Uttarakhand: ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ, ರೈಲ್ವೆ ಹಳಿಯಲ್ಲಿ ಸಿಲಿಂಡರ್ ಪತ್ತೆ

ಉತ್ತರಾಖಂಡದಲ್ಲಿ ದುಷ್ಕರ್ಮಿಗಳು ರೈಲು ಹಳಿ ತಪ್ಪಿಸುವ ಯತ್ನ ಮಾಡಿದ್ದಾರೆ. ರೂರ್ಕಿಯ ಧನೇರಾ ರೈಲು ನಿಲ್ದಾಣದ ಬಳಿಯ ರೈಲ್ವೆ ಹಳಿಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಗ್ಯಾಸ್ ಸಿಲಿಂಡರ್ ಪತ್ತೆಯಾದ ಸ್ಥಳವು ಬಂಗಾಳ ಇಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್‌ನ ಪ್ರಧಾನ ಕಚೇರಿಗೆ ಸಮೀಪದಲ್ಲಿರುವ ಕಾರಣ ಸೂಕ್ಷ್ಮ ಪ್ರದೇಶವಾಗಿದೆ. ಸೇನಾ ವಾಹನಗಳು ಮತ್ತು ಸಿಬ್ಬಂದಿಯನ್ನು ಸರಕು ರೈಲುಗಳ ಮೂಲಕ ವಿವಿಧ ಪೋಸ್ಟ್‌ಗಳಿಗೆ ಸಾಗಿಸುವುದರೊಂದಿಗೆ ಈ ಪ್ರದೇಶವನ್ನು ಮಿಲಿಟರಿಯವರು ಬಳಕೆ ಮಾಡುತ್ತಾರೆ.

Uttarakhand: ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ, ರೈಲ್ವೆ ಹಳಿಯಲ್ಲಿ ಸಿಲಿಂಡರ್ ಪತ್ತೆ
ಸಿಲಿಂಡರ್
Image Credit source: News 9

Updated on: Oct 13, 2024 | 11:22 AM

ಉತ್ತರಾಖಂಡದಲ್ಲಿ ದುಷ್ಕರ್ಮಿಗಳು ರೈಲು ಹಳಿ ತಪ್ಪಿಸುವ ಯತ್ನ ಮಾಡಿದ್ದಾರೆ. ರೂರ್ಕಿಯ ಧನೇರಾ ರೈಲು ನಿಲ್ದಾಣದ ಬಳಿಯ ರೈಲ್ವೆ ಹಳಿಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಗ್ಯಾಸ್ ಸಿಲಿಂಡರ್ ಪತ್ತೆಯಾದ ಸ್ಥಳವು ಬಂಗಾಳ ಇಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್‌ನ ಪ್ರಧಾನ ಕಚೇರಿಗೆ ಸಮೀಪದಲ್ಲಿರುವ ಕಾರಣ ಸೂಕ್ಷ್ಮ ಪ್ರದೇಶವಾಗಿದೆ.
ಸೇನಾ ವಾಹನಗಳು ಮತ್ತು ಸಿಬ್ಬಂದಿಯನ್ನು ಸರಕು ರೈಲುಗಳ ಮೂಲಕ ವಿವಿಧ ಪೋಸ್ಟ್‌ಗಳಿಗೆ ಸಾಗಿಸುವುದು ಸೇರಿದಂತೆ ಈ ಪ್ರದೇಶವನ್ನು ಮಿಲಿಟರಿಯವರು ಹೆಚ್ಚಾಗಿ ಬಳಕೆ ಮಾಡುತ್ತಾರೆ.

ಹಳಿಗಳ ಮೇಲೆ ಸಿಲಿಂಡರ್ ಪತ್ತೆಯಾಗಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಹೆಚ್ಚಿಸಿದೆ. ಸಿಲಿಂಡರ್​ ಕಂಡ ಕೂಡಲೇ ಲೋಕೊ ಪೈಲಟ್​ ಬ್ರೇಕ್​ ಹಾಕಿ ರೈಲು ನಿಲ್ಲಿಸಿದ್ದಾರೆ. ಘಟನೆಯನ್ನು ರೈಲ್ವೆ ಅಧಿಕಾರಿಗಳಿಗೆ ತಿಳಿಸಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು ಸಿಲಿಂಡರ್ ತೆಗೆದಿದ್ದಾರೆ.

