಾರಗಳು ತೆಗೆದುಕೊಳ್ಳಬೇಕು’ ಎಂದು ಸುಪ್ರೀಂಕೋರ್ಟ್​ ಹೇಳಿದೆ.

‘ಸ್ಥಳೀಯ ಗುರುತಿನ ಪುರಾವೆಗಳು ಇಲ್ಲ ಎನ್ನುವ ಕಾರಣಕ್ಕೆ ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಆಡಳಿತ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಬಾರದು. ಆಸ್ಪತ್ರೆಗಳಿಗೆ ರೋಗಿಗಳನ್ನು ದಾಖಲು ಮಾಡಿಕೊಳ್ಳುವ ಕುರಿತು ಕೇಂದ್ರ ಸರ್ಕಾರವು ಇನ್ನು 2 ವಾರಗಳ ಒಳಗೆ ರಾಷ್ಟ್ರೀಯ ನೀತಿಯೊಂದನ್ನು ರೂಪಿಸಬೇಕು. ಇದನ್ನು ಎಲ್ಲ ರಾಜ್ಯ ಸರ್ಕಾರಗಳೂ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಸುಪ್ರೀಂಕೋರ್ಟ್​ ಸೂಚಿಸಿದೆ.

‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಪ್ರಮಾಣದಲ್ಲಿ ಆಕ್ಸಿಜನ್ ದಾಸ್ತಾನು ಇರಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಊಹಿಸಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾದರೆ, ಅದನ್ನು ಎದುರಿಸಲು ಬೇಕಿರುವಷ್ಟು ತುರ್ತು ಬಳಕೆ ವಸ್ತುಗಳ ದಾಸ್ತಾನು ಇರಿಸಿಕೊಳ್ಳಬೇಕು. ಮುಂದಿನ ನಾಲ್ಕು ದಿನಗಳ ಒಳಗೆ ತುರ್ತು ದಾಸ್ತಾನು ಸಿದ್ಧವಾಗಬೇಕು. ಇದನ್ನು ಪ್ರತಿದಿನವೂ ಪರಿಶೀಲಿಸಬೇಕು. ಯಾವುದೇ ರಾಜ್ಯಕ್ಕೆ ಆಕ್ಸಿಜನ್ ಸರಬರಾಜಿನಲ್ಲಿ ತೊಂದರೆಯಾಗಬಾರದು’ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯ ಬಗ್ಗೆ ಸುಪ್ರೀಂಕೋರ್ಟ್​ ಸ್ವಯಂಪ್ರೇರಿತವಾಗಿ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸಿತು. ಈ ವೇಳೆ ಆಕ್ಸಿಜನ್, ಜೀವರಕ್ಷಕ ಔಷಧಿಗಳು ಮತ್ತು ಲಸಿಕೆಗಳ ಪೂರೈಕೆ ಬಗ್ಗೆ ಸುಪ್ರೀಂಕೋರ್ಟ್​ ಪರಾಮರ್ಶೆ ನಡೆಸಿತು.

ಹರಿಯಾಣ, ಒಡಿಶಾ ಲಾಕ್​ಡೌನ್ ಹರಿಯಾಣ ಮತ್ತು ಒಡಿಶಾ ರಾಜ್ಯಗಳಲ್ಲಿ ಲಾಕ್​ಡೌನ್ ಘೋಷಿಸಲಾಗಿದೆ. ಹರಿಯಾಣದಲ್ಲಿ ಒಂದು ವಾರ ಮತ್ತು ಒಡಿಶಾದಲ್ಲಿ 14 ದಿನಗಳ ಅವಧಿಗೆ ಲಾಕ್‌ಡೌನ್ ನಿರ್ಬಂಧ ಜಾರಿಯಲ್ಲಿರುತ್ತದೆ.

(Consider Lockdown to Curb 2nd Wave of Covid 19 Supreme Court to Centre State govts)

ಇದನ್ನೂ ಓದಿ: ವ್ಯಕ್ತಿ-ವ್ಯಕ್ತಿತ್ವ: ಕಡಿಮೆ ಮಾತು, ಖಚಿತ ನಿಲುವು- ಇದು ಸುಪ್ರೀಂಕೋರ್ಟ್​ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ಅವರ ಕಾರ್ಯಶೈಲಿ

ಇದನ್ನೂ ಓದಿ: ಆರ್​ಜೆಡಿಯ ಮಾಜಿ ಸಂಸದ, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮೊಹಮ್ಮದ್ ಶಹಾಬುದ್ದೀನ್ ಕೊವಿಡ್​ನಿಂದ ನಿಧನ

Published On - 10:05 am, Mon, 3 May 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್