Constitution Day 2022: ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ಸಂವಿಧಾನ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿ

ಭಾರತದಲ್ಲಿ ಇಂದು ಸಂವಿಧಾನ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಈ ಸಮಯದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಸುಪ್ರೀಂ ಕೋರ್ಟ್‌ನಲ್ಲಿ ಸಂವಿಧಾನ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದು, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕೂಡ ಉಪಸ್ಥಿತರಿರುತ್ತಾರೆ. 1949ರಲ್ಲಿ ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ 2015 ರಿಂದ ನವೆಂಬರ್ 26 ಅನ್ನು ಸಂವಿಧಾನ ದಿನವೆಂದು ಆಚರಣೆ ಮಾಡಲಾಗುತ್ತಿದೆ.

Constitution Day 2022: ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ಸಂವಿಧಾನ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿ
ಈ ತಿಂಗಳ ಆರಂಭದಲ್ಲಿ ಜಿ20 ಆತಿಥ್ಯ ಭಾರತಕ್ಕೆ ದೊರಕಿದ್ದು, ಮುಂದಿನ ವರ್ಷ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಸಂಬಂಧಪಟ್ಟಂತೆ ಚರ್ಚಿಸಲು, ಸಲಹೆಗಳನ್ನು ನೀಡಲು ಎಲ್ಲಾ ನಾಯಕರ ಬಳಿ ಸಹಕಾರ ಕೋರಿದರು.
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 26, 2022 | 10:28 AM

ದೆಹಲಿ: ಭಾರತದಲ್ಲಿ ಇಂದು ಸಂವಿಧಾನ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಈ ಸಮಯದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಸುಪ್ರೀಂ ಕೋರ್ಟ್‌ನಲ್ಲಿ ಸಂವಿಧಾನ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದು, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕೂಡ ಉಪಸ್ಥಿತರಿರುತ್ತಾರೆ. 1949ರಲ್ಲಿ ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ 2015 ರಿಂದ ನವೆಂಬರ್ 26 ಅನ್ನು ಸಂವಿಧಾನ ದಿನವೆಂದು ಆಚರಣೆ ಮಾಡಲಾಗುತ್ತಿದೆ.

ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿಯವರು ಇ-ಕೋರ್ಟ್ ಯೋಜನೆಯಡಿಯಲ್ಲಿ ವಿವಿಧ ಹೊಸ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯು ನ್ಯಾಯಾಲಯಗಳ ICT ಸಕ್ರಿಯಗೊಳಿಸುವಿಕೆಯ ಮೂಲಕ ದಾವೆದಾರರು, ವಕೀಲರು ಮತ್ತು ನ್ಯಾಯಾಂಗಕ್ಕೆ ಸೇವೆಗಳನ್ನು ಒದಗಿಸುವ ಪ್ರಯತ್ನವಾಗಿದೆ. ವರ್ಚುವಲ್ ಜಸ್ಟೀಸ್ ಕ್ಲಾಕ್, JustIS ಮೊಬೈಲ್ ಅಪ್ಲಿಕೇಶನ್ 2.0, ಡಿಜಿಟಲ್ ಕೋರ್ಟ್ ಮತ್ತು S3WaaS ವೆಬ್‌ಸೈಟ್‌ಗಳ ಅನಾವರಣ ಮಾಡಲಿದ್ದಾರೆ ಎಂದು ಕೋರ್ಟ್ ಮುಖ್ಯ ಕಚೇರಿ ಹೇಳಿದೆ.

ಈ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ಮೋದಿಯವರು ತಮ್ಮ ಟ್ವೀಟ್‌ನಲ್ಲಿ, ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇಂದು, ಸಂವಿಧಾನದ ದಿನದಂದು, ನಮಗೆ ನಮ್ಮ ಸಂವಿಧಾನವನ್ನು ನೀಡಿದ ಮಹಾನ್ ವ್ಯಕ್ತಿಗಳಿಗೆ ನಾವು ಗೌರವ ಸಲ್ಲಿಸುತ್ತೇವೆ ಮತ್ತು ನಮ್ಮ ರಾಷ್ಟ್ರಕ್ಕಾಗಿ ಅವರ ಚಿಂತನೆಯನ್ನು ಪೂರೈಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ ಎಂದು ಹೇಳಿದರು.

ಇದನ್ನು ಓದಿ:  ನವೆಂಬರ್​ 26 ಸಂವಿಧಾನ ದಿನವೆಂದು ಏಕೆ ಆಚರಿಸುತ್ತಾರೆ? ಇದರ ಇತಿಹಾಸ, ಇಲ್ಲಿದೆ ಮಾಹಿತಿ

ವರ್ಚುವಲ್ ಜಸ್ಟೀಸ್ ಗಡಿಯಾರವು ನ್ಯಾಯಾಲಯದ ಮಟ್ಟದಲ್ಲಿ ನ್ಯಾಯ ವಿತರಣಾ ವ್ಯವಸ್ಥೆಯ ಪ್ರಮುಖ ಅಂಕಿಅಂಶಗಳನ್ನು ಪ್ರದರ್ಶಿಸಲು ಒಂದು ಉಪಕ್ರಮವೆಂದು ಹೇಳಲಾಗುತ್ತದೆ, ಇದು ಪ್ರಕರಣಗಳು, ವಿಲೇವಾರಿ ಮಾಡಿದ ಪ್ರಕರಣಗಳ ಬಾಕಿಯಿರುವ ವಿವರಗಳನ್ನು ನೀಡುತ್ತದೆ, JustIS ಮೊಬೈಲ್ ಅಪ್ಲಿಕೇಶನ್ 2.0 ನ್ಯಾಯಾಂಗ ಅಧಿಕಾರಿಗಳಿಗೆ ಲಭ್ಯವಿರುವ ಸಾಧನವಾಗಿದೆ. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಬಗ್ಗೆ ಮತ್ತು ಅವುಗಳನ್ನು ವಿಲೇವಾರಿಯ ಮೇಲ್ವಿಚಾರಣೆ ಮಾಡುವ ಮೂಲಕ ಪರಿಣಾಮಕಾರಿಯಾಗಿ ಮಾಡಲಿದೆ.

ಡಿಜಿಟಲ್ ನ್ಯಾಯಾಲಯವು ಕಾಗದರಹಿತ ನ್ಯಾಯಾಲಯಗಳಿಗೆ ಪರಿವರ್ತನೆಯನ್ನು ಸಕ್ರಿಯಗೊಳಿಸಲು ನ್ಯಾಯಾಲಯದ ದಾಖಲೆಗಳನ್ನು ಡಿಜಿಟಲೀಕೃತ ರೂಪದಲ್ಲಿ ನ್ಯಾಯಾಧೀಶರಿಗೆ ಲಭ್ಯವಾಗುವಂತೆ ಮಾಡುವ ಒಂದು ಉಪಕ್ರಮವಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ.

ದೇಶದ ಸುದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್