Uttarakhand: ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ, ರೈಲ್ವೆ ಹಳಿಯಲ್ಲಿ ಸಿಲಿಂಡರ್ ಪತ್ತೆ

ಉತ್ತರಾಖಂಡದಲ್ಲಿ ದುಷ್ಕರ್ಮಿಗಳು ರೈಲು ಹಳಿ ತಪ್ಪಿಸುವ ಯತ್ನ ಮಾಡಿದ್ದಾರೆ. ರೂರ್ಕಿಯ ಧನೇರಾ ರೈಲು ನಿಲ್ದಾಣದ ಬಳಿಯ ರೈಲ್ವೆ ಹಳಿಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಗ್ಯಾಸ್ ಸಿಲಿಂಡರ್ ಪತ್ತೆಯಾದ ಸ್ಥಳವು ಬಂಗಾಳ ಇಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್‌ನ ಪ್ರಧಾನ ಕಚೇರಿಗೆ ಸಮೀಪದಲ್ಲಿರುವ ಕಾರಣ ಸೂಕ್ಷ್ಮ ಪ್ರದೇಶವಾಗಿದೆ. ಸೇನಾ ವಾಹನಗಳು ಮತ್ತು ಸಿಬ್ಬಂದಿಯನ್ನು ಸರಕು ರೈಲುಗಳ ಮೂಲಕ ವಿವಿಧ ಪೋಸ್ಟ್‌ಗಳಿಗೆ ಸಾಗಿಸುವುದರೊಂದಿಗೆ ಈ ಪ್ರದೇಶವನ್ನು ಮಿಲಿಟರಿಯವರು ಬಳಕೆ ಮಾಡುತ್ತಾರೆ.

Uttarakhand: ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ, ರೈಲ್ವೆ ಹಳಿಯಲ್ಲಿ ಸಿಲಿಂಡರ್ ಪತ್ತೆ
ಸಿಲಿಂಡರ್Image Credit source: News 9
Follow us
|

Updated on: Oct 13, 2024 | 11:22 AM

ಉತ್ತರಾಖಂಡದಲ್ಲಿ ದುಷ್ಕರ್ಮಿಗಳು ರೈಲು ಹಳಿ ತಪ್ಪಿಸುವ ಯತ್ನ ಮಾಡಿದ್ದಾರೆ. ರೂರ್ಕಿಯ ಧನೇರಾ ರೈಲು ನಿಲ್ದಾಣದ ಬಳಿಯ ರೈಲ್ವೆ ಹಳಿಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಗ್ಯಾಸ್ ಸಿಲಿಂಡರ್ ಪತ್ತೆಯಾದ ಸ್ಥಳವು ಬಂಗಾಳ ಇಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್‌ನ ಪ್ರಧಾನ ಕಚೇರಿಗೆ ಸಮೀಪದಲ್ಲಿರುವ ಕಾರಣ ಸೂಕ್ಷ್ಮ ಪ್ರದೇಶವಾಗಿದೆ. ಸೇನಾ ವಾಹನಗಳು ಮತ್ತು ಸಿಬ್ಬಂದಿಯನ್ನು ಸರಕು ರೈಲುಗಳ ಮೂಲಕ ವಿವಿಧ ಪೋಸ್ಟ್‌ಗಳಿಗೆ ಸಾಗಿಸುವುದು ಸೇರಿದಂತೆ ಈ ಪ್ರದೇಶವನ್ನು ಮಿಲಿಟರಿಯವರು ಹೆಚ್ಚಾಗಿ ಬಳಕೆ ಮಾಡುತ್ತಾರೆ.

ಹಳಿಗಳ ಮೇಲೆ ಸಿಲಿಂಡರ್ ಪತ್ತೆಯಾಗಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಹೆಚ್ಚಿಸಿದೆ. ಸಿಲಿಂಡರ್​ ಕಂಡ ಕೂಡಲೇ ಲೋಕೊ ಪೈಲಟ್​ ಬ್ರೇಕ್​ ಹಾಕಿ ರೈಲು ನಿಲ್ಲಿಸಿದ್ದಾರೆ. ಘಟನೆಯನ್ನು ರೈಲ್ವೆ ಅಧಿಕಾರಿಗಳಿಗೆ ತಿಳಿಸಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು ಸಿಲಿಂಡರ್ ತೆಗೆದಿದ್ದಾರೆ.

