Constitution Day 2021: ಸಂಸತ್ ಭಾಷಣದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ; ಸಂವಿಧಾನ ಆಧುನಿಕ ಭಗವದ್ಗೀತೆ ಎಂದ ಓಂ ಬಿರ್ಲಾ
PM Narendra Modi Speech: ಸಂವಿಧಾನದ ಮೂಲಕ ದೇಶದಲ್ಲಿನ ರಾಜಪ್ರಭುತ್ವದ ರಾಜ್ಯಗಳನ್ನು ಒಂದುಗೂಡಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಸಂಸತ್ತಿನಲ್ಲಿ ಸಂವಿಧಾನ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
ನವದೆಹಲಿ: ಸಂವಿಧಾನ ದಿನಾಚರಣೆ ಪ್ರಯುಕ್ತ ಸಂಸತ್ನಲ್ಲಿ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 1950ರ ನಂತರ ಸಂವಿಧಾನದ ದಿನವನ್ನು ಪ್ರತಿ ವರ್ಷ ಸಂವಿಧಾನದ ರಚನೆಯಲ್ಲಿ ಏನಾಯಿತು ಎಂಬುದರ ಕುರಿತು ಎಲ್ಲರಿಗೂ ತಿಳಿಸಲು ಆಚರಿಸಬೇಕಾಗಿತ್ತು. ಆದರೆ ಕೆಲವರು ಹಾಗೆ ಮಾಡಲಿಲ್ಲ ಎಂದು ಕಾಂಗ್ರೆಸ್ ಅನ್ನು ಟೀಕಿಸಿದ್ದಾರೆ. ನಾವು ಮಾಡುತ್ತಿರುವುದು ಸರಿಯೋ ಇಲ್ಲವೋ ಎಂಬುದನ್ನು ಮೌಲ್ಯಮಾಪನ ಮಾಡಲು ಈ ಸಂವಿಧಾನ ದಿನವನ್ನು ಆಚರಿಸಬೇಕು ಎಂದು ಮೋದಿ ಹೇಳಿದ್ದಾರೆ.
ಸಂಸತ್ತಿನಲ್ಲಿ ತಮ್ಮ ಭಾಷಣದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ 26/11 ಮುಂಬೈ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಮುಂಬೈನಲ್ಲಿ ನಡೆದ 26/11 ಭಯೋತ್ಪಾದಕ ದಾಳಿಯ ವಾರ್ಷಿಕೋತ್ಸವವಾದ ಇಂದು ಉಗ್ರರ ವಿರುದ್ಧ ಹೋರಾಡುವಾಗ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ದೇಶದ ಎಲ್ಲಾ ವೀರ ಸೈನಿಕರಿಗೆ ನಾನು ಗೌರವ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ನಮ್ಮ ಸಂವಿಧಾನವು ನಮ್ಮ ವೈವಿಧ್ಯಮಯ ದೇಶವನ್ನು ಹಿಡಿದಿಟ್ಟುಕೊಂಡಿದೆ. ಹಲವಾರು ಅಡೆತಡೆಗಳ ನಂತರ ಈ ಸಂವಿಧಾನವನ್ನು ರಚಿಸಲಾಗಿದೆ. ಸಂವಿಧಾನದ ಮೂಲಕ ದೇಶದಲ್ಲಿನ ರಾಜಪ್ರಭುತ್ವದ ರಾಜ್ಯಗಳನ್ನು ಒಂದುಗೂಡಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಸಂಸತ್ತಿನಲ್ಲಿ ಸಂವಿಧಾನ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
ಸಂಸತ್ತಿನಲ್ಲಿ ಸಂವಿಧಾನ ದಿನಾಚರಣೆಯ ಸಂಭ್ರಮ ಆರಂಭವಾಗಿದೆ. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಇತರ ರಾಜಕೀಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತೀಯ ಸಂವಿಧಾನವು ವೈವಿಧ್ಯಮಯ ದೇಶದ ಸಂಕೇತವಾಗಿದೆ ಎಂದು ಹೇಳಿದ್ದಾರೆ.