ಈ ಸಮಯದಲ್ಲಿ, ರೈಲ್ವೆ ಹಳಿಗಳ ಮೇಲೆ ಗ್ಯಾಸ್ ಸಿಲಿಂಡರ್ ಅನ್ನು ಯಾರು ಇರಿಸಿದರು ಎಂಬುದು ಸ್ಪಷ್ಟವಾಗಿಲ್ಲ.

ರೈಲ್ವೆ ಹಳಿ ಮೇಲೆ ಕಿಡಿಗೇಡಿಗಳು ಇರಿಸಿದ್ದ ಸಿಮೆಂಟ್ ಮೈಲಿಗಲ್ಲಿಗೆ ಗುದ್ದಿದ ರೈಲು
ರಾಜಸ್ಥಾನದ ಅಜ್ಮೀರ್​ನಿಂದ ಅಹಮದಾಬಾದ್​ಗೆ ಹೋಗುವ ಮಾರ್ಗದಲ್ಲಿ ರೈಲಿನ ಹಳಿ ತಪ್ಪಿಸುವ ಪ್ರಯತ್ನ ನಡೆದಿದೆ. ರೈಲ್ವೆ ಹಳಿ ಮೇಲಿದ್ದ ಸಿಮೆಂಟ್​ ಮೈಲಿಗಲ್ಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದು ಹಳಿ ತಪ್ಪಿದೆ. ಕಾನ್ಪುರದಲ್ಲಿ ಭಾನುವಾರ ಕಾಳಿಂದಿ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನವನ್ನು ಕಿಡಿಗೇಡಿಗಳು ನಡೆಸಿದ್ದರು, ಹಳಿ ಮೇಲೆ ಸಿಲಿಂಡರ್, ಪೆಟ್ರೋಲ್​ ತುಂಬಿದ ಬಾಟಲಿಗಳು, ಗನ್​ ಪೌಡರ್ ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಇರಿಸಲಾಗಿತ್ತು.

ಮತ್ತಷ್ಟು ಓದಿ: ಕಾನ್ಪುರ: ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ, ಹಳಿಯಲ್ಲಿತ್ತು ಸಿಲಿಂಡರ್​

ರೈಲು ಸಿಲಿಂಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಅದು ಸ್ಫೋಟಗೊಂಡಿತ್ತು, ಆದರೆ ರೈಲಿಗಾಗಲಿ ಅಥವಾ ಪ್ರಯಾಣಿಕರಿಗಾಗಲಿ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ. ಲೊಕೊ ಪೈಲಟ್ ತುರ್ತು ಬ್ರೇಕ್ ಹಾಕಿದ್ದರಿಂದ ರೈಲು ಹಳಿಯಲ್ಲಿ ಅಡಚಣೆ ಉಂಟಾದ ಕಾರಣ ತಕ್ಷಣ ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ಗೆ ಎಚ್ಚರಿಕೆ ನೀಡಿ ಸಂಪೂರ್ಣ ತಪಾಸಣೆ ನಡೆಸಿದ ನಂತರ ದೊಡ್ಡ ರೈಲು ಅಪಘಾತವನ್ನು ತಪ್ಪಿಸಲಾಯಿತು.

ಅಜ್ಮೀರ್‌ನ ಫುಲೇರಾದಿಂದ ಗುಜರಾತ್‌ನ ಅಹಮದಾಬಾದ್‌ಗೆ ರೈಲು ಪ್ರಯಾಣಿಸುತ್ತಿದ್ದಾಗ ಮಂಗಳವಾರ ನಸುಕಿನ ವೇಳೆ ಈ ಘಟನೆ ನಡೆದಿದೆ. ರೈಲು ಶಾರಧನ ನಿಲ್ದಾಣದ ಬಳಿ ಇದ್ದಾಗ ಇಂಜಿನ್ ಹಳಿಯಲ್ಲಿ ಯಾವುದೋ ವಸ್ತುವಿಗೆ ಡಿಕ್ಕಿ ಹೊಡೆದಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us