ಈ ಸಮಯದಲ್ಲಿ, ರೈಲ್ವೆ ಹಳಿಗಳ ಮೇಲೆ ಗ್ಯಾಸ್ ಸಿಲಿಂಡರ್ ಅನ್ನು ಯಾರು ಇರಿಸಿದರು ಎಂಬುದು ಸ್ಪಷ್ಟವಾಗಿಲ್ಲ.

ರೈಲ್ವೆ ಹಳಿ ಮೇಲೆ ಕಿಡಿಗೇಡಿಗಳು ಇರಿಸಿದ್ದ ಸಿಮೆಂಟ್ ಮೈಲಿಗಲ್ಲಿಗೆ ಗುದ್ದಿದ ರೈಲು ರಾಜಸ್ಥಾನದ ಅಜ್ಮೀರ್​ನಿಂದ ಅಹಮದಾಬಾದ್​ಗೆ ಹೋಗುವ ಮಾರ್ಗದಲ್ಲಿ ರೈಲಿನ ಹಳಿ ತಪ್ಪಿಸುವ ಪ್ರಯತ್ನ ನಡೆದಿದೆ. ರೈಲ್ವೆ ಹಳಿ ಮೇಲಿದ್ದ ಸಿಮೆಂಟ್​ ಮೈಲಿಗಲ್ಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದು ಹಳಿ ತಪ್ಪಿದೆ. ಕಾನ್ಪುರದಲ್ಲಿ ಭಾನುವಾರ ಕಾಳಿಂದಿ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನವನ್ನು ಕಿಡಿಗೇಡಿಗಳು ನಡೆಸಿದ್ದರು, ಹಳಿ ಮೇಲೆ ಸಿಲಿಂಡರ್, ಪೆಟ್ರೋಲ್​ ತುಂಬಿದ ಬಾಟಲಿಗಳು, ಗನ್​ ಪೌಡರ್ ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಇರಿಸಲಾಗಿತ್ತು.

ಮತ್ತಷ್ಟು ಓದಿ: ಕಾನ್ಪುರ: ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ, ಹಳಿಯಲ್ಲಿತ್ತು ಸಿಲಿಂಡರ್​

ರೈಲು ಸಿಲಿಂಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಅದು ಸ್ಫೋಟಗೊಂಡಿತ್ತು, ಆದರೆ ರೈಲಿಗಾಗಲಿ ಅಥವಾ ಪ್ರಯಾಣಿಕರಿಗಾಗಲಿ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ. ಲೊಕೊ ಪೈಲಟ್ ತುರ್ತು ಬ್ರೇಕ್ ಹಾಕಿದ್ದರಿಂದ ರೈಲು ಹಳಿಯಲ್ಲಿ ಅಡಚಣೆ ಉಂಟಾದ ಕಾರಣ ತಕ್ಷಣ ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ಗೆ ಎಚ್ಚರಿಕೆ ನೀಡಿ ಸಂಪೂರ್ಣ ತಪಾಸಣೆ ನಡೆಸಿದ ನಂತರ ದೊಡ್ಡ ರೈಲು ಅಪಘಾತವನ್ನು ತಪ್ಪಿಸಲಾಯಿತು.

ಅಜ್ಮೀರ್‌ನ ಫುಲೇರಾದಿಂದ ಗುಜರಾತ್‌ನ ಅಹಮದಾಬಾದ್‌ಗೆ ರೈಲು ಪ್ರಯಾಣಿಸುತ್ತಿದ್ದಾಗ ಮಂಗಳವಾರ ನಸುಕಿನ ವೇಳೆ ಈ ಘಟನೆ ನಡೆದಿದೆ. ರೈಲು ಶಾರಧನ ನಿಲ್ದಾಣದ ಬಳಿ ಇದ್ದಾಗ ಇಂಜಿನ್ ಹಳಿಯಲ್ಲಿ ಯಾವುದೋ ವಸ್ತುವಿಗೆ ಡಿಕ್ಕಿ ಹೊಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
"ಇಟ್ಟ ರಾಮನ ಬಾಣ ಹುಸಿಯಿಲ್ಲ" ಆತಂಕ ಮೂಡಿಸಿದ ಮೈಲಾರಲಿಂಗೇಶ್ವರ ಕಾರ್ಣಿಕ
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು
ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