The Preamble summarises the philosophy of the Constitution in which people preferred our country to be a democratic republic. It has been our firm belief that people have been at the centre of our development: Vice-President M Venkaiah Naidu on #ConstitutionDay pic.twitter.com/k5GG0feZ05
— ANI (@ANI) November 26, 2021
ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಸಂವಿಧಾನ ದಿನವನ್ನು ಆಚರಿಸುತ್ತಿದೆ. ಸಂಸತ್ತಿನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಷಣ ಮಾಡಿದ್ದಾರೆ.
ಸಂವಿಧಾನ ದಿನವು ಈ ಸದನಕ್ಕೆ ವಂದಿಸುವ ದಿನವಾಗಿದೆ. ಭಾರತದ ಅನೇಕ ನಾಯಕರು ನಮಗೆ ಭಾರತದ ಸಂವಿಧಾನವನ್ನು ನೀಡಲು ಸಾಕಷ್ಟು ಪ್ರಯತ್ನಗಳನ್ನು ಮಾಡಿದ್ದಾರೆ. ಮಹಾತ್ಮ ಗಾಂಧಿ ಮತ್ತು ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಹೋರಾಡಿದ ಎಲ್ಲರಿಗೂ ನಾವು ಗೌರವ ಸಲ್ಲಿಸುತ್ತೇವೆ ಎಂದು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಹೇಳಿದ್ದಾರೆ.
Constitution Day is celebrated in the Central Hall of the Parliament
President Ram Nath Kovind, Vice President M Venkaiah Naidu, Prime Minister Narendra Modi, Lok Sabha Speaker Om Birla and others are taking part in the event
(Source: Sansad TV) pic.twitter.com/SOSNd84vby
— ANI (@ANI) November 26, 2021
ಭಾರತದ ಸಂವಿಧಾನವು ನಮಗೆ ಭಗವದ್ಗೀತೆಯ ಆಧುನಿಕ ಆವೃತ್ತಿಯಂತಿದೆ. ಇದು ರಾಷ್ಟ್ರಕ್ಕಾಗಿ ಕೆಲಸ ಮಾಡಲು ನಮ್ಮನ್ನು ಪ್ರೇರೇಪಿಸುತ್ತದೆ. ನಾವು ಪ್ರತಿಯೊಬ್ಬರೂ ದೇಶಕ್ಕಾಗಿ ಕೆಲಸ ಮಾಡಲು ಬದ್ಧರಾದಾಗ ‘ಏಕ ಭಾರತ, ಶ್ರೇಷ್ಠ ಭಾರತ’ವನ್ನು ನಿರ್ಮಿಸಬಹುದು ಎಂದು ಸಂಸತ್ನಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.
The Constitution of India is like a modern version of ‘The Gita’ for us that motivates us to work for the nation. If each one of us commits to working for the country then we can build ‘Ek Bharat, Shrestha Bharat’: Lok Sabha Speaker Om Birla pic.twitter.com/ryADDHljBD
— ANI (@ANI) November 26, 2021
ದೆಹಲಿಯ ಸಂಸತ್ ಭವನದಲ್ಲಿ ಸಂವಿಧಾನ ದಿನ ಆಚರಣೆ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಜೋಶಿ ಪಾಲ್ಗೊಂಡಿದ್ದರು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಾಗತಿಸಿದರು.
ಪ್ರಧಾನಿ ನರೇಂದ್ರ ಮೋದಿಯ ಭಾಷಣವನ್ನು 14 ವಿಪಕ್ಷಗಳು ಬಹಿಷ್ಕರಿಸಿವೆ. ಕಾಂಗ್ರೆಸ್, ಟಿಎಂಸಿ, ಶಿವಸೇನೆ, ಎನ್ಸಿಪಿ, ಎಸ್ಪಿ, ಡಿಎಂಕೆ ಪಕ್ಷಗಳು ಈ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ.
ಇದನ್ನೂ ಓದಿ: Constitution Day 2021: ಸಂಸತ್ನಲ್ಲಿ ಸಂವಿಧಾನ ದಿನಾಚರಣೆ; ಪ್ರಧಾನಿ ಮೋದಿ ಭಾಷಣ ಬಹಿಷ್ಕಾರಕ್ಕೆ ವಿಪಕ್ಷಗಳ ನಿರ್ಧಾರ
ನೋಯ್ಡಾ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಷಣದ 10 ಅಂಶಗಳು
Published On - 12:07 pm, Fri, 26 November 